Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯಿಂದ 110 ಆಶಾ ಕಾರ್ಯಕರ್ತೆಯರಿಗೆ ಸಮುದಾಯ ಮಾನಸಿಕ ಆರೋಗ್ಯದ ಅರಿವು ಮತ್ತು ಆರೈಕೆ ಕುರಿತು ತರಬೇತಿ

Dhrishya News by Dhrishya News
30/10/2026
in ಸುದ್ದಿಗಳು
0
ಮಾಹೆಯಿಂದ 110 ಆಶಾ ಕಾರ್ಯಕರ್ತೆಯರಿಗೆ ಸಮುದಾಯ ಮಾನಸಿಕ ಆರೋಗ್ಯದ ಅರಿವು ಮತ್ತು ಆರೈಕೆ ಕುರಿತು ತರಬೇತಿ
0
SHARES
3
VIEWS
Share on FacebookShare on Twitter

ಮಣಿಪಾಲ, ಅಕ್ಟೋಬರ್ 30, 2026: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿಸಲಾದ ಉತ್ಕೃಷ್ಟ ಸಂಸ್ಥೆಯ ಅಂಗಸಂಸ್ಥೆಯಾದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಮನೋವೈದ್ಯಕೀಯ ವಿಭಾಗವು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ‘ಆರ್‌ಆರ್‌ಆರ್‌-2 (ಪತ್ತೆಹಚ್ಚುವಿಕೆ, ಶಿಫಾರಸು ಮತ್ತು ಮರುಸೇರ್ಪಡೆ ಎರಡನೇ ಆವೃತ್ತಿ)’ ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಸುಮಾರು 110 ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಮಾನಸಿಕ ಕಾಯಿಲೆಗಳ ಲಕ್ಷಣಗಳನ್ನು ಗುರುತಿಸುವುದು, ಚಿಕಿತ್ಸೆಗೆ ಶಿಫಾರಸು ಮಾಡುವ ವಿಧಾನಗಳನ್ನು ಅರಿಯುವುದು ಹಾಗೂ ಮಾನಸಿಕ ಅಸ್ವಸ್ಥರ ದೀರ್ಘಾವಧಿ ನಿರ್ವಹಣೆ ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಸಜ್ಜುಗೊಳಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಉಡುಪಿಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ (ಡಿಎಂಎಚ್‌ಪಿ) ಮತ್ತು ಮಣಿಪಾಲ ಕೆಎಂಸಿ ಮನೋವೈದ್ಯಕೀಯ ವಿಭಾಗದ ತಜ್ಞರು ಈ ಕುರಿತು ವಿಶೇಷ ಗೋಷ್ಠಿಗಳನ್ನು ನಡೆಸಿಕೊಟ್ಟರು.

ಮಾಹೆ ಕುಲಸಚಿವರಾದ ಡಾ. ಪಿ. ಗಿರಿಧರ್ ಕಿಣಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಣಿಪಾಲದ ಕೆಎಂಸಿ ಡೀನ್ ಡಾ. ಅನಿಲ್ ಕೆ. ಭಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಲತಾ ನಾಯಕ್ ಹಾಗೂ ಕೆಎನ್ಎನ್‌ಡಿ ಅಸೋಸಿಯೇಟ್ಸ್‌ನ ರಾಘವೇಂದ್ರ ಹೊಳ್ಳ ಭಾಗವಹಿಸಿದ್ದರು.

ಸಮುದಾಯ ಮಾನಸಿಕ ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ಮುಂಚೂಣಿ ಕಾರ್ಯಕರ್ತೆಯರ ಪಾತ್ರವನ್ನು ಈ ಕಾರ್ಯಕ್ರಮ ಬಿಂಬಿಸಿದೆ. ಮಾನಸಿಕ ಸಮಸ್ಯೆಗಳನ್ನು ಗುರುತಿಸಿ, ಸಕಾಲದಲ್ಲಿ ಚಿಕಿತ್ಸೆಗೆ ಮಾರ್ಗದರ್ಶನ ಮಾಡುವ ಆಶಾ ಕಾರ್ಯಕರ್ತೆಯರ ಸಾಮರ್ಥ್ಯವನ್ನು ವೃದ್ಧಿಸುವ ಮೂಲಕ ಸೂಕ್ತ ಮಾನಸಿಕ ಆರೋಗ್ಯ ಸೇವೆ ಒದಗಿಸುವುದು, ನಿರಂತರ ಆರೈಕೆ ನೀಡುವುದು ಮತ್ತು ಮಾನಸಿಕ ಅಸ್ವಸ್ಥರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಬೆಂಬಲಿಸುವುದು ಈ ಕಾರ್ಯಕ್ರಮದ ಪ್ರಮುಖ ಗುರಿ.

Previous Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

Next Post

ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 1ರಂದು ಶಿಲಾ ಮುಹೂರ್ತ, ದಾರು ಮುಹೂರ್ತ ಹಾಗೂ ಸಂಸ್ಥಾನ ಪೂಜೆ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 1ರಂದು ಶಿಲಾ ಮುಹೂರ್ತ, ದಾರು ಮುಹೂರ್ತ ಹಾಗೂ ಸಂಸ್ಥಾನ ಪೂಜೆ.

ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 1ರಂದು ಶಿಲಾ ಮುಹೂರ್ತ, ದಾರು ಮುಹೂರ್ತ ಹಾಗೂ ಸಂಸ್ಥಾನ ಪೂಜೆ.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಮಾಣಿಕ್ಯ ಪ್ರೀಮಿಯರ್ ಲೀಗ್ 2026 ಹಾಗೂ ವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಬ್ರಹ್ಮಾವರ: ಮಾಣಿಕ್ಯ ಪ್ರೀಮಿಯರ್ ಲೀಗ್ 2026 ಹಾಗೂ ವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

30/10/2026
ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 1ರಂದು ಶಿಲಾ ಮುಹೂರ್ತ, ದಾರು ಮುಹೂರ್ತ ಹಾಗೂ ಸಂಸ್ಥಾನ ಪೂಜೆ.

ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 1ರಂದು ಶಿಲಾ ಮುಹೂರ್ತ, ದಾರು ಮುಹೂರ್ತ ಹಾಗೂ ಸಂಸ್ಥಾನ ಪೂಜೆ.

30/10/2026
ಮಾಹೆಯಿಂದ 110 ಆಶಾ ಕಾರ್ಯಕರ್ತೆಯರಿಗೆ ಸಮುದಾಯ ಮಾನಸಿಕ ಆರೋಗ್ಯದ ಅರಿವು ಮತ್ತು ಆರೈಕೆ ಕುರಿತು ತರಬೇತಿ

ಮಾಹೆಯಿಂದ 110 ಆಶಾ ಕಾರ್ಯಕರ್ತೆಯರಿಗೆ ಸಮುದಾಯ ಮಾನಸಿಕ ಆರೋಗ್ಯದ ಅರಿವು ಮತ್ತು ಆರೈಕೆ ಕುರಿತು ತರಬೇತಿ

30/10/2026
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ಫಿಕ್ಕಿ ಆರೋಗ್ಯ ಸೇವಾ ಶ್ರೇಷ್ಠತಾ ಪ್ರಶಸ್ತಿ 2026

30/10/2026

Recent News

imunify-bot-check