ಕಾರ್ಕಳ: ಮಂಗಳೂರಿನಲ್ಲಿ ಹೋಟೆಲ್ ಕೆಲಸ ಮಾಡಿಕೊಂಡಿದ್ದ ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ ಸುರೇಶ್ ಶೆಟ್ಟಿ (56) ಎಂಬವರು ನಾಪತ್ತೆಯಾದ ನಾಲ್ಕು ದಿನಗಳ ಬಳಿಕ ಹಿರ್ಗಾನ ಗ್ರಾಮದ ಎಣ್ಣೆಹೊಳೆ ಸ್ವರ್ಣ ನದಿಯ ದಂಡೆಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ.
ಸುರೇಶ್ ಶೆಟ್ಟಿ ಅವರು ಅ. 9ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣಾ ಸರಹದ್ದಿನ ಕಟೀಲು ಎಂಬಲ್ಲಿ ಕಾಣೆಯಾಗಿದ್ದರು. ಈ ಕುರಿತು ಕುಟುಂಬದವರು ಹುಡುಕಾಟ ನಡೆಸುತ್ತಿದ್ದರು.
ಅ. 14ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಸಂಬಂಧಿಕರು ಕರೆ ಮಾಡಿ, ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಎಣ್ಣೆಹೊಳೆ ಸ್ವರ್ಣ ನದಿಯ ಸಿಮೆಂಟ್ ಕಾಂಕ್ರೀಟ್ ದಂಡೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹವು ನಾಪತ್ತೆಯಾಗಿದ್ದ ಸುರೇಶ್ ಶೆಟ್ಟಿ ಅವರದ್ದೆಂದು ಗುರುತಿಸಲಾಗಿದೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.






