Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

Dhrishya News by Dhrishya News
28/10/2026
in ಆರೋಗ್ಯ, ಸುದ್ದಿಗಳು
0
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ
0
SHARES
0
VIEWS
Share on FacebookShare on Twitter

ಮಣಿಪಾಲ, 28 ಅಕ್ಟೋಬರ್ 2026: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ ಘಟಕ ಬೋಧನಾ ಆಸ್ಪತ್ರೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಡಾ. ಅಕ್ಷಯ ಪ್ರತಾಪ್ ಸಿಂಗ್ ಅವರು ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕುಲರ್ ಶಸ್ತ್ರಚಿಕಿತ್ಸಾ (ಹೃದಯ ಶಸ್ತ್ರಚಿಕಿತ್ಸೆ)ವಿಭಾಗದ ಸಲಹಾ ತಜ್ಞರಾಗಿ ಸೇರ್ಪಡೆಗೊಂಡಿದ್ದಾರೆ. ಅವರು 15 ಅಕ್ಟೋಬರ್ 2026ರಿಂದ ಸಲಹೆಗೆ ಲಭ್ಯರಿದ್ದಾರೆ.

ಡಾ. ಅಕ್ಷಯ ಪ್ರತಾಪ್ ಸಿಂಗ್ ಅವರು ದಾವಣಗೆರೆಯ ಜೆ.ಜೆ.ಎಂ. ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದರು. ನಂತರ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕುಲರ್ ಶಸ್ತ್ರಚಿಕಿತ್ಸೆಯಲ್ಲಿ ದೆಹಲಿಯಿಂದ ಡಿಎನ್‌ಬಿ ಮತ್ತು ಬೆಂಗಳೂರಿನ ನಾರಾಯಣ ಇನ್‌ಸ್ಟಿಟ್ಯೂಟ್‌ನಲ್ಲಿ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕುಲರ್ ಶಸ್ತ್ರಚಿಕಿತ್ಸೆಯಲ್ಲಿ ಹಾಗೂ ಮಿನಿಮಲಿ ಇನ್ವೇಸಿವ್ ಕಾರ್ಡಿಯಾಕ್ ಸರ್ಜರಿ (ಎಂಐಸಿಎಸ್)ಯಲ್ಲಿ ಫೆಲೋಶಿಪ್ ಪಡೆದಿದ್ದಾರೆ. ಕಸ್ತೂರ್ಬಾ ಆಸ್ಪತ್ರೆಗೆ ಸೇರುವ ಮೊದಲು ಅವರು ಪುಣೆ ಮತ್ತು ನಾಗಪುರದ ಆಸ್ಪತ್ರೆಗಳಲ್ಲಿ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕುಲರ್ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಸೇವೆ ಸಲ್ಲಿಸಿದ್ದಾರೆ.

ಡಾ. ಅಕ್ಷಯ ಪ್ರತಾಪ್ ಸಿಂಗ್ ಅವರು ಹೃದಯ ಶಸ್ತ್ರಚಿಕಿತ್ಸೆಯಲ್ಲಿ ವ್ಯಾಪಕ ಅನುಭವ ಹೊಂದಿದ್ದಾರೆ. ಕೊರೊನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ), ಮಿನಿಮಲಿ ಇನ್ವೇಸಿವ್ ಹೃದಯ ಶಸ್ತ್ರಚಿಕಿತ್ಸೆ, ಮೈಟ್ರಲ್ ಮತ್ತು ಅಯೋರ್ಟಿಕ್ ಕವಾಟಗಳ ದುರಸ್ತಿ ಮತ್ತು ಬದಲಾವಣೆ, ಮರು-ಹೃದಯ ಶಸ್ತ್ರಚಿಕಿತ್ಸೆ (ರಿಡೂ ಸರ್ಜರಿ), ಸಂಕೀರ್ಣ ಅಯೋರ್ಟಿಕ್ ಶಸ್ತ್ರಚಿಕಿತ್ಸೆಗಳು ಹಾಗೂ ಆಯ್ದ ಜನ್ಮಜಾತ ಹೃದಯ ಶಸ್ತ್ರಚಿಕಿತ್ಸೆಗಳು ಅವರ ಕಾರ್ಯಕ್ಷೇತ್ರದಲ್ಲಿ ಸೇರಿವೆ.

ಡಾ. ಸಿಂಗ್ ಅವರನ್ನು ಸ್ವಾಗತಿಸಿದ ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಒಒ) ಡಾ. ಸುಧಾಕರ್ ಕಂಟಿಪುಡಿ ಅವರು, “ಡಾ. ಅಕ್ಷಯ ಪ್ರತಾಪ್ ಸಿಂಗ್ ಅವರನ್ನು ಮಾಹೆ ಕುಟುಂಬಕ್ಕೆ ಸ್ವಾಗತಿಸಲು ನಮಗೆ ಸಂತೋಷವಾಗಿದೆ. ಮಿನಿಮಲಿ ಇನ್ವೇಸಿವ್ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಅವರ ತರಬೇತಿ ಹಾಗೂ ವಿವಿಧ ಸಂಕೀರ್ಣ ಹೃದಯ ಶಸ್ತ್ರಚಿಕಿತ್ಸೆಗಳಲ್ಲಿನ ಅನುಭವವು ನಮ್ಮ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕುಲರ್ ಶಸ್ತ್ರಚಿಕಿತ್ಸಾ ಸೇವೆಗಳನ್ನು ಇನ್ನಷ್ಟು ಬಲಪಡಿಸಲಿದೆ. ಇದರಿಂದ ಕರಾವಳಿ ಕರ್ನಾಟಕ ಹಾಗೂ ಸುತ್ತಮುತ್ತಲಿನ ರೋಗಿಗಳಿಗೆ ಸುಧಾರಿತ ಹೃದಯ ಶಸ್ತ್ರಚಿಕಿತ್ಸಾ ಸೇವೆಯನ್ನು ಅವರ ಊರಿನ ಸಮೀಪದಲ್ಲೇ ಒದಗಿಸಲು ಸಾಧ್ಯವಾಗಲಿದೆ” ಎಂದು ಹೇಳಿದರು.

ಡಾ. ಸಿಂಗ್ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕುಲರ್ ಸರ್ಜರಿ ವಿಭಾಗದಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಅಪಾಯಿಂಟ್‌ಮೆಂಟ್‌ಗಾಗಿ, ದಯವಿಟ್ಟು 0820 2575555 ಸಂಖ್ಯೆಗೆ ಅಥವಾ ಹೆಲ್ಪ್ ಡೆಸ್ಕ್ ಸಂಖ್ಯೆ 0820 2922761 ಕ್ಕೆ ಕರೆ ಮಾಡಬಹುದು.

Previous Post

ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

28/10/2026
ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

28/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

28/10/2026
ಅಜೆಕಾರು: ಕುಕ್ಕುಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕಳವು

ಅಜೆಕಾರು: ಕುಕ್ಕುಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕಳವು

28/10/2026

Recent News

imunify-bot-check