Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

Dhrishya News by Dhrishya News
13/10/2026
in ಸುದ್ದಿಗಳು
0
ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ
0
SHARES
1
VIEWS
Share on FacebookShare on Twitter

ಉಡುಪಿ:ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಗಳ ಮೀಸಲಾತಿ ಪ್ರಕಟಗೊಂಡಿದ್ದು, ಚುನಾವಣಾ ಅಖಾಡ ಸಿದ್ದಗೊಂಡಿದೆ. ಈಗಾಗಲೇ ಘೋಷಣೆಯಾಗಿರುವ ಮೀಸಲಾತಿಯಡಿ, ಪಕ್ಷದ ಅಭ್ಯರ್ಥಿಗಳನ್ನು ಭರ್ಜರಿ ಬಹುಮತದಿಂದ ಗೆಲ್ಲಿಸುವ ಮೂಲಕ ಮಗದೊಮ್ಮೆ ಜಿ.ಪಂ. ಸಹಿತ ಗರಿಷ್ಠ ತಾ.ಪಂ. ಮತ್ತು ಗ್ರಾ.ಪಂ.ಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ಶ್ರಮಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ 10 ದಿನಗಳಲ್ಲಿ ಎಲ್ಲಾ 28 ಜಿ.ಪಂ. ಕ್ಷೇತ್ರಗಳ ಸಹಿತ ಪ್ರತೀ ಗ್ರಾ.ಪಂ. ವ್ಯಾಪ್ತಿಯ ಕಾರ್ಯಕರ್ತರ ಸಭೆಗಳನ್ನು ಆಯೋಜಿಸಿ ಚುನಾವಣಾ ಪೂರ್ವ ಸಿದ್ಧತೆಗಳನ್ನು ನಡೆಸಬೇಕು. ಸಂಘಟಿತ ಪರಿಶ್ರಮದ ಮೂಲಕ ಗೆಲುವಿನ ರೂವಾರಿಗಳಾಗಿ ಸಾರ್ಥಕ ಸೇವೆ ಸಲ್ಲಿಸಬೇಕು ಎಂದು ಕುತ್ಯಾರು ತಿಳಿಸಿದರು.

ಸೆ.17ರಿಂದ ನಡೆಯುತ್ತಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಸಮಾರೋಪ ಸಮಾರಂಭವು ಅ.17ರಂದು ಕೋಟದ ಕಾರಂತ ಕಲಾ ಭವನದಲ್ಲಿ ನಡೆಯಲಿದೆ. ಅಭಿಯಾನವನ್ನು ಜಿಲ್ಲೆಯಾದ್ಯಂತ ವೈವಿದ್ಯಮಯ ಅರ್ಥಪೂರ್ಣ ಸೇವಾ ಕಾರ್ಯ ಚಟುವಟಿಕೆಗಳ ಮೂಲಕ ಯಶಸ್ವಿಗೊಳಿಸಲು ಬದ್ಧತೆಯಿಂದ ಶ್ರಮಿಸಿದ ಎಲ್ಲರಿಗೂ ಪಕ್ಷದ ವತಿಯಿಂದ ಅಭಿನಂದನೆಗಳು. ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅ.26ರಂದು ಜಿಲ್ಲಾ ಕೇಂದ್ರದಲ್ಲಿ ‘ಅಹೋರಾತ್ರಿ ಬೃಹತ್ ಪ್ರತಿಭಟನೆ’ ನಡೆಯಲಿದೆ. ಪಕ್ಷದ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಬೂತ್ ಮಟ್ಟದಲ್ಲಿ ಸದೃಢ ಪಕ್ಷ ಸಂಘಟನೆಯೊಂದಿಗೆ ಪಕ್ಷದ ಗೆಲುವಿಗೆ ಎಲ್ಲರೂ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರ ಮತ್ತು ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಚುನಾವಣಾ ನಿರ್ವಹಣೆಯ ಕುರಿತು ವಿಸ್ತ್ರತ ವಿಚಾರ ವಿನಿಮಯ ನಡೆಯಿತು. ಮಂಡಲವಾರು ಕಾರ್ಯ ಚಟುವಟಿಕೆಗಳ ವರದಿ ಮಂಡನೆ ನಡೆಯಿತು.

ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಗೀತೆ ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ ಸ್ವಾಗತಿಸಿ, ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Previous Post

ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

13/10/2026
ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

13/10/2026
ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

13/10/2026
ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

13/10/2026

Recent News

imunify-bot-check