ಕುಂದಾಪುರ: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಸೀರೆಗೆ ಗ್ಯಾಸ್ ಸ್ಟೌವ್ನ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 81 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹೆಮ್ಮಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹೆಮ್ಮಾಡಿ ಗ್ರಾಮದ ಅಕ್ಕಮ್ಮ (81) ಎಂದು ಗುರುತಿಸಲಾಗಿದೆ.
ಅಕ್ಟೋಬರ್ 28ರಂದು ಸಂಜೆ ಸುಮಾರು 4:30ರ ವೇಳೆಗೆ ಅಕ್ಕಮ್ಮ ಅವರು ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಸೀರೆಗೆ ಗ್ಯಾಸ್ ಸ್ಟೌವ್ನ ಬೆಂಕಿ ತಗುಲಿದೆ. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ 9:30ರ ವೇಳೆಗೆ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







