Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ ಆರೋಗ್ಯಕಾರ್ಡ್ 2023ರ ನೋಂದಾವಣೆ ಪ್ರಕ್ರೀಯೆಗೆ ಚಾಲನೆ..!!

Dhrishya News by Dhrishya News
21/06/2023
in ಕರಾವಳಿ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಮಣಿಪಾಲ:ಮಣಿಪಾಲ ಆರೋಗ್ಯಕಾರ್ಡ್ 2023ರ ನೋಂದಾವಣೆ ಪ್ರಕ್ರೀಯೆಗೆ ಜೂನ್ 20 ಮಂಗಳವಾರ ಅಧಿಕೃತ ವಾಗಿ ಚಾಲನೆ ನೀಡಲಾಯಿತು 

ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್ ಮಾತನಾಡಿ, ಈ ವರ್ಷ ನಮ್ಮ ದೂರದೃಷ್ಟಿಯ ಸಂಸ್ಥಾಪಕ ನಾಯಕ ಡಾ.ಟಿ.ಎಂ.ಎ ಪೈ ಅವರ 125ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಅವರ ಉದಾತ್ತ ಕಾರ್ಯವನ್ನು ಸ್ಮರಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ.

ಭಾರತೀಯ ಆರೋಗ್ಯ ವ್ಯವಸ್ಥೆಯನ್ನು ಸಮಾಜಕ್ಕೆ ಸುಲಭವಾಗಿ ದೊರೆಯುವಂತೆ ಮಾಡಿದ ಸ್ಪೂರ್ತಿದಾಯಕ ಅಪರೂಪದ ನಾಯಕ ಡಾ. ಟಿ.ಎಂ.ಎ. ಪೈ” ಎಂದು ಹೇಳಿದರು. “ಮಣಿಪಾಲ್ ಆರೋಗ್ಯ ಕಾರ್ಡ್ 2023 ನೋಂದಣಿ ಇಂದಿನಿಂದ ಆರಂಭವಾಗುತ್ತಿದೆ ಎಂದು ಘೋಷಿಸಲು ನನಗೆ ಅಪಾರ ಸಂತೋಷವಾಗುತ್ತಿದೆ.

ಗುಣಮಟ್ಟದ ಆರೋಗ್ಯ ಸೇವೆಯನ್ನು ಸಾರ್ವಜನಿಕರಿಗೆ ಕೈಗೆಟಕುವಂತೆ ಮಾಡುವ ಉದ್ದೇಶದಿಂದ ಆರೋಗ್ಯ ಕಾರ್ಡ್ ಅನ್ನು ಪ್ರಾರಂಭಿಸಲಾಗಿದೆ, ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು ಎಂದು ಹೇಳಿದರು.

ಮಣಿಪಾಲ್ ಆರೋಗ್ಯ ಕಾರ್ಡ್ ಹೊಂದಿರುವವರಿಗೆ ತಜ್ಞ ಮತ್ತು ವಿಶೇಷ ತಜ್ಞ ವೈದ್ಯರ ಸಮಾಲೋಚನೆ ಶುಲ್ಕದಲ್ಲಿ ಶೇಕಡಾ 50 ರಿಯಾಯಿತಿ (ಒ ಪಿ ಡಿ ದಿನಗಳಂದು ) ಹೊರರೋಗಿ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಶೇಕಡಾ 30 ರಿಯಾಯಿತಿ, ಹೊರರೋಗಿ ರೇಡಿಯಾಲಜಿ ಪರೀಕ್ಷೆಗಳು (ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್ ಇತ್ಯಾದಿ) ಶೇಕಡಾ 20 ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ 20 ರಿಯಾಯಿತಿ, ಹೊರರೋಗಿ ಡಯಾಲಿಸಿಸ್ ₹100, ಔಷಧಾಲಯಗಳಲ್ಲಿ ಶೇಕಡಾ 12ರವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ ದೊರೆಯಲಿದೆ.

ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 300 / – ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ 25 ವರ್ಷದ ಒಳಗಿನ ಮಕ್ಕಳಿಗೆ ₹ 600/- ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 750/- . ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 500/-, ಕುಟುಂಬಕ್ಕೆ ₹ 800/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 950/- ಆಗಿರುತ್ತದೆ.

ಆರೋಗ್ಯಕಾರ್ಡ್‌ನ ಬೆಳೆದು ಬಂದ ರೀತಿಯ ಅವಲೋಕನ ನೀಡಿದ ಮಾಹೆ ಮಣಿಪಾಲದ ಸಹ ಕುಲಪತಿ ಡಾ ಶರತ್ ಕುಮಾರ್ ರಾವ್ ಅವರು, “ಮಾಹೆ ಮಣಿಪಾಲದ ಕುಲಪತಿ ಡಾ.ರಾಮದಾಸ್ ಪೈ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು 2000 ರಲ್ಲಿ ಪ್ರಾರಂಭಿಸಲಾಯಿತು.

ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯ ವಾಗದಿದ್ದರೂ ಎಲ್ಲರಿಗೂ ರಿಯಾಯಿತಿ ದರದಲ್ಲಿ ಲಭ್ಯವಾಗಬೇಕು ಎಂಬುದು ಇದರ ಉದ್ದೇಶವಾಗಿತ್ತು.

ಆರಂಭದಲ್ಲಿ, ಈ ಯೋಜನೆಯು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿ ತದನಂತರ ಇತರ ಜಿಲ್ಲೆಗಳಿಗೆ ವಿಸ್ತರಿಸಲಾಯಿತು.

