Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಾರ್ವಜನಿಕರು ಚೀನಾದ ಲೋನ್ ಆ್ಯಪ್‌ಗಳ ಬಲೆಗೆ ಬೀಳಬಾರದು; ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ..!!

Dhrishya News by Dhrishya News
23/07/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸಲಾದ ಸುಳ್ಳು ಸಾಲದ ಆ್ಯಪ್‌ಗಳಿಂದ ವಂಚನೆಗೊಳಗಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಕಾರಣಕ್ಕೂ ಇಂತಹ ಆ್ಯಪ್‌ಗಳ ಬಲೆಗೆ ಬೀಳಬಾರದು ಎಂದು ಮಂಗಳೂರು ಪೊಲೀಸ್‌ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಇಂಥ ಹಲವು ಪ್ರಕರಣಗಳು ಮಂಗಳೂರು ಸಿಟಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಂದಿರುವ ಕಾರಣ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್  ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಇಂತಹ ಮೋಸದ ಆಯಪ್‌ಗಳನ್ನು ಪರಿಶೀಲನೆ ನಡೆಸದೆ ಡೌನ್‌ಲೋಡ್‌ ಮಾಡಿಕೊಳ್ಳುವುದು ಅಪಾಯಕಾರಿ. ಆಯಪ್‌ನಲ್ಲಿ ಕಡಿಮೆ ದರದಲ್ಲಿ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸುಲಭ ಮರುಪಾವತಿಯ ಆಸೆ ತೋರಿಸಿ ಸಾಲದ ಭರವಸೆ ನೀಡುತ್ತಾರೆ. ಪತ್ತೆಯಾಗದ ಮೂಲಗಳಿಂದ ಮಾಡಿದ ವಿಡಿಯೊ ಕಾಲ್‌ ಹಾಗೂ ಇಂಟರ್‌ನೆಟ್‌ ಕರೆಗಳ ಮೂಲಕ ಸಾರ್ವಜನಿಕರನ್ನು ಈ ಜಾಲಕ್ಕೆ ಸೆಳೆಯಲಾಗುತ್ತದೆ.

ತಮಗೆ ಬರುವಂತಹ ಕಾಲ್‌ಗ‌ಳು ಪ್ರತಿಷ್ಠಿತ ಹಣಕಾಸು ಸಂಸ್ಥೆಗಳಿಂದ ಬರಲಾಗಿದೆ ಎಂಬ ಭರವಸೆಯನ್ನು ನೀಡಲಾಗುತ್ತದೆ. ನೊಂದವರ ಬ್ಯಾಂಕ್‌ ಖಾತೆಯ ವಿವರ ಹಾಗೂ ಅವರ ವೈಯಕ್ತಿಕ ವಿವರ ಭಾವಚಿತ್ರಗಳ ಸಮೇತ ಲೋನ್‌ ಪ್ರಕ್ರಿಯೆಯನ್ನು ಪೂರೈಸುವ ನೆಪದಲ್ಲಿ ಪಡೆಯಲಾಗುತ್ತದೆ. ನಂತರ ಕೇಳಿದ ಸಾಲವನ್ನು ಅವರು ನೀಡಿದ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುತ್ತದೆ. ಅಂದಿನಿಂದಲೇ ಈ ಕರಾಳ ಸಾಲದ ಸುಳಿ ಪ್ರಾರಂಭವಾಗುತ್ತದೆ.

ಇಂತಹ ಸೈಬರ್‌ ವಂಚಕರು ಪೀಡಿತರಿಗೆ ಸಾಲ ಮರುಪಾವತಿಯ ನೆಪದಲ್ಲಿ ಬ್ಲಾಕ್‌ಮೇಲ್ ಮಾಡಲು ಪ್ರಾರಂಭಿಸುತ್ತಾರೆ. ಅವರ ಬಳಿ ಇರುವ ಭಾವಚಿತ್ರಗಳು ಅಶ್ಲೀಲ ರೀತಿಯಲ್ಲಿ ಪ್ರಕಟಸುವ ಬೆದರಿಕೆಯನ್ನು ನೀಡುತ್ತಾರೆ. ಮತ್ತು ಪ್ರಕಟಿಸಿ ಕೂಡಾ ಅವರಿಗೆ ಮಾನಸಿಕ ಹಿಂಸೆಯನ್ನು ನೀಡುತ್ತಾರೆ. ಇಂತಹ ಲೋನ್‌ ಆಯಪ್‌ಗಳನ್ನು ನಡೆಸುವವರು ಕಾನೂನು ಬಾಹಿರ ರೀತಿಯಲ್ಲಿ ನೊಂದವರ ವೈಯಕ್ತಿಕ ಮಾಹಿತಿಯನ್ನು ದುರುಪಯೋಗ ಪಡಿಸಿ ಸಾಲ ವಸೂಲು ಮಾಡುತ್ತಾರೆ.

