Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೆಬ್ರಿ:ಕಜ್ಕೆ ಶ್ರೀಮಠದಲ್ಲಿ ಶಿವಸುಜ್ಜಾನತೀರ್ಥ ಮಹಾಸ್ವಾಮೀಜಿ ಚಾತುರ್ಮಾಸ : ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ..!!

Dhrishya News by Dhrishya News
03/07/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಹೆಬ್ರಿ : ಕಜ್ಕೆಯಲ್ಲಿರುವ ಹಾಸನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಶಾಖಾ ಮಠದಲ್ಲಿ ಜುಲೈ 03ರಿಂದ ಸೆಪ್ಟೆಂಬರ್ 29ರ ತನಕ ನಡೆಯಲಿರುವ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶ್ರೀ ಶಿವಸುಜ್ಜಾನತೀರ್ಥ ಮಹಾಸ್ವಾಮೀಜಿಗಳವರ 41ನೇ ಚಾತುರ್ಮಾಸ್ಯ ವೃತಾನುಷ್ಠಾನದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀ ಅನ್ನಪೂರ್ಣೇಶ್ವರಿ ವೇದಿಕೆಯ ಶ್ರೀ ಸುಜ್ಞಾನ ಮಂಟಪದಲ್ಲಿ ಭಾನುವಾರ ಮೂಡಬಿದರೆ ಎಸ್‌ಕೆಎಫ್‌ ಉದ್ಯಮ ಸಮೂಹದ ಆಡಳಿತ ನಿರ್ದೇಶಕ ಡಾ.ಜಿ.ರಾಮಕೃಷ್ಣ ಆಚಾರ್‌ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು  ಭಕ್ತ ಸಮೂಹ ಸೇರಿ ಕಜ್ಕೆ ಶ್ರೀಮಠದಲ್ಲಿ ಅನ್ನಪೂರ್ಣೇಶ್ವರಿ ದೇವಸ್ಥಾನ ನಿರ್ಮಾಣದ ಪುಣ್ಯ ಕಾರ್ಯದಲ್ಲಿ ಭಾಗಿಯಾಗುತ್ತಿರುವುದು ಅತ್ಯಂತ ಶ್ಲಾಘನೀಯ. ಎಲ್ಲರ ಕೈ ಸೇರಿದಾಗ ಮಾತ್ರ ಮಹತ್ವದ ಸೇವೆ ಮಾಡಲು ಸಾಧ್ಯವಿದೆ. ಮುಂದಿನ ವರ್ಷಾರಂಭದಲ್ಲಿ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪ ಹೊಂದಿದ್ದೇವೆ. ಸಾಮಾನ್ಯ ಭಕ್ತರೇ ದೇವಸ್ಥಾನದ ಆಸ್ತಿ ಎಂದು ಹೇಳಿದರು

ಒಳ್ಳೇಯ ಮನಸ್ಸು ಇದ್ದಾಗ ಮಾತ್ರ ಒಳ್ಳೇಯ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂಬುದಕ್ಕೆ ಕಜ್ಕೆ ಶ್ರೀಮಠದಲ್ಲಿ ಗುರುಸೇವೆ ಮಾಡುವ ನಿಸ್ವಾರ್ಥ ಮನಸ್ಸಿನ ತಂಡವೇ ಸಾಕ್ಷಿ ಎಂದು ಡಾ.ಜಿ.ರಾಮಕೃಷ್ಣ ಆಚಾರ್‌ ಹೇಳಿದರು.

ಅನಂತಶ್ರೀ ವಿಭೂಷಿತ ಶ್ರೀ ಶಿವಸುಜ್ಜಾನತೀರ್ಥ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಹೃದಯ ಶ್ರೀಮಂತಿಕೆಯ ಸಾಮಾನ್ಯ ಭಕ್ತ ಸಮೂಹವೇ ಕಜ್ಕೆಯಲ್ಲಿ ಎಲ್ಲರ ಸಹಕಾರದಲ್ಲಿ ದೇವಸ್ಥಾನ ನಿರ್ಮಾಣದ ಹೊಣೆ ಹೊತ್ತಿರುವುದು ಅತ್ಯಂತ ಸಂತಸ ತಂದಿದೆ, ಧರ್ಮ ಬಿಟ್ಟು ನಡೆದಾಗ ಬದುಕು ಅನರ್ಥವಾಗುತ್ತದೆ. ನಾವು ಧರ್ಮದಲ್ಲಿ ನಡೆದು ಚಾತುರ್ಮಾಸದಲ್ಲಿ ಸೇವೆ ಮಾಡಿದ ಬದುಕು ಪಾವನವಾಗುತ್ತದೆ ಎಂದರು.

೪೧ನೇ ಚಾತುರ್ಮಾಸ್ಯ ವೃತ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಲ್ಗೋಳಿ ವಿಶ್ವನಾಥ ಆಚಾರ್ಯ ಅಧ್ಯಕ್ಷತೆ ವಹಿಸಿ ಚಾತುರ್ಮಾಸ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು.

ವೇಲಾಪುರಿ ವಿಶ್ವನಾಥ ಶರ್ಮ ಧಾರ್ಮಿಕ ಉಪನ್ಯಾಸ ನೀಡಿದರು. ಮಾರಾಳಿ ಮಹಾಗಣಪತಿ ದೇವಸ್ಥಾನದ ಅರ್ಚಕ ಬಾಲಕೃಷ್ಣ ಕರಬ ಶುಭಾಶಂಸನೆ ಮಾಡಿದರು.

Previous Post

ಮಂಗಳೂರು : ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ – ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ..!!

Next Post

ಕಾಪು:ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಲ್ಕೊರೆತ ಪ್ರದೇಶಕ್ಕೆ ಮಾಂಕಾಳ ವೈದ್ಯ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು:ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಲ್ಕೊರೆತ ಪ್ರದೇಶಕ್ಕೆ ಮಾಂಕಾಳ ವೈದ್ಯ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News