Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬೆಳ್ವೆಯಲ್ಲಿ 'ಅಂಗನ್ ಕಾ ಮಿಲನ್'

Dhrishya News by Dhrishya News
29/09/2026
in ಸುದ್ದಿಗಳು
0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ
0
SHARES
1
VIEWS
Share on FacebookShare on Twitter

ಉಡುಪಿ : ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ, ಸುಕನ್ಯಾ ಸಮೃದ್ಧಿ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗಳು ಅಂಗನವಾಡಿ ಕೇಂದ್ರಗಳ ಮೂಲಕವೇ ಸಮಾಜದ ಕಟ್ಟ ಕಡೆಯ ಮಗುವನ್ನು ತಲುಪುತ್ತಿವೆ. ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದಡಿ ಬೆಳ್ವೆಯ ವಾಸುಕಿ ಸಭಾ ಭವನದಲ್ಲಿ ನಡೆದ ‘ಅಂಗನ್ ಕಾ ಮಿಲನ್’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ ತುಂಬಿದೆ. ಅಂಗನವಾಡಿ ವ್ಯವಸ್ಥೆಯನ್ನು ಭವಿಷ್ಯ ಭಾರತ ನಿರ್ಮಾಣದ ಸಂಸ್ಕಾರ ಕೇಂದ್ರ ಎಂದು ಪರಿಗಣಿಸಿ ಸಾರ್ಥಕ ಸೇವಾ ಕಾರ್ಯದಲ್ಲಿ ತೊಡಗಿರುವ ಮಹಿಳಾ ಮೋರ್ಚಾದ ಪ್ರಯತ್ನ ಶ್ಲಾಘನೀಯ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಅವರು ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಮತ್ತು ಸಂಸ್ಕಾರದ ಮೊದಲ ದೀಪ. ಅವರ ಅತ್ಯಮೂಲ್ಯ ಸೇವೆಯನ್ನು ಗುರುತಿಸುವುದೇ ಈ ‘ಅಂಗಳದ ಉತ್ಸವ’ ಕಾರ್ಯಕ್ರಮದ ಉದ್ದೇಶ. ‘ಸೇವೆಯೇ ಸಂಘಟನೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಿಳಾ ಮೋರ್ಚಾ ನಿರಂತರವಾಗಿ ವೈವಿದ್ಯಮಯ ಸೇವಾ ಕಾರ್ಯಗಳನ್ನು ಮಾಡುತ್ತಿದೆ’ ಎಂದರು.

ಕಾರ್ಯಕ್ರಮದಲ್ಲಿ 23 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸನ್ಮಾನಿಸಲಾಯಿತು. ಸಂಕೇತಿಕವಾಗಿ ಅಂಗನವಾಡಿ ಮಕ್ಕಳಿಗೆ ಕಲಿಕಾ ಪರಿಕರಗಳನ್ನು ವಿತರಿಸಲಾಯಿತು.

ಕೇಂದ್ರ ಸರ್ಕಾರದ ಯೋಜನೆಯ ಫಲಾನುಭವಿಗಳ ಅನಿಸಿಕೆಗಳನ್ನು ಆಲಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ‘ಸೇವಾ ಸಂಕಲ್ಪ ಅಭಿಯಾನ’ದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಸ್ಥಳೀಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಾಧಾ ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ರಮೇಶ್ ವಂದಿಸಿದರು. ಕುಂದಾಪುರ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಸುದರ್ಶನ್ ಕಾರ್ಯಕ್ರಮ ನಿರೂಪಿಸಿದರು.

Previous Post

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026
ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

ವಿಶ್ವ ಹೃದಯ ದಿನ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಹೃದಯ ಆರೋಗ್ಯ ಜಾಗೃತಿ ಶಿಲ್ಪ ಅನಾವರಣ

29/09/2026
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಭೇಟಿ

29/09/2026

Recent News

imunify-bot-check