Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

Dhrishya News by Dhrishya News
28/10/2026
in ಸುದ್ದಿಗಳು
0
ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ
0
SHARES
0
VIEWS
Share on FacebookShare on Twitter

ಉಡುಪಿ :ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಎಲ್ಲಾ ನಾಲ್ಕು ಅಭ್ಯರ್ಥಿಗಳನ್ನು ಭರ್ಜರಿ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಸುಶಿಕ್ಷಿತ ಮತದಾರರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತ ವೈಫಲ್ಯಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಈ ಚುನಾವಣಾ ಗೆಲುವು ಮುಂದಿನ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ನಡೆದ ಸಂಭ್ರಮಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

ದೇಶಾದ್ಯoತ ಅರಾಜಕತೆ ಸೃಷ್ಠಿಸುವ ನಿಟ್ಟಿನಲ್ಲಿ ಗೊತ್ತು ಗುರಿ ಇಲ್ಲದ ಹೋರಾಟಗಳು ಮತ್ತು ಷಡ್ಯಂತ್ರಗಳಲ್ಲಿ ತೊಡಗಿರುವ ಕಾಂಗ್ರೆಸ್ಸಿಗೆ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ದೇಶದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ಕಾಂಗ್ರೆಸ್ ಒಳಗಿನ ಭಿನ್ನಮತ ಆರಂಭಗೊಂಡಿದೆ. ಬೆಲೆಟ್ ಪೇಪರ್ ಮೂಲಕ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವುದು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಸ್ಪಷ್ಟ ಸಂದೇಶವಾಗಿದೆ. ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಮನೆ ಮನೆಗೆ ಪ್ರಚುರಪಡಿಸುವ ಮೂಲಕ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ಸರ್ವ ಸನ್ನದ್ಧರಾಗೋಣ ಎಂದರು.

ಘೋಷಣೆ ಮೊಳಗಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ, ಮಾಧ್ಯಮ ಸಹ ಸಂಚಾಲಕ ಮಂಜುನಾಥ್ ಮಣಿಪಾಲ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಪಂದುಬೆಟ್ಟು, ರತ್ನಾಕರ ಇಂದ್ರಾಳಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಶೆಟ್ಟಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಪ್ರಮುಖರಾದ ರವಿ ಅಮೀನ್, ವೀಣಾ ಎಸ್. ಶೆಟ್ಟಿ, ರಾಘವೇಂದ್ರ ಉಪ್ಪೂರು, ಬಾಲಕೃಷ್ಣ ಶೆಟ್ಟಿ, ಧೀರಜ್ ಕೆ.ಎಸ್., ಸುರೇಂದ್ರ ಬೋಂಟ್ರಾ, ಶಂಕರ್ ಕುಂದರ್, ಪ್ರಥ್ವಿರಾಜ್ ಮಣಿಪಾಲ, ಸದಾನಂದ ಪ್ರಭು, ಶೈಲೇoದ್ರ ಶೆಟ್ಟಿ, ಸುಜಾಲ ಸತೀಶ್, ದಯಾಶಿನಿ, ಪ್ರಿಯಾ ನಾಯಕ್, ರಾಧಿಕಾ, ವಿಜಯ ಕುಮಾರ್, ಸಂತೋಷ್ ಸುವರ್ಣ, ಗಿರಿಧರ್ ಆಚಾರ್ಯ, ಸಲೀಂ ಅಂಬಾಗಿಲು, ದಾವೂದ್ ಅಬೂಬಕರ್, ಸಂದೀಪ್ ಅಮೀನ್, ಲೋಕಯ್ಯ ಬೊಟ್ಯಾಡಿ, ಕಿಶೋರ್ ಕರಂಬಳ್ಳಿ, ಆನಂದ ಸುವರ್ಣ, ಡೇನಿಸ್ ಮಸ್ಕರೇನ್ಹಸ್, ಪ್ರಶಾಂತ್ ಭಟ್, ನಿತಿನ್ ಪೈ, ದಕ್ಷಿತ್, ಭೂಷಣ್, ವಿಲಾಸ್ ಮುಂತಾದವರು ಉಪಸ್ಥಿತರಿದ್ದರು.

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

28/10/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಹೃದಯ, ಎದೆಗೂಡು ಮತ್ತು ರಕ್ತನಾಳ ಶಸ್ತ್ರಚಿಕಿತ್ಸಾ ಸಲಹಾ ತಜ್ಞರಾಗಿ ಡಾ. ಅಕ್ಷಯ ಪ್ರತಾಪ್ ಸಿಂಗ್ ಸೇರ್ಪಡೆ

28/10/2026
ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

28/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

28/10/2026

Recent News

imunify-bot-check