ಮಂಗಳೂರು: ₹1.15 ಕೋಟಿ ಹಣವಿದ್ದ ಎರಡು ಬ್ಯಾಗ್‌ಗಳನ್ನು ಹೊಂದಿದ್ದ ವ್ಯಕ್ತಿಯೊಬ್ಬರನ್ನು ನಾಲ್ವರು ಅಪರಿಚಿತರು ಕಾರಿನಲ್ಲಿ ಬಲವಂತವಾಗಿ ಅಪಹರಿಸಿ, ಹಣ ಹಾಗೂ ಮೊಬೈಲ್ ಫೋನ್‌ಗಳನ್ನು ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಶಿವಮೊಗ್ಗದ ಗಾಂಧಿ ಬಜಾರ್ ನಿವಾಸಿ ನಾಗರಾಜ್ ಎಂಬವರ ಮಾಲೀಕತ್ವದಲ್ಲಿ ಕೆಲಸ ಮಾಡುತ್ತಿರುವ ಸತ್ಯನಾರಾಯಣ ಎಂಬವರು ದೂರು ನೀಡಿದ್ದಾರೆ.
ನಂತರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಕಾವೂರು ಬಸ್ ನಿಲ್ದಾಣದ ಸಮೀಪದ ಗುಡ್ಡವೊಂದರಲ್ಲಿ ಅವರನ್ನು ಕಾರಿನಿಂದ ಕೆಳಗಿಳಿಸಿ, ಪೊಲೀಸರಿಗೆ ದೂರು ನೀಡಿದರೆ ಕೊಂದು ಹಾಕುವುದಾಗಿ ಜೀವ ಬೆದರಿಕೆ ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸತ್ಯನಾರಾಯಣ ಅವರು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣದ ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ.







