ಕುಂದಾಪುರ: ಕಾಲೇಜಿಗೆ ತೆರಳಿದ್ದ 20 ವರ್ಷದ ಯುವಕನೋರ್ವ ಮನೆಗೆ ವಾಪಸ್ ಬಾರದೆ ನಾಪತ್ತೆಯಾಗಿರುವ ಘಟನೆ ಕಾವ್ರಾಡಿ ಗ್ರಾಮದಲ್ಲಿ ನಡೆದಿದೆ.
ಕಾವ್ರಾಡಿ ಗ್ರಾಮದ ಉದಯ್ ಶೇಟ್ (45) ಅವರ ಪುತ್ರ ಅನ್ವಿತ್ (20) ಸೆಪ್ಟೆಂಬರ್ 30ರಂದು ಬೆಳಿಗ್ಗೆ 7:30ರ ಸುಮಾರಿಗೆ ಕಾಲೇಜು ಸಮವಸ್ತ್ರ ಧರಿಸಿಕೊಂಡು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಮನೆಯಿಂದ ಕಾಲೇಜಿಗೆ ತೆರಳಿದ್ದನು. ಆದರೆ ಕಾಲೇಜಿಗೆ ತೆರಳಿದ ಬಳಿಕ ಮನೆಗೆ ವಾಪಸ್ ಬಂದಿಲ್ಲ.
ಕುಟುಂಬಸ್ಥರು ಹುಡುಕಾಟ ನಡೆಸಿದರೂ ಅನ್ವಿತ್ ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕ ಕಾಣೆಯಾಗಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






