ಉಡುಪಿ: ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಡಾ. ಹೇಮಂಗ್ ಜೋಶಿ ಅವರನ್ನು ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಯುವಮೋರ್ಚಾ ತಂಡವು ದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿ ಶುಭ ಹಾರೈಸಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯೆ ರಶ್ಮಿ ಸಾಮಂತ್ ಉಪಸ್ಥಿತರಿದ್ದರು.
ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಗುರುರಾಜ್ ಮಾಡ ಹಾಗೂ ಪೃಥ್ವಿರಾಜ್ ಮಣಿಪಾಲ್ ಅವರು ಉಪಸ್ಥಿತರಿದ್ದರು.







