Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

‘ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗದೆ ಪಾಳುಬಿದ್ದ ವಾಣಿಜ್ಯ ಸಂಕೀರ್ಣ: ನಗರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ`

Dhrishya News by Dhrishya News
05/11/2026
in ಸುದ್ದಿಗಳು
0
‘ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗದೆ ಪಾಳುಬಿದ್ದ ವಾಣಿಜ್ಯ ಸಂಕೀರ್ಣ: ನಗರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ`
0
SHARES
1
VIEWS
Share on FacebookShare on Twitter

ಮಣಿಪಾಲ: ನಗರದ ಸಿಂಡಿಕೇಟ್ ವೃತ್ತದಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ಮುಖ್ಯ ರಸ್ತೆಯಲ್ಲಿರುವ ನಗರಾಡಳಿತದ ವಾಣಿಜ್ಯ ಸಂಕೀರ್ಣ ಬಳಕೆಯಾಗದೆ ಪಾಳುಬೀಳುವ ಸ್ಥಿತಿಗೆ ತಲುಪಿದೆ. ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ವೆಚ್ಚ ಮಾಡಿ ನಿರ್ಮಿಸಿರುವ ಈ ಕಟ್ಟಡವು ಉದ್ದೇಶಿತ ಕಾರ್ಯಕ್ಕೆ ಬಳಕೆಯಾಗದೆ ಬಹಳ ಸಮಯದಿಂದ ಬೀಗಮುದ್ರೆ ಹಾಕಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಬೇಸರಕ್ಕೆ ಕಾರಣವಾಗಿದೆ.

ಕಟ್ಟಡದ ಅಂಗಡಿಗಳ ಶೆಟರ್‌ಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿದ್ದು, ಗೋಡೆಗಳಿಗೆ ಬಳಿದ ಬಣ್ಣವೂ ಮಾಸಲಾರಂಭಿಸಿದೆ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಿರುವ ಈ ಕಟ್ಟಡವು ಜನರ ಉಪಯೋಗಕ್ಕೆ ಬಾರದೆ ಹಾಳಾಗುತ್ತಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.

ಈ ವಾಣಿಜ್ಯ ಸಂಕೀರ್ಣವು ಜನಸಂಪರ್ಕವಿರುವ ಪ್ರಮುಖ ಸ್ಥಳದಲ್ಲಿದ್ದು, ವ್ಯಾಪಾರ ವಹಿವಾಟಿಗೆ ಅತ್ಯಂತ ಸೂಕ್ತವಾಗಿದೆ. ಇಲ್ಲಿ ಅಂಗಡಿ ಮುಂಗಟ್ಟುಗಳು ಆರಂಭಗೊಂಡರೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಸಮೀಪದಲ್ಲೇ ಲಭ್ಯವಾಗಲಿವೆ. ಸಣ್ಣ ವ್ಯಾಪಾರಿಗಳಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉದ್ಯೋಗಾವಕಾಶ ದೊರೆಯಲಿದೆ. ಅಲ್ಲದೆ, ನಗರಸಭೆಗೂ ಬಾಡಿಗೆ ರೂಪದಲ್ಲಿ ಆದಾಯ ಲಭಿಸಲಿದೆ. ಹೀಗಿರುವಾಗ ಕಟ್ಟಡವನ್ನು ನಿರುಪಯುಕ್ತವಾಗಿ ಉಳಿಸಿರುವುದಕ್ಕೆ ಕಾರಣವೇನು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು, ನಗರಸಭೆಯ ಅಧಿಕಾರಿಗಳು ಕೂಡಲೇ ವಾಣಿಜ್ಯ ಸಂಕೀರ್ಣವನ್ನು ಸಾರ್ವಜನಿಕರ ಅನುಕೂಲಕ್ಕೆ ಮುಕ್ತಗೊಳಿಸಿ, ಅಂಗಡಿಗಳ ಹರಾಜು ಅಥವಾ ಬಾಡಿಗೆ ಪ್ರಕ್ರಿಯೆ ಮೂಲಕ ವ್ಯಾಪಾರ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಬೇಕು. ಕೋಟ್ಯಂತರ ರೂಪಾಯಿ ವೆಚ್ಚದ ಸಾರ್ವಜನಿಕ ಆಸ್ತಿ ಹಾಳಾಗಲು ಬಿಡಬಾರದು ಎಂದು ಆಗ್ರಹಿಸಿದ್ದಾರೆ.

