Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ

Dhrishya News by Dhrishya News
30/10/2026
in ಸುದ್ದಿಗಳು
0
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ
0
SHARES
3
VIEWS
Share on FacebookShare on Twitter

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟ, ಪಡುಬಿದ್ರಿ, ತೆಕ್ಕಟ್ಟೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಅಕ್ಟೋಬರ್ 30ರಂದು ಉಡುಪಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡ್ಡಾಯವಾಗಿ ರಿಫ್ಲೆಕ್ಟರ್‌ಗಳನ್ನು ಅಳವಡಿಸುವುದು, ಅಗತ್ಯ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಸ್ಥಾಪಿಸುವುದು ಹಾಗೂ ಹೆದ್ದಾರಿಯ ಇಕ್ಕೆಲಗಳಲ್ಲಿ ಕಂಡುಬಂದಿರುವ ದೊಡ್ಡ ಗಾತ್ರದ ಹೊಂಡಗಳನ್ನು ತಕ್ಷಣ ಮುಚ್ಚಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಲ್ಲದೆ, ರಸ್ತೆ ದೀಪಗಳು, ಡಿವೈಡರ್‌ಗಳಲ್ಲಿರುವ ಹ್ಯಾಲೋಜನ್ ದೀಪಗಳನ್ನು ತುರ್ತಾಗಿ ದುರಸ್ತಿಗೊಳಿಸುವುದು, ಪಡುಬಿದ್ರಿ ಜಂಕ್ಷನ್‌ನಲ್ಲಿ ಅಪಘಾತಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಹಾಗೂ ವಾಹನ ದಟ್ಟಣೆ ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ತಿಳಿಸಿದರು.

ಇದೇ ವೇಳೆ, ಎರ್ಮಾಳು ಸ್ಕೈವಾಕ್ ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗಡ್ಯಾಳ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರುದ್ರನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

Next Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

30/10/2026
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ತಡೆಗೆ ಕ್ರಮ: ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ

30/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

30/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: ₹7.07 ಲಕ್ಷ ಮೌಲ್ಯದ MDMA ಮಾದಕ ವಸ್ತು ವಶ – ಇಬ್ಬರ ಬಂಧನ

30/10/2026

Recent News

imunify-bot-check