ಉಡುಪಿ: ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಎಡ್ಮೇರು ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನ. 9ರಂದು ಸಂಜೆ ನಡೆದಿದೆ.
ನಾಲ್ಕು ಬೀದಿ ಕಡೆಯಿಂದ ಪಳ್ಳಿ ಕಡೆಗೆ ಪಳ್ಳಿ-ನಿಂಜೂರು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬೈಕ್ ನಲ್ಲಿ ಸುಕೇಶ ಆಚಾರ್ಯ ಅವರು ಸಂಚರಿಸುತ್ತಿದ್ದರು. ಈ ವೇಳೆ ಎಡ್ಮೇರು ತಿರುವಿನಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಬದಿಯ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಸುಕೇಶ ಆಚಾರ್ಯ ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







