ಮಲ್ಪೆ: ತೆಂಕನಿಡಿಯೂರು ಗ್ರಾಮದ ಲಕ್ಷ್ಮಿನಗರದ 2ನೇ ಕ್ರಾಸ್ ಬಳಿ ಸರ್ಕಾರಿ ಹಾಡಿಯಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಮಲ್ಪೆ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.
ಸೆ.29ರಂದು ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅನೀಲಕುಮಾರ್ ಡಿ. ಅವರು ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.
ಮಾಹಿತಿ ಆಧರಿಸಿ ಸ್ಥಳಕ್ಕೆ ದಾಳಿ ನಡೆಸಿದಾಗ ಕೆಲವರು ಪರಾರಿಯಾಗಿದ್ದು, ನಂದಕಿಶೋರ್, ಶುಭತ್, ಮಹೇಶ್, ಆರ್ಥಿಕ್ ಹಾಗೂ ಪಾಂಡುರಂಗ ನಾಯ್ಕ್ ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳದಿಂದ ₹3,500 ನಗದು, 3 ಜೀವಂತ ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ್ದ 2 ಬಾಳು (ಕತ್ತಿ), 4 ಮೊಬೈಲ್ ಫೋನ್‌ಗಳು ಹಾಗೂ ಮೋಟಾರ್ ಸೈಕಲ್ ಅನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






