ಕಾರ್ಕಳ : ಅಕ್ಟೋಬರ್ 06 :ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾರಾಡಿ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿರುತ್ತದೆ.
ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹಾಗೂ ಅನುದಾನ ತರುವಲ್ಲಿ ಸಹಕರಿಸಿದ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಗ್ರಾಮಸ್ಥರ ಪರವಾಗಿ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಅರುಣ್ ಪ್ರಸಾದ್ ಜೈನ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.







