ಚೇರ್ಕಾಡಿ : ನವೆಂಬರ್ ೧೨.
ಸ್ವಸ್ಥ ಸುಸ್ಥಿರ ಸಮಾಜ ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜುಗಳ ಸಮೂಹದ, ಉಡುಪಿ ವಿಭಾಗವು ತನ್ನ ಉತ್ಕೃಷ್ಟ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಮೂರನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ.
“ಶಿಕ್ಷಣದಲ್ಲಿ ರಾಷ್ಟ್ರೀಯತೆ” ಎಂಬ ವಿನೂತನ ಪರಿಕಲ್ಪನೆಯೊಂದಿಗೆ ನಾಡಿನ ಉದ್ದಗಲದ ವಿದ್ಯಾರ್ಥಿಗಳಿಗೆ ವಸತಿ ಸಹಿತ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳೊಂದಿಗೆ NEET, JEE, KCET, NDA ಹಾಗೂ ವಾಣಿಜ್ಯ ವಿದ್ಯಾರ್ಥಿಗಳಿಗೆ CA, CSEET, CLAT ಪರೀಕ್ಷೆಗಳಿಗೆ ಪರಿಣತ ಮತ್ತು ಅನುಭವಿ ಉಪನ್ಯಾಸಕರಿಂದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸುತ್ತಿದೆ.
ಈ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಸಂಸ್ಥೆಯು ನಡೆಸುವ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಇದೇ ಬರುವ 18/10/2026, 22/11/2026 ಹಾಗೂ 20/12/2026 ರಂದು ರಾಜ್ಯಾದ್ಯಂತ ಇರುವ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜುಗಳಲ್ಲಿ ಏಕಕಾಲಕ್ಕೆ ಪರೀಕ್ಷೆ ನಡೆಸಲಾಗುತ್ತದೆ. ಪ್ರಸ್ತುತ ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ, ಪಠ್ಯಕ್ರಮ ಹಾಗೂ ಪರೀಕ್ಷಾ ನೊಂದಣಿಗೆ ಸಂಸ್ಥೆಯ ಜಾಲತಾಣ Udupi.rpuc.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ದೂರವಾಣಿ ಸಂಖ್ಯೆ 9900124118, ಸಂಪರ್ಕಿಸಬಹುದು.








