Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ – ಹಡಿಲು ಭೂಮಿ ಕೃಷಿ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ..!!

Dhrishya News by Dhrishya News
23/07/2023
in ಕರಾವಳಿ, ಸುದ್ದಿಗಳು
0
0
SHARES
44
VIEWS
Share on FacebookShare on Twitter

ಉಡುಪಿ : ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಅವರು ಗದ್ದೆ ಉಳುಮೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅವರು ಚಿಕ್ಕ ಹಿಡುವಳಿ, ಕೂಲಿಕಾರರ ಸಮಸ್ಯೆ ಹಾಗೂ ಲಾಭದಾಯಕವಲ್ಲದ ಕಾರಣದಿಂದಾಗಿ ಜನರು ಕೃಷಿಯಿಂದ ವಿಮುಖರಾಗಿ ಸಾವಿರಾರು ಎಕರೆ ಭತ್ತದ ಗದ್ದೆಗಳನ್ನ ಹಡಿಲು ಬಿಟ್ಟಿರುವುದನ್ನು ಗಮನದಲ್ಲಿರಿಸಿ ಗ್ರಾಮ ಪಂಚಾಯತ್ ವಾರು ಗುರಿಯನ್ನು ನಿಗದಿಗೊಳಿಸಿ , ಅಧೀನ ಸಿಬ್ಬಂದಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಕಳೆದ ಎರಡು ತಿಂಗಳುಗಳಿಂದ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಈಗಾಗಲೇ 1034 ಎಕ್ರೆ ಭೂಮಿಯನ್ನು ಜಿಲ್ಲೆಯಲ್ಲಿ ಗುರುತಿಸಿ ಸಂಜೀವಿನಿ ಸದಸ್ಯರು ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕುಂದಾಪುರ ತಾಲೂಕಿನ ಅಂಪಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡಾಳಿಯಲ್ಲಿ 12 ಎಕರೆ ಹಡಿಲು ಭೂಮಿಯಲ್ಲಿ ಭತ್ತದ ಕೃಷಿಯ ನಾಟಿ ಮಾಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಖುದ್ದಾಗಿ ಭಾಗವಹಿಸಿದ್ದರು. ಕುಂದ ನಾಡು ರೈತ ಉತ್ಪಾದಕ ಸಂಸ್ಥೆ ಹಾಗೂ ಅಂಪಾರು ರೋಟರಿ ಕ್ಲಬ್ ರವರ ಸಹಯೋಗದಲ್ಲಿ ವನಶ್ರೀ ಸಂಜೀವಿನಿ ಒಕ್ಕೂಟದ ನೂರಾರು ಸದಸ್ಯರು ಭತ್ತದ ನಾಟಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಆನಂತರ ಮಳೆಯ ನಡುವೆಯೇ ಗದ್ದೆಗೆ ಇಳಿದ ಸಿಇಒ ಪ್ರಸನ್ನ ಅವರು ಮಳೆಯ‌ನ್ನು ಲೆಕ್ಕಿಸದೇ ಗದ್ದೆಯಲ್ಲಿ ಕೋಣಗಳ ಮೂಲಕ ಉಳುಮೆ ಮಾಡುವುದರ ಮೂಲಕ ಹಾಗೂ ಭತ್ತದ ನೇಜಿಯನ್ನು ನೆಡುವುದರ ಮೂಲಕ ಹಡಿಲು ಭೂಮಿ ಕೃಷಿಯ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭಾರತಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾ ರೂಪ, ಕುಂದನಾಡು ರೈತ ಉತ್ಪಾದಕ ಸಂಸ್ಥೆಯ ಕಾರ್ಯದರ್ಶಿ ಉಮೇಶ್ ಶಾನ್ಕಟ್, ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೋಷನಿ ಶೆಟ್ಟಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ನ ಸದಸ್ಯರು, ಸಂಜೀವಿನಿ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಸದಸ್ಯರು ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದು, ನೇಜಿಯನ್ನು ನೆಟ್ಟರು. ಕಾರ್ಯಕ್ರಮವನ್ನು ಗ್ರಾಮೀಣ ಸೊಗಡಿನ ಸಾಂಪ್ರದಾಯಿಕ ಶೈಲಿಯಲ್ಲಿ ವಿಶಿಷ್ಟವಾಗಿ ಆಯೋಜಿಸಲಾಗಿತ್ತು.

Previous Post

ಮಣಿಪಾಲ:ಐ. ಟಿ. ಐ  ಕೋರ್ಸುಗಳ ಪ್ರವೇಶಾತಿಗಾಗಿ ಎಸ್. ಎಸ್. ಎಲ್. ಸಿ ಉತ್ತೀರ್ಣ ಹಾಗೂ ಪಿ. ಯು. ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಸಾರ್ವಜನಿಕರು ಚೀನಾದ ಲೋನ್ ಆ್ಯಪ್‌ಗಳ ಬಲೆಗೆ ಬೀಳಬಾರದು; ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾರ್ವಜನಿಕರು ಚೀನಾದ ಲೋನ್ ಆ್ಯಪ್‌ಗಳ ಬಲೆಗೆ ಬೀಳಬಾರದು; ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check