Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

Dhrishya News by Dhrishya News
09/10/2026
in मौसम
0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ
0
SHARES
0
VIEWS
Share on FacebookShare on Twitter

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ಬಾರಿ 5ನೇ ವರ್ಷದ “ಉಡುಪಿ ಉಚ್ಚಿಲ ದಸರಾ–2026” ಮಹೋತ್ಸವವು ಅಕ್ಟೋಬರ್ 11ರಿಂದ 21ರವರೆಗೆ ಅದ್ಧೂರಿಯಾಗಿ ನಡೆಯಲಿದೆ.
ದ.ಕ. ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲದ ನೇತೃತ್ವದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ನಡೆಯಲಿರುವ ದಸರಾ ಮಹೋತ್ಸವದಲ್ಲಿ ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 11 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 10ರಂದು ಸಂಜೆ 6.30ಕ್ಕೆ ಪಡುಬಿದ್ರಿಯಿಂದ ಕಾಪು ಸಮುದ್ರತೀರದವರೆಗೆ ಅಲಂಕರಿಸಲಾಗಿರುವ ವಿದ್ಯುದ್ದೀಪಾಲಂಕಾರದ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 11ರಂದು ಬೆಳಗ್ಗೆ 9 ಗಂಟೆಗೆ ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ವಿಗ್ರಹಗಳ ಪ್ರತಿಷ್ಠಾಪನೆ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ವಿವಿಧ ವಸ್ತು ಪ್ರದರ್ಶನ, ಮಾಹಿತಿ ಶಿಬಿರ, ಜಾತ್ರಾ ಮೈದಾನ ಹಾಗೂ ವಿಶೇಷ ಕಲಾಕೃತಿಗಳ ಪ್ರದರ್ಶನಕ್ಕೆ ಚಾಲನೆ ದೊರೆಯಲಿದೆ.

ಅದೇ ದಿನ ಬೆಳಗ್ಗೆ 10.30ಕ್ಕೆ ಉಡುಪಿ ಉಚ್ಚಿಲ ದಸರಾ–2026ರ ಅಧಿಕೃತ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 12ರಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಮಹಿಳಾ ದಸರಾ ಉದ್ಘಾಟನೆ ನಡೆಯಲಿದ್ದು, ತುಳು ಭಾಷೆಗೆ ರಾಜ್ಯದ 2ನೇ ಆಡಳಿತ ಭಾಷೆಯ ಸ್ಥಾನಮಾನ ದೊರಕಿಸಲು ಕೈಗೊಂಡ ಕ್ರಮಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನಾ ಸಮಾರಂಭವೂ ನಡೆಯಲಿದೆ.

ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ವೈವಿಧ್ಯ
ದಸರಾ ಮಹೋತ್ಸವದ 11 ದಿನಗಳಲ್ಲೂ ಚಂಡಿಕಾಹೋಮ, ಅನ್ನಸಂತರ್ಪಣೆ, ಸಾಮೂಹಿಕ ಕುಂಕುಮಾರ್ಚನೆ, ಭಜನಾ ಕಾರ್ಯಕ್ರಮ, ಧಾರ್ಮಿಕ ಸಭೆ, ಪ್ರವಚನ ಹಾಗೂ ಕಲ್ಪೋಕ್ತ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಭಕ್ತಿ ಸಂಗೀತ, ಭಜನ್ ಫ್ಯೂಶನ್, ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪಕ, ಶಾಸ್ತ್ರೀಯ ಸಂಗೀತ, ವೀಣಾವಾದನ, ಸ್ಯಾಕ್ಸೋಫೋನ್ ವಾದನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ‘ALL OK’ ತಂಡದ ಸಂಗೀತ ರಸಮಂಜರಿ, ಆಳ್ವಾಸ್ ಸಾಂಸ್ಕೃತಿಕ ವೈಭವ ಹಾಗೂ ವಿವಿಧ ತುಳು ನಾಟಕಗಳೂ ಪ್ರಮುಖ ಆಕರ್ಷಣೆಯಾಗಲಿವೆ.

ಇದರೊಂದಿಗೆ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ, ಮಕ್ಕಳ ಛದ್ಮವೇಷ ಸ್ಪರ್ಧೆ, ಮಹಿಳೆಯರ ಹಾಗೂ ಪುರುಷರ ಹುಲಿಕುಣಿತ ಸ್ಪರ್ಧೆ, ಕಿನ್ನಿ ಪಿಲಿ ನಲಿಕೆ, ಚಿತ್ರಕಲೆ, ರಂಗೋಲಿ, ಕುಸ್ತಿ ಹಾಗೂ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ

ಅ.21ರಂದು ಭವ್ಯ ಶೋಭಾಯಾತ್ರೆ
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಭವ್ಯ ಶೋಭಾಯಾತ್ರೆ ಅಕ್ಟೋಬರ್ 21ರಂದು ಮಧ್ಯಾಹ್ನ 3 ಗಂಟೆಗೆ ಶ್ರೀ ಕ್ಷೇತ್ರ ಉಚ್ಚಿಲದಿಂದ ಹೊರಡಲಿದೆ. ಉಚ್ಚಿಲದಿಂದ ರಾಷ್ಟ್ರೀಯ ಹೆದ್ದಾರಿ–66ರ ಮೂಲಕ ಎರ್ಮಾಳ್, ಉಚ್ಚಿಲ, ಮೂಳೂರು ಮಾರ್ಗವಾಗಿ ಕಾಪು ಬೀಚ್ ದೀಪಸ್ತಂಭದವರೆಗೆ ಶೋಭಾಯಾತ್ರೆ ಸಾಗಲಿದೆ.

ಕಾಪು ಸಮುದ್ರತೀರದಲ್ಲಿ ಬೋಟುಗಳ ಮೂಲಕ ವಿದ್ಯುದ್ದೀಪಾಲಂಕಾರ, ಸುಡುಮದ್ದು ಪ್ರದರ್ಶನ, ಸುಮಂಗಲೆಯರಿಂದ ಸಾಮೂಹಿಕ ಮಂಗಳಾರತಿ, ಕಾಶಿಯ ಪಂಡಿತರಿಂದ ಗಂಗಾರತಿ ಹಾಗೂ ಡ್ರೋನ್ ಮೂಲಕ ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಗೆ ಪುಷ್ಪಾರ್ಚನೆ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.

ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಂಗಳೂರು ಕಡೆಯಿಂದ ಬರುವ ವಾಹನಗಳಿಗೆ ಸರಸ್ವತಿ ಶಾಲಾ ಮೈದಾನ ಹಾಗೂ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮತ್ತು ಉಡುಪಿ ಕಡೆಯಿಂದ ಬರುವ ವಾಹನಗಳಿಗೆ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯ ಪಕ್ಕದ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಭಕ್ತಾದಿಗಳಿಗೆ ದರ್ಶನ ಹಾಗೂ ಅನ್ನಸಂತರ್ಪಣೆಯನ್ನು ವ್ಯವಸ್ಥಿತವಾಗಿ ನಡೆಸಲು ಪ್ರತಿದಿನ ಸುಮಾರು 1,500 ಸ್ವಯಂಸೇವಕರು ಸೇವೆಯಲ್ಲಿ ತೊಡಗಲಿದ್ದಾರೆ. 11 ದಿನಗಳ ಉತ್ಸವದಲ್ಲಿ ಸಾರ್ವಜನಿಕರು ಹಾಗೂ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಶ್ರೀ ಕ್ಷೇತ್ರದ ವತಿಯಿಂದ ಮನವಿ ಮಾಡಲಾಗಿದೆ.

Previous Post

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check