ಉಡುಪಿ: ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರು ಗಣ್ಯರ ಉಪಸ್ಥಿತಿಯಲ್ಲಿ ಪುತ್ಥಳಿಯನ್ನು ಅನಾವರಣಗೊಳಿಸಿದರು.




