Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾದ ವಿನೂತನ ಕಾರ್ಯಕ್ರಮ “ಆರೋಗ್ಯ ಶನಿವಾರ”

Dhrishya News by Dhrishya News
21/07/2023
in मौसम
0
0
SHARES
27
VIEWS
Share on FacebookShare on Twitter

ಮಲೇರಿಯಾ, ಡೆಂಗ್ಯೂ, ಜ್ವರ, ನೆಗಡಿ ಕಾಯಿಲೆಗಳು ಯಾವಾಗ ಬರುತ್ತವೆ, ಈ ರೋಗಗಳು ಏಕೆ ಬರುತ್ತವೆ, ಯಾವುದರಿಂದ ಬರುತ್ತದೆ, ಅವುಗಳ ಲಕ್ಷಣಗಳೇನು, ಈ ರೋಗಗಳು ಬಾರದಂತೆ ಏನು ಮಾಡಬೇಕು, ನಮ್ಮ ಆರೋಗ್ಯವನ್ನು ಸುರಕ್ಷಿತವಾಗಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕು. ಈ ಎಲ್ಲಾ ವಿಷಯಗಳ ಬಗ್ಗೆ ಶಾಲಾ ಮಕ್ಕಳಿಗೆ ನಿರಂತರವಾಗಿ ತಿಳಿಸುವ ವಿನೂತನ ಮತ್ತು ಬಹುಶ: ರಾಜ್ಯದಲ್ಲೇ ಪ್ರಥಮವಾದ “ಆರೋಗ್ಯ ಶನಿವಾರ” ಎಂಬ ಕಾರ್ಯಕ್ರಮ ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾಗಿದ್ದು, ಇದರಿಂದ ಉತ್ತಮ ಫಲಿತಾಂಶ ಸಹ ಕಂಡು ಬರುತ್ತಿದೆ.

ಉಡುಪಿ ಜಿಲ್ಲೆಯಲ್ಲಿರುವ 1098 ಸರಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ಖಾಸಗಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ 1.61 ಲಕ್ಷ ಮಕ್ಕಳಿಗೆ ಪ್ರತೀ ಶನಿವಾರ, ಪ್ರಸ್ತುತ ಕಾಲಗಳಲ್ಲಿ (ಬೇಸಿಗೆ, ಮಳೆಗಾಲ, ಚಳಿಗಾಲ) ಕಂಡು ಬರುವ ಕಾಯಿಲೆಗಳ ಬಗ್ಗೆ ಮತ್ತು ಅವುಗಳು ಬಾರದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜೂನ್ ತಿಂಗಳಿನಿ0ದ “ಆರೋಗ್ಯ ಶನಿವಾರ” ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ಈ ಕಾರ್ಯಕ್ರಮದ ಮೂಲಕ ಪ್ರತೀ ಶನಿವಾರ ಬೆಳಗ್ಗೆ ಎಲ್ಲಾ ಶಾಲಾ ಕೊಠಡಿಯಲ್ಲಿ ಆರೋಗ್ಯ ಅರಿವು ವಿಷಯಗಳ ಬಗ್ಗೆ ತರಬೇತಿ ಪಡೆದಿರುವ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ , ಪ್ರಸಕ್ತ ಸಮಯದಲ್ಲಿ ಕಂಡು ಬರುವ ಕಾಯಿಲೆಗಳ ಬಗ್ಗೆ ಸಂಪೂರ್ಣ ಅರಿವು ಮೂಡಿಸುತ್ತಿದ್ದಾರೆ. ಶಾಲೆಗೆ ಸಮೀಪವಿರುವ ಆರೋಗ್ಯ ಕೇಂದ್ರದ ಸಿಬ್ಬಂದಿ ಮೂಲಕ ಸಹ ಮಾಹಿತಿ ನೀಡಿ, ಮಕ್ಕಳ ಆರೋಗ್ಯದ ಸುರಕ್ಷತೆಗೆ ಹಾಗೂ ಮಕ್ಕಳ ಮೂಲಕ ಅವರ ಪೋಷಕರಿಗೂ ಕೂಡಾ ಆರೋಗ್ಯ ಕಾಳಜಿಯ ಬಗ್ಗೆ ಅರಿವು ಮೂಡಿಸಿ, ಆರೋಗ್ಯಯುತ ಸಮುದಾಯ ನಿರ್ಮಾಣಗೊಳ್ಳಲು ಈ ಕಾರ್ಯಕ್ರಮ ಪ್ರಮುಖ ವೇದಿಕೆಯಾಗಿದೆ.

