Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಮಣಿಪುರ ಹಿಂಸಾಚಾರದ ಹಿಂದಿರುವುದು ವಿಭಜನಕಾರಿ ಶಕ್ತಿಗಳು – ಪ್ರೊ. ಫಣಿರಾಜ್..!!

Dhrishya News by Dhrishya News
25/07/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ:ಸಾಲಿಡಾರಿಟಿ ಯೂತ್’ಮೂವ್ಮೆಂಟ್, ಉಡುಪಿ ಜಿಲ್ಲೆ, ಎಸ್.ಐ‌.ಓ ಉಡುಪಿ ಜಿಲ್ಲೆ, ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ವತಿಯಿಂದ  ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರದ ಹಿಂದಿನ ರಾಜಕೀಯ ಮತ್ತು ಜನಾಂಗೀಯ ದ್ವೇಷದ ಕಾರಣಕ್ಕೆ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಯುವತಿಯರಿಗೆ ನ್ಯಾಯ ಒದಗಿಸಲು ಕೋರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಫಾ.ವಿಲಿಯಂ ಮಾರ್ಟಿಸ್, ಈ ಸಂದರ್ಭದಲ್ಲಿ ಮಾತನಾಡಿ ಮಣಿಪುರದಲ್ಲಿ ಅಲ್ಪಸಂಖ್ಯಾತ ಕುಕಿ ಸಮುದಾಯ ದೌರ್ಜನ್ಯಕ್ಕೊಳಕ್ಕಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಲಾಗಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಸರಕಾರ ಮೌನ ವಹಿಸಿದೆ. ಇಂತಹ ಸಮಯದಲ್ಲಿ ಸಂತ್ರಸ್ಥರ ಪರವಾಗಿ ನಾವು ದನಿಯೆತ್ತರಿಸಬೇಕಾಗಿದೆ ಎಂದು ಹೇಳಿದರು.

“ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ನಾವು ಯೋಚಿಸಿದಷ್ಟು ಸರಳೀಕೃತವಾಗಿಲ್ಲ. ಇದರ ಹಿಂದೆ ಆರ್.ಎಸ್.ಎಸ್ ಮತ್ತು ಬಿಜೆಪಿಯ ಹಿಂದುತ್ವದ ವಿಭಜನಕಾರಿ ನೀತಿ ಅಡಗಿದೆ. ಈ ನೀತಿ ಇಡೀ ಭಾರತದಾದ್ಯಂತ ಹಬ್ಬುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದೀಗ ಈಶಾನ್ಯ ಭಾರತದಲ್ಲಿ ಬುಡಕಟ್ಟು ಜನರ ಮೇಲೆ ನೀತಿ ಅನುಸರಿಸಿ ವಿಭಜಿಸಿ ಅಳಲು ಪ್ರಯತ್ನಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹಿಂಸಾಚಾರದ ವಿರುದ್ಧ ತುಟಿ ಬಿಚ್ಚದೆ ಪ್ರಧಾನಿ ವಿಭಜನಕಾರಿ ನೀತಿಗೆ ಅನುಮೋದನೆ ನೀಡುತ್ತಿದ್ದಾರೆ ಎಂದು ಪ್ರೊ.ಫಣಿರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಮಣಿಪುರದ ಹಿಂಸಾಚಾರದಲ್ಲಿ ವಿಭಜನಕಾರಿ ನೀತಿಯೊಂದಿಗೆ ಬಂಡವಾಳಶಾಹಿಗಳ ಷಡ್ಯಂತ್ರ ಅಡಗಿದೆ. ಕುಕಿ ಸಮುದಾಯ ವಾಸವಿರುವ ಗುಡ್ಡಗಾಡು ಪ್ರದೇಶಗಳನ್ನು ಅಕ್ರಮಿಸಿಕೊಂಡು ಈಗಾಗಲೇ ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರು ಎಣ್ಣೆ ಬೀಜ ಬೆಳೆಸುವ ಹುನ್ನಾರ ಕೂಡ ನಡೆಯುತ್ತಿದೆ. ಈ ಮೂಲಕ ಅದಾನಿಗೆ ಆ ಪ್ರದೇಶ ಮಾರಲು ಹೊರಟಿದೆ. ಈ ಎಲ್ಲ ಕಾರಣ ಮುಂದಿಟ್ಟುಕೊಂಡು ಈ ಎರಡು ಸಮುದಾಯದ ನಡುವೆ ಕಚ್ಚಾಟ ಏರ್ಪಡಿಸಲಾಗುತ್ತಿದೆ ಎಂದರು.

