Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

Dhrishya News by Dhrishya News
09/10/2026
in ಸುದ್ದಿಗಳು
0
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ
0
SHARES
2
VIEWS
Share on FacebookShare on Twitter

ಉಡುಪಿ:ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಹಾಗೂ ಲೋ ವೋಲ್ಟೇಜ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ
ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸುವಂತೆ ಇಂಧನ ಸಚಿವ ಕೆ. ಜೆ. ಜಾರ್ಜ್ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

ಜಿಲ್ಲಾ ಕೇಂದ್ರವಾದ ಉಡುಪಿ ವಿಧಾನಸಭಾ ಕ್ಷೇತ್ರವು ಶಿಕ್ಷಣ, ವೈದ್ಯಕೀಯ, ಮೀನುಗಾರಿಕೆ, ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ನಗರೀಕರಣ, ಹೊಸ ಬಡಾವಣೆಗಳು ಮತ್ತು ವಸತಿ ಸಮುಚ್ಚಯ ನಿರ್ಮಾಣ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಚಟುವಟಿಕೆಗಳ ವಿಸ್ತರಣೆಯಿಂದ ಕ್ಷೇತ್ರದಲ್ಲಿ ವಿದ್ಯುತ್ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಉಡುಪಿಯ ನಗರ ಹಾಗೂ ಬ್ರಹ್ಮಾವರ ಭಾಗದ ಗ್ರಾಮಾಂತರ ಪ್ರದೇಶಗಳಲ್ಲಿ ಕಡಿಮೆ ವೋಲ್ಟೇಜ್, ವಿದ್ಯುತ್ ವ್ಯತ್ಯಯ ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ಮೇಲಿನ ಹೆಚ್ಚಿನ ಒತ್ತಡದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಮೂಲಸೌಕರ್ಯಗಳನ್ನು ಸಮಗ್ರವಾಗಿ ಬಲಪಡಿಸಲು ಹೊಸ ಟ್ರಾನ್ಸ್‌ಫಾರ್ಮರ್‌ಗಳ ಅಳವಡಿಕೆ, ಹೊಸ ಸಬ್ ಸ್ಟೇಷನ್ ಗಳ ನಿರ್ಮಾಣ, ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ಕಾರ್ಯಗಳು ಆಗಬೇಕಾಗಿದೆ.

ಅನುದಾನದ ಮೂಲಕ ಅಗತ್ಯವಿರುವ ಕಡೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವುದು, ಹಾಲಿ ಟ್ರಾನ್ಸ್‌ಫಾರ್ಮರ್‌ಗಳ ಸಾಮರ್ಥ್ಯ ಹೆಚ್ಚಿಸುವುದು, ಹಳೆಯ ವಿದ್ಯುತ್ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ಹೊಸ ಕೇಬಲ್ ಮತ್ತು ವಿತರಣಾ ಮಾರ್ಗಗಳನ್ನು ನಿರ್ಮಿಸುವ ಅಗತ್ಯವಿದೆ. ಅದೇ ರೀತಿ ಕಡಿಮೆ ವೋಲ್ಟೇಜ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಮತ್ತು ವೇಗವಾಗಿ ಬೆಳೆಯುತ್ತಿರುವ ಹೊಸ ಬಡಾವಣೆಗಳಿಗೆ ಅಗತ್ಯ ವಿದ್ಯುತ್ ಮೂಲಸೌಕರ್ಯ ಒದಗಿಸುವುದು ಪ್ರಮುಖ ಆದ್ಯತೆಯಾಗಬೇಕು. ಪ್ರಮುಖ ರಸ್ತೆ ಹಾಗೂ ಜಂಕ್ಷನ್‌ಗಳಲ್ಲಿ ರಸ್ತೆ ದೀಪ ಮತ್ತು ಹೈಮಾಸ್ಟ್ ದೀಪಗಳ ವ್ಯವಸ್ಥೆಯನ್ನು ಕೂಡ ಬಲಪಡಿಸಬೇಕಾಗಿದೆ.

ಉಡುಪಿ ನಗರವು ಜಿಲ್ಲಾ ಕೇಂದ್ರವಾಗಿರುವುದರಿಂದ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಅತ್ಯಂತ ಅವಶ್ಯಕವಾಗಿದೆ. ಕ್ಷೇತ್ರದ ಪ್ರಸ್ತುತ ಹಾಗೂ ಮುಂದಿನ ಹಲವು ವರ್ಷಗಳ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಮೆಸ್ಕಾಂಗೆ ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಅವರು ಸನ್ಮಾನ್ಯ ಇಂಧನ ಸಚಿವರಿಗೆ ಮನವಿ ಮಾಡಿದ್ದಾರೆ.

Previous Post

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

Next Post

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check