ಕಾರ್ಕಳ: ಕಾರ್ಕಳ ಕಸಬಾ ಗ್ರಾಮದಲ್ಲಿ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆ ಯಾದವರನ್ನು ಮೊಹಮ್ಮದ್ ನಯಾಜ್ ಎಂದು ಗುರುತಿಸಲಾಗಿದ್ದು ಅವರು ಕಾರ್ಕಳದಲ್ಲಿ ಕನ್‌ಸ್ಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಅಕ್ಟೋಬರ್ 25ರಂದು ಮಧ್ಯಾಹ್ನ 3 ಗಂಟೆಗೆ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ತೆರಳಿದ ಅವರು, ಬಳಿಕ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಗಂಡಸು ಕಾಣೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.