ಹೆಣ್ಣು ಮಕ್ಕಳ ಮೇಲೆ ನಡೆದ ಘನಘೋರಾ ಅತ್ಯಾಚಾರ ಖಂಡಿಸುತ್ತ ಆರ್.ಎಸ್.ಎಸ್, ಬಿಜೆಪಿಯ ಹಿಂದುತ್ವವಾದಿ ರಾಷ್ಟ್ರೀಯವಾದವನ್ನು ಅರ್ಥೈಸುವ ಅಗತ್ಯವಿದೆ. ಆಗ ಮಾತ್ರ ಅಲ್ಲಿನ ರಾಜಕೀಯ ಅರ್ಥ ಮಾಡಿಕೊಳ್ಳಲು ಸಾಧ್ಯ. ಈಗಾಗಲೇ ಆ ರಾಜಕೀಯವನ್ನು ನಮ್ಮ ಕರಾವಳಿಯಲ್ಲಿ, ಅಸ್ಸಾಮ್ ನಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಳಸಿ ಯಶಸ್ವಿಯಾಗಿದೆ. ಅದನ್ನು ಈ ಪ್ರಜಾಪ್ರಭುತ್ವದಲ್ಲಿ ಸೋಲಿಸುವ ಕಾರ್ಯ ನಡೆಯಬೇಕಾಗಿದೆ ಎಂದರು.

ಭಾರತ ಸರ್ವ ಜನಾಂಗದ ಶಾಂತಿಯ ತೋಟ. ಮಣಿಪುರದಲ್ಲಿ ಯುವತಿಯರ ಮೇಲೆ ನಡೆದ ಕೃತ್ಯ ಅಮಾನವೀಯವಾದದ್ದು ಇಂತಹ ಘಟನೆಯನ್ನು ಖಂಡಿಸದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಾಗುದಿಲ್ಲ. ಮಹಿಳೆಯರ ಘನತೆಯ ರಕ್ಷಣೆ ಕೇವಲ ಘೋಷಣೆ ಮಾಡಲಾಗುತ್ತದೆ. ಆದರೆ ವಾಸ್ತವಿಕತೆ ಬೇರೆ ಇದೆ. ಮಹಿಳೆಯರ ಘನತೆಯನ್ನು ಗೌರವಿಸುವ ಸಮಾಜ ಹುಟ್ಟು ಹಾಕಬೇಕೆಂದು” ಸನೆಟ್ ಬೋರ್ಬೊಝಾ ಅವರು ಕರೆ ನೀಡಿದರು.

ನಂತರ ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಜಿಲ್ಲಾಧ್ಯಕ್ಷರಾದ ನಬೀಲ್ ಗುಜ್ಜರ್’ಬೆಟ್ಟು, ಎಸ್.ಐ.ಓ ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ, ಸಾಲಿಡಾರಿಟಿ ಹೂಡೆ ಘಟಕಾಧ್ಯಕ್ಷ ಜಾಬೀರ್ ಖತೀಬ್, ಸಾಲಿಡಾರಿಟಿ ಮಲ್ಪೆ ಕಾರ್ಯದರ್ಶಿ ಶುಐಬ್ ಮಲ್ಪೆ, ಉಡುಪಿಯ ಕಾರ್ಯದರ್ಶಿ ಫೈಸಲ್ ಉಡುಪಿ, ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಸಂಚಾಲಕಿ ಕುಲ್ಸುಮ್ ಅಬುಬಕ್ಕರ್ ಉಪಸ್ಥಿತರಿದ್ದರು.

Previous Post

ಉಡುಪಿ: ಮುಂದುವರೆದ ಮಳೆ ನಾಳೆ( ಜುಲೈ 25) ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Next Post

ಕಾರ್ಕಳ : ಹಲೋ ಮೊಬೈಲ್ ಬೊಡ ಬೊಡ್ಚ? – ತುಳು ನಾಟಕದ ಮುಹೂರ್ತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಹಲೋ ಮೊಬೈಲ್ ಬೊಡ ಬೊಡ್ಚ? - ತುಳು ನಾಟಕದ ಮುಹೂರ್ತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026

Recent News

imunify-bot-check