ಮಲೇರಿಯ, ಡೆಂಗ್ಯೂ ಸೇರಿದಂತೆ ಹಲವು ಕಾಯಿಲೆಗಳು ಸೊಳ್ಳೆಗಳ ಮೂಲಕ ಹಾಗೂ ಅನೈರ್ಮಲ್ಯದ ಮೂಲಕ ಹರಡಲಿದ್ದು, ಇದನ್ನು ತಡೆಯಲು ಶಾಲೆ ಮತ್ತು ಮನೆಯ ಪರಿಸರದಲ್ಲಿ ಕೊಳಚೆ ನೀರು ನಿಲ್ಲದಂತೆ ಹಾಗೂ ಸ್ವಚ್ಛತೆಯನ್ನು ಕಾಪಾಡುವುದರಿಂದ ಕಾಯಿಲೆಗಳು ಹರಡದಂತೆ ನಿಯಂತ್ರಿಸಬಹುದು ಎಂಬ ಬಗ್ಗೆ ಸೇರಿದಂತೆ ದೈನಂದಿನ ಚಟುವಟಿಕೆಯಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದು, ಪ್ರಥಮ ಚಿಕಿತ್ಸೆ ವಿಧಾನಗಳು ಸೇರಿದಂತೆ ಹಲವು ಆರೋಗ್ಯ ಸಂಬoಧಿತ ವಿಷಯಗಳ ಬಗ್ಗೆ ಮಕ್ಕಳಿಗೆ ಸರಳವಾಗಿ ಹಾಗೂ ಪರಿಣಾಮಕಾರಿಯಾಗಿ ತಿಳಿಸುವ ಮೂಲಕ ಈ ಸಂದೇಶಗಳು ಅವರ ಮನೆಗಳಿಗೂ ತಲುಪುವಂತೆ ಮಾಡಲಾಗುತ್ತಿದೆ. ಮಳೆಗಾಲದ ಸಮಯದಲ್ಲಿ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ, ಮಕ್ಕಳು ವಾಸಿಸುವ ಪ್ರದೇಶದಲ್ಲಿ ಬೀಳಬಹುದಾದ ಮಳೆಯ ಪ್ರಮಾಣ, ಅಪಾಯಕಾರಿಯಾಗಿ ತುಂಬಿ ಹರಿಯುತ್ತಿರುವ ಹಳ್ಳ ಮತ್ತು ತೋಡುಗಳನ್ನು ದಾಟದಂತೆ ಹಾಗೂ ಅನಿವಾರ್ಯವಾಗಿ ದಾಟಬೇಕಾದ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಪರ್ಯಾಯ ರಸ್ತೆ ಬಳಸುವ ಬಗ್ಗೆ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಸಹ ವಿದ್ಯಾರ್ಥಿಗಳಿಗೆ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ.

ಜಿಲ್ಲೆಯ ಬಹುತೇಕ ಪ್ರೌಢಶಾಲೆಗಳಲ್ಲಿ ಎಲ್.ಇ.ಡಿ ವ್ಯವಸ್ಥೆ ಇದ್ದು , ಉಡುಪಿ ಜಿಲ್ಲಾ ಪಂಚಾಯತ್ನ ಸಂಪನ್ಮೂಲ ಕೇಂದ್ರದಲ್ಲಿರುವ ಸ್ಟುಡಿಯೋ ಮೂಲಕ ವೈದ್ಯರಿಂದ ಹಾಗೂ ವಿಷಯ ತಜ್ಞರಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮಗಳ ನೇರ ಪ್ರದರ್ಶನಕ್ಕೆ ಕೂಡಾ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮದ ಲೈವ್ ಲಿಂಕ್ ನ್ನು ಎಲ್ಲಾ ಶಾಲೆಗಳ ಮುಖ್ಯೋಪಧ್ಯಾಯರಿಗೆ ಕಳುಹಿಸಿ, ಲ್ಯಾಪ್ ಟಾಪ್ ಮೂಲಕ ಶಾಲೆಯಲ್ಲಿ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಂಬAದಿತ ಯೂಟ್ಯೂಬ್ ವೀಡಿಯೋಗಳ ಮೂಲಕ ಸಹ ಅರಿವು ಮೂಡಿಸಿ, ಯಾವುದೇ ಹಂತದಲ್ಲೂ ಮಕ್ಕಳು ಈ ಕಾರ್ಯಕ್ರಮದಿಂದ ವಂಚಿತರಾಗದoತೆ ನೋಡಿಕೊಳ್ಳಲಾಗುತ್ತಿದೆ.

ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿ ಶಾಲೆಗೆ ಗೈರು ಹಾಜರಾಗುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ದೈಹಿಕ ಬೆಳವಣಿಗೆಗೆ ತೊಂದರೆಯಾಗುತ್ತದೆ. , ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು ಮತ್ತು ಅವರನ್ನು ಆಸ್ಪತ್ರೆಯಿಂದ ದೂರ ಉಳಿಸುವ ಉದ್ದೇಶದಿಂದ ಪ್ರತೀ ಶನಿವಾರ ಆರೋಗ್ಯ ಸಂಬoದಿತ ಅರಿವು ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಇದರಿಂದಾಗಿ ಮಕ್ಕಳಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಾಧ್ಯವಾಗುತ್ತದೆ.

Previous Post

ಎರ್ಮಾಳು ಶ್ರೀ ಜನಾರ್ದನ ಜನಕಲ್ಯಾಣ ಸಭಾ ಭವನದಲ್ಲಿ 1694 ನೇ ಮದ್ಯವರ್ಜನ ಶಿಬಿರ ಉದ್ಘಾಟನೆ..!! 

Next Post

ಖಾಸಗಿ ಬಸ್ ಮತ್ತು ಸ್ಕೂಟರ್ ಡಿಕ್ಕಿ – ಸ್ಕೂಟರ್ ಸವಾರ ಸ್ಥಳದಲ್ಲಿ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖಾಸಗಿ ಬಸ್ ಮತ್ತು ಸ್ಕೂಟರ್ ಡಿಕ್ಕಿ - ಸ್ಕೂಟರ್ ಸವಾರ ಸ್ಥಳದಲ್ಲಿ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026

Recent News

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
imunify-bot-check