Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ:ವಿಶ್ವ ಮೆದುಳು ದಿನಾಚರಣೆ ಪ್ರಯುಕ್ತ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮೆದುಳು ಆರೋಗ್ಯ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮದ ಆಯೋಜನೆ..!! 

Dhrishya News by Dhrishya News
22/07/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಮಣಿಪಾಲ :ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು 22ನೇ ಜುಲೈ 2023 ರಂದು ಮೆದುಳಿನ ಆರೋಗ್ಯ ಜಾಗೃತಿ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿಶ್ವ ಮೆದುಳಿನ ದಿನವನ್ನು ಆಚರಿಸಿತು. ಪ್ರತಿ ವರ್ಷ ಜುಲೈ 22 ಅನ್ನು ವಿಶ್ವ ಮೆದುಳಿನ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ಘೋಷ ವಾಕ್ಯ “ಮೆದುಳಿನ ಆರೋಗ್ಯ ಮತ್ತು ಅಂಗವೈಕಲ್ಯ” ಈ ಅಂತರಾಷ್ಟ್ರೀಯ ಆಂದೋಲನವು ಮಾಹಿತಿಯ ಅಂತರವನ್ನು ಮುಚ್ಚಲು ಮತ್ತು ಮೆದುಳಿನ ಆರೋಗ್ಯದ ದುರ್ಬಲತೆಗಳ ಬಗ್ಗೆ ಸಾರ್ವಜನಿಕ ಅರಿವನ್ನು ಹೆಚ್ಚಿಸಲು ಶ್ರಮಿಸುತ್ತದೆ. ಇದು ವಿಕಲಾಂಗ ವ್ಯಕ್ತಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯವನ್ನು ಒದಗಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತದೆ.

ಮೆದುಳು ಮಾನವ ದೇಹದ ಬಹು ಮುಖ್ಯ ಅಂಗವಾಗಿದೆ, ನಮ್ಮ ಭಾವನೆಗಳು ಆಲೋಚನೆಗಳು ಮತ್ತು ಎಲ್ಲಾ ಕ್ರೀಯೆಗಳಿಗೆ ಕಾರಣವಾಗಿದೆ. ಮೆದುಳಿನ ಆರೋಗ್ಯವನ್ನು ಕಾಪಾಡಿಕೊಂಡರೆ, ಇದರಿಂದ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಂಡಂತೆ. ಆದ್ದರಿಂದ ಉತ್ತಮ ಸಮತೋಲಿತ ಆಹಾರ ಮತ್ತು ವ್ಯಾಯಾಮದ ಮೂಲಕ ಮೆದುಳಿನ ಆರೋಗ್ಯವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇದನ್ನು ಗಮನಿಸಿ ವಿಶ್ವ ಆರೋಗ್ಯ ಸಂಸ್ಥೆಯು ಮೆದುಳಿನ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಪ್ರತೀ ವರ್ಷ ಜುಲೈ 22ರಂದು ಮೆದುಳು ದಿನವನ್ನಾಗಿ ಆಚರಿಸುತ್ತದೆ ಎಂದು ಹೇಳಿದರು.

ಗೌರವ ಅತಿಥಿಗಳಾಗಿ ಮಾತನಾಡಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ ಶೆಟ್ಟಿ ಅವರು, ಮೆದುಳಿನ ಕಾಯಿಲೆಗೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳಿಗೆ ಇಂದು ಚಿಕಿತ್ಸೆ ಲಭ್ಯವಿದೆ , ಆದರೆ ಅದು ಬೇಗ ಪತ್ತೆಹಚ್ಚಿ ಸಕಾಲದಲ್ಲಿ ದೊರೆಯಬೇಕು. ಮೆದುಳಿನ ಚಿಕಿತ್ಸೆಗೆ ಸಂಬಂದಿತ ಹೊಸ ತಂತ್ರಜ್ಞಾನಗಳು , ತಜ್ಞ ವೈದ್ಯರು, ವಿಶೇಷ ವಿಭಾಗಗಳು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಲಭ್ಯವಿದೆ. ಇದನ್ನು ಸಾರ್ವಜನಿಕರು ಸಕಾಲದಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಮತ್ತೋರ್ವ ಗೌರವ ಅತಿಥಿ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್, ಮೆದುಳಿನ ಆರೋಗ್ಯದ ಕುರಿತಾದ ಭಿತ್ತಿಪತ್ರ ( ಪೋಸ್ಟರ್) ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.

ಕಾರ್ಯಕ್ರಮದ ಕುರಿತು ಅವಲೋಕನ ನೀಡಿದ ನರರೋಗ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥರಾದ ಡಾ ಅಪರ್ಣಾ ಆರ್ ಪೈ ಅವರು ಮೆದುಳಿನ ದಿನದ ಜಾಗೃತಿ ಅಂಗವಾಗಿ ಆಸ್ಪತ್ರೆಯ ಫೇಸ್ಬುಕ್ ಜಾಲತಾಣದಲ್ಲಿ ಮೆದುಳು ಆರೋಗ್ಯದ ಕುರಿತು ಸರಣಿ ಮಾತು ಇಂದು ಬಿತ್ತರಗೊಳ್ಳೊತ್ತಿದೆ ಎಂದರು. ನರರೋಗ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ ರಾಘವೇಂದ್ರ ನಾಯಕ ಅವರು ಈ ವರ್ಷದ ಘೋಷ ವಾಕ್ಯವಾದ, ಮೆದುಳಿನ ಆರೋಗ್ಯ ಮತ್ತು ಅಂಗವೈಕಲ್ಯದ ಕುರಿತು ವಿವರವಾದ ಅವಲೋಕನ ನೀಡಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ ಶ್ರೀಪದ್ಮ ಪಿ ವಿ ಕಾರ್ಯಕ್ರಮ ನಿರೂಪಿಸಿದರು.

Previous Post

ಮಣಿಪಾಲ : ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ- ಇಬ್ಬರ ಬಂಧನ – 5 ಮಂದಿ ಯುವತಿಯರ ರಕ್ಷಣೆ..!!

Next Post

ಮಣಿಪಾಲ:ಐ. ಟಿ. ಐ  ಕೋರ್ಸುಗಳ ಪ್ರವೇಶಾತಿಗಾಗಿ ಎಸ್. ಎಸ್. ಎಲ್. ಸಿ ಉತ್ತೀರ್ಣ ಹಾಗೂ ಪಿ. ಯು. ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ಐ. ಟಿ. ಐ  ಕೋರ್ಸುಗಳ ಪ್ರವೇಶಾತಿಗಾಗಿ ಎಸ್. ಎಸ್. ಎಲ್. ಸಿ ಉತ್ತೀರ್ಣ ಹಾಗೂ ಪಿ. ಯು. ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News