ಇದಲ್ಲದೆ, ಉಡುಪಿ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ನಿರ್ವಹಿಸಲ್ಪಡುವ ಭಿಕ್ಷುಕರ ಪುನರ್ವಸತಿ ಕೇಂದ್ರ ಹಾಗೂ ನಿರ್ಗತಿಕರ ಆಶ್ರಯ ತಾಣಗಳ ಕೊರತೆಯಿರುವುದನ್ನು ಗಮನಿಸಬೇಕಾಗಿದೆ. ವಾಣಿಜ್ಯ ಉದ್ದೇಶಕ್ಕೆ ಕಟ್ಟಡವನ್ನು ಬಳಸಲು ಸಾಧ್ಯವಾಗದಿದ್ದಲ್ಲಿ, ಪರ್ಯಾಯವಾಗಿ ಅಸಹಾಯಕರು, ನಿರ್ಗತಿಕರು ಹಾಗೂ ಆಶ್ರಯವಿಲ್ಲದವರ ನೆಲೆಯಾಗಿ ಈ ಕಟ್ಟಡವನ್ನು ಅಭಿವೃದ್ಧಿಪಡಿಸುವ ಬಗ್ಗೆಯೂ ಆಡಳಿತ ಗಂಭೀರವಾಗಿ ಚಿಂತಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಸಾರ್ವಜನಿಕರ ಹಣದಿಂದ ನಿರ್ಮಾಣಗೊಂಡ ಕಟ್ಟಡಗಳು ಸಾರ್ವಜನಿಕರ ಬದುಕಿಗೆ ಆಸರೆಯಾಗಬೇಕೇ ಹೊರತು, ಬೀಗ ಹಾಕಿಕೊಂಡು ಹಾಳಾಗಬಾರದು. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಈ ಕಟ್ಟಡಕ್ಕೆ ಸೂಕ್ತ ಬಳಕೆ ಕಲ್ಪಿಸಿ, ಜನಹಿತದ ಕಾಳಜಿಯನ್ನು ಪ್ರದರ್ಶಿಸಬೇಕಿದೆ.

Previous Post

ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ

Next Post

ಕಾರ್ಕಳ ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ, ಥೀಮ್ ಪಾರ್ಕ್ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಹೆಜ್ಜೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ, ಥೀಮ್ ಪಾರ್ಕ್ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಹೆಜ್ಜೆ

ಕಾರ್ಕಳ ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ, ಥೀಮ್ ಪಾರ್ಕ್ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಹೆಜ್ಜೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ, ಥೀಮ್ ಪಾರ್ಕ್ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಹೆಜ್ಜೆ

ಕಾರ್ಕಳ ಪರಶುರಾಮ ಪ್ರತಿಮೆ ಪುನರ್ ನಿರ್ಮಾಣ, ಥೀಮ್ ಪಾರ್ಕ್ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಹೆಜ್ಜೆ

05/11/2026
‘ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗದೆ ಪಾಳುಬಿದ್ದ ವಾಣಿಜ್ಯ ಸಂಕೀರ್ಣ: ನಗರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ`

‘ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗದೆ ಪಾಳುಬಿದ್ದ ವಾಣಿಜ್ಯ ಸಂಕೀರ್ಣ: ನಗರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ`

05/11/2026
ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ

ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ

05/11/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

05/11/2026

Recent News

imunify-bot-check