ನೊಂದವರ ಜೀವಕ್ಕೆ ಬೆದರಿಕೆಯನ್ನು ಕೂಡಾ ನೀಡಲು ಹಿಂಜರಿಯುವುದಿಲ್ಲ. ಇಂತಹ ಜಾಲದಲ್ಲಿ ಸಿಲುಕಿದ ವ್ಯಕ್ತಿಯು ತಾನು ಪಡೆದ ಸಾಲಕ್ಕಿಂತ ಸಾಕಷ್ಟು ಹೆಚ್ಚಿನ ಹಣವನ್ನು ಇಂತಹ ಸೈಬರ್‌ ವಂಚಕರಿಗೆ ನೀಡುತ್ತಾರೆ. ರುಪೀ ಹಿಯರ್‌, ಲೆಂಡ್‌ಕರ್‌, ಹೋಪ್‌ಲೋನ್‌, ಪಂಚ್‌ಲೋನ್‌, ರಾಕಾನ್‌, ಲೋನು, ಕ್ಯಾಶ್‌ಫುಲ್‌ ಮೊದಲಾದ ಚೀನಾ ಮೂಲದ ಆಯಪ್‌ಗಳು ಕಾರ್ಯಾಚರಿಸುತ್ತಿವೆ. ಈಗಾಗಲೇ ಇಂತಹ 600 ಆಯಪ್‌ಗಳನ್ನು ನಿಷೇಧಿಸಲಾಗಿದೆ. ಆದರೂ ಕೂಡ ಪ್ರತಿನಿತ್ಯ ಯಾವುದಾದರೂ ಹೊಸದೊಂದು ಲೋನ್‌ ಆಯಪ್‌ಗಳು ಸಾಮಾಜಿಕ ಜಾಲತಾಣದಲ್ಲಿ ಬರುತ್ತವೆ ಎಂದು ಕಮಿಷನರ್ ಎಚ್ಚರಿಸಿದ್ದಾರೆ.

ಸಾರ್ವಜನಿಕರು ಇಂತಹ ಆಯಪ್‌ಗಳನ್ನು ತಮ್ಮ ಮೊಬೈಲ್‌ಗ‌ಳಲ್ಲಿ ಡೌನ್‌ಲೋಡ್‌ ಮಾಡದೇ ಇರಲು ವಿನಂತಿಸಿದ್ದಾರೆ. ತಮಗೆ ಆರ್ಥಿಕ ಸಾಲ ಬೇಕಾದಲ್ಲಿ ಅಧಿಕೃತ ಬ್ಯಾಂಕ್‌ ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆಯುವುದು ಸೂಕ್ತ. ಇಂತಹ ಯಾವುದಾದರೂ ಆಯಪ್‌ಗಳ ಬಗ್ಗೆ ಮಾಹಿತಿ ಹೊಂದಿದಲ್ಲಿ ಕೂಡಲೇ ಆ ಮಾಹಿತಿಯನ್ನು ಪೊಲೀಸರಿಗೆ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋನ್ ಆಯಪ್‌ನಲ್ಲಿ ಸ್ನೇಹಿತನಿಗೆ ಸಾಲ ಕೊಡಿಸಿದ್ದ ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಸಾಲದ ನೀಡಿದ್ದ ಆಯಪ್‌ನವರ ಕಿರುಕಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇತ್ತೀಚೆಗೆ ನಡೆದಿತ್ತು.

Previous Post

ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ – ಹಡಿಲು ಭೂಮಿ ಕೃಷಿ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ..!!

Next Post

ಉಡುಪಿ : ನಿರಂತರ ಮಳೆ ನಾಳೆ ಜುಲೈ 24 ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಿರಂತರ ಮಳೆ ನಾಳೆ ಜುಲೈ 24 ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News