Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜನ್ನಾಡಿ ಮೂರುಕೈ ಬಳಿ ಕಾರು–ಬೈಕ್ ಅಪಘಾತ: ಸಹಸವಾರ ಸಾವು, ಸವಾರನಿಗೆ ಗಾಯ

Dhrishya News by Dhrishya News
28/09/2026
in ಸುದ್ದಿಗಳು
0
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಸಾಂದರ್ಭಿಕ ಚಿತ್ರ

0
SHARES
8
VIEWS
Share on FacebookShare on Twitter

ಕೋಟ, ಸೆ.28: ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಜನ್ನಾಡಿ ಮೂರುಕೈ ಬಳಿ ಕಾರು ಹಾಗೂ ಮೋಟಾರ್‌ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸಹಸವಾರ ಮೃತಪಟ್ಟಿದ್ದು, ಸವಾರ ಗಾಯಗೊಂಡ ಘಟನೆ ಸೆ.27ರಂದು ನಡೆದಿದೆ.

ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಸುರೇಶ ದೇವಾಡಿಗ ಅವರು ವಿದ್ಯುತ್ ಸಂಪರ್ಕ ಕಡಿತದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಸೌಡದಿಂದ ಮರ್ಜಿಗೆ ತೆರಳುತ್ತಿದ್ದರು. ಮಧ್ಯಾಹ್ನ ಸುಮಾರು 3 ಗಂಟೆಗೆ ಜನ್ನಾಡಿ ಮೂರುಕೈ ಬಳಿ ತಲುಪಿದಾಗ, ಕೋಟೇಶ್ವರ–ಹಾಲಾಡಿ ಮುಖ್ಯ ರಸ್ತೆಯಲ್ಲಿ ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ತೆರಳುತ್ತಿದ್ದ ಕಾರನ್ನು ಚಾಲಕ ರಾಘವೇಂದ್ರ ಮಯ್ಯ ಅವರು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ರಸ್ತೆಯ ತೀರ ಬಲಬದಿಗೆ ತೆರಳಿ ಹಾಲಾಡಿ ಕಡೆಯಿಂದ ಕೋಟೇಶ್ವರ ಕಡೆಗೆ ಬರುತ್ತಿದ್ದ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೋಟಾರ್‌ಸೈಕಲ್‌ನಲ್ಲಿ ರಾಮ ಮಡಿವಾಳ ಅವರು ಸವಾರರಾಗಿದ್ದು, ರಂಗ ಅವರು ಸಹಸವಾರರಾಗಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್ ಸುಮಾರು 50 ಮೀಟರ್‌ ದೂರ ಎಳೆದುಕೊಂಡು ಹೋಗಿ ನಿಂತಿದೆ. ಅಪಘಾತದಲ್ಲಿ ರಂಗ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ರಾಮ ಮಡಿವಾಳ ಅವರ ಎರಡೂ ಕಾಲುಗಳಿಗೆ ರಕ್ತಗಾಯಗಳಾಗಿವೆ.

ಗಾಯಾಳುಗಳನ್ನು ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ರಂಗ ಅವರು ಚಿಕಿತ್ಸೆ ಫಲಿಸದೆ ಸಂಜೆ 4.30ಕ್ಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ರಾಮ ಮಡಿವಾಳ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

Next Post

ಬ್ರಹ್ಮಾವರದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ಚಿಕಿತ್ಸೆ ಫಲಿಸದೆ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬ್ರಹ್ಮಾವರದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ಚಿಕಿತ್ಸೆ ಫಲಿಸದೆ ಸಾವು

ಬ್ರಹ್ಮಾವರದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ಚಿಕಿತ್ಸೆ ಫಲಿಸದೆ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026
ಶೀರೂರು ಮೂಲ ಮಠದಲ್ಲಿ  ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

ಶೀರೂರು ಮೂಲ ಮಠದಲ್ಲಿ ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

28/09/2026
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

28/09/2026

Recent News

imunify-bot-check