ಈಗ ಈ ಯೋಜನೆಯು ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಚಿಕ್ಕಮಗಳೂರು ಮತ್ತು ಬಳ್ಳಾರಿ ಸೇರಿದಂತೆ ಕರಾವಳಿ ಮತ್ತು ಮಧ್ಯ ಕರ್ನಾಟಕದ ಸುಮಾರು 12-15 ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಿಸಿದೆ ಮತ್ತು ಹಾಗೂ ಕೇರಳ, ಗೋವಾ ಮುಂತಾದ ನೆರೆಯ ರಾಜ್ಯಗಳ ಜನರೂ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

2019 ರಲ್ಲಿ, ಮಣಿಪಾಲ್ ಆರೋಗ್ಯ ಕಾರ್ಡ್ ಪೇಪರ್ ಮೋಡ್‌ನಿಂದ ಡಿಜಿಟಲ್ ಮೋಡ್‌ಗೆ ಸ್ಥಳಾಂತರಗೊಂಡಿತು ಮತ್ತು ಒಂದು ವರ್ಷದ ಕಾರ್ಡ್ ಜೊತೆಗೆ ಎರಡು ವರ್ಷ ಅವಧಿಯ ಕಾರ್ಡ್ ಅನ್ನು ಪರಿಚಯಿಸಲಾಯಿತು.

ಮುಂಬರುವ ವರ್ಷಗಳಲ್ಲಿ ಸಂಪೂರ್ಣವಾಗಿ ಕಾರ್ಡ್ ರಹಿತ ಮತ್ತು ಗ್ರಾಹಕ ಸ್ನೇಹಿಯಾಗಿಸುವ ಗುರಿ ಹೊಂದಿದ್ದೇವೆ. ಕಳೆದ 22 ವರ್ಷಗಳಲ್ಲಿ, ಸಾಮಾಜಿಕ ಕಾಳಜಿಯೊಂದಿಗೆ ನಾವು ಲಕ್ಷಾಂತರ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದ್ದೇವೆ ಮತ್ತು 2022 ರಲ್ಲಿ ನಾವು 6,40,000 ಸದಸ್ಯರನ್ನು ನೋಂದಾಯಿಸಿದ್ದೇವೆ.

ವರ್ಷದಿಂದ ವರ್ಷಕ್ಕೆ ಸದಸ್ಯರ ನೋಂದಣಿ ಹೆಚ್ಚಾಗುತ್ತಿರುವುದು ಮಣಿಪಾಲ ಆರೋಗ್ಯಕಾರ್ಡ್‌ನ ಜನಪ್ರಿಯತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ಮಾತನಾಡಿ “ಮಣಿಪಾಲ ಆರೋಗ್ಯಕಾರ್ಡ್ ಹೊಂದಿರುವವರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿ.ಎಂ.ಎ.ಪೈ ಆಸ್ಪತ್ರೆ-ಉಡುಪಿ, ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆ.ಎಂ.ಸಿ.ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ- ಕಟೀಲು ಮತ್ತು ಮಣಿಪಾಲ್ ಆಸ್ಪತ್ರೆ -ಗೋವಾ ಗಳಲ್ಲಿ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು. ಇತರ ಆಸ್ಪತ್ರೆಗಳ ರಿಯಾಯಿತಿ ಮಾದರಿಗಳನ್ನು ತಿಳಿಯಲು ಮತ್ತು ಹೆಚ್ಚಿನ ವಿವರಗಳನ್ನು www.manipalhealthcard.com ಗೆ ಲಾಗ್ ಇನ್ ಆಗುವುದರ ಮೂಲಕ ತಿಳಿದುಕೊಳ್ಳಬಹುದು . ಸಾರ್ವಜನಿಕರು ಮಣಿಪಾಲ್ ಆರೋಗ್ಯಕಾರ್ಡ್ ಅನ್ನು ಎಲ್ಲಾ ಅಧಿಕೃತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ. 9980854700/ 08202923748 ಗೆ ಸಂಪರ್ಕಿಸಬಹುದು” ಎಂದು ಹೇಳಿದರು. ಕೆಎಂಸಿ ಮಣಿಪಾಲ ಡೀನ್ ಡಾ ಪದ್ಮರಾಜ್ ಹೆಗ್ಡೆ, ಕೆ ಎಂ ಸಿ ಮಂಗಳೂರು ಡೀನ್ -ಡಾ ಬಿ ಉನ್ನಿಕೃಷ್ಣನ್ ಉಪಸ್ಥಿತರಿದ್ದರು.

Tags: #kmc#manipal#healthcard
Previous Post

ಸರ್ಕಸ್” ತುಳು ಸಿನಿಮಾ ಜೂ. 23ಕ್ಕೆ ವಿಶ್ವದಾದ್ಯಂತ ಬಿಡುಗಡೆ..!!

Next Post

ಉಡುಪಿ :ಜುಲೈ 2 “ನನ್ನ ಹಾಡು ನನ್ನದು” ಸೀಸನ್ 5 ಸುಗಮ ಸಂಗೀತ ಸ್ಪರ್ಧೆಯ ಆಡಿಷನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಜುಲೈ 2 "ನನ್ನ ಹಾಡು ನನ್ನದು" ಸೀಸನ್ 5 ಸುಗಮ ಸಂಗೀತ ಸ್ಪರ್ಧೆಯ ಆಡಿಷನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025

Recent News

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved