Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಂಗಳೂರು : ರೋಗ ನಿರೋದಕ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಶೇ 100 ರಷ್ಟು ಗುರಿ ಸಾಧಿಸಬೇಕು – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್..!!

Dhrishya News by Dhrishya News
28/07/2023
in मौसम
0
0
SHARES
14
VIEWS
Share on FacebookShare on Twitter

ಮಂಗಳೂರು:0-23 ತಿಂಗಳ ಮಕ್ಕಳಿಗೆ ನಿಯಮಿತ ಅವಧಿಯಲ್ಲಿ ನೀಡಬೇಕಾದ ರೋಗನಿರೋಧಕ ಲಸಿಕೆಗಳು, 2-5 ವರ್ಷದೊಳಗಿನ ಮಕ್ಕಳಿಗೆ ಎಂಆರ್-1, ಎಂಆರ್-2, ಫೆಂಟಾ ಮತ್ತು ಓಪಿವಿ ಲಸಿಕಾ ಡೋಸ್‍ಗಳು ಹಾಗೂ ರೋಗ ನಿರೋಧಕ ಹಾಗೂ ಸುರಕ್ಷಿತ ಲಸಿಕೆ ಪಡೆಯದ ಅಥವಾ ಭಾಗಶಃ ಪಡೆದಿರುವ ಗರ್ಭೀಣಿಯರನ್ನು ಬರುವ ಆಗಸ್ಟ್ 7 ರಿಂದ 12ರ ವರೆಗೆ ನಡೆಯಲಿರುವ ಇಂದ್ರಧನುಷ್ 5.0 ಅಭಿಯಾನದ ಮೊದಲ ಹಂತದಲ್ಲಿ ಪತ್ತೆ ಮಾಡಿ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಶೇ.100 ರಷ್ಟು ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಇಂದ್ರಧನುಷ್ ಮತ್ತು ದಡಾರ ಹಾಗೂ ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಜಿಲ್ಲೆಯಲ್ಲಿ ಬಾಕಿ ಉಳಿದ ಅರ್ಹ ಫಲಾನುಭವಿಗಳನ್ನು ಪತ್ತೆ ಮಾಡುವುದು ಹಾಗೂ ಜಿಲ್ಲೆಗೆ ವಲಸೆ ಬಂದಿರುವ ಕಟ್ಟಡ ಹಾಗೂ ಇತರೆ ಕಾರ್ಮಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಆರೋಗ್ಯ ಹಾಗೂ ಕಾರ್ಮಿಕ ಇಲಾಖೆ ಈ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ, ಅರ್ಹ ಫಲಾನುಭವಿಗಳು ನಿಗಧಿ ಪಡಿಸಿರುವ ಅಭಿಯಾನದ ಸಮಯದಲ್ಲಿ ಲಸಿಕೆ ಪಡೆಯದೇ ಬಿಟ್ಟು ಹೋಗದಂತೆ ಎಚ್ಚರ ವಹಿಸಬೇಕು, ಈ ಬಗ್ಗೆ ಕೈಗೊಂಡಿರುವ ಸಮೀಕ್ಷಾ ಕಾರ್ಯ ಪೂರ್ಣಗೊಂಡ ನಂತರ ಆರೋಗ್ಯ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.

ಪ್ರಮುಖವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪಂಚಾಯತ್ ರಾಜ್, ಪೌರಾಡಳಿತ, ಶಿಕ್ಷಣ, ವೈದ್ಯಕೀಯ ಶಿಕ್ಷಣ, ಕಾರ್ಮಿಕ, ಯುವ ಜನ ಸೇವಾ ಕ್ರೀಡಾ ಇಲಾಖೆ, ರೈಲ್ವೆ ಇಲಾಖೆ ಸೇರಿದಂತೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಈ ಅಭಿಯಾನದಲ್ಲಿ ಭಾಗವಹಿಸಿ ಪೋಲೀಯೋ ನಿರ್ಮೂಲನೆಯಂತೆ ದಡಾರ ಹಾಗೂ ರುಬೆಲ್ಲಾವನ್ನು ನಿರ್ಮೂಲನೆಗೊಳಿಸಲು ಪರಿಣಾಮಕಾರಿಯಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ನಿರ್ದಿಷ್ಟ ಮಾರ್ಗದರ್ಶನ ನೀಡುವಂತೆ ಸೂಚಿಸಿದರು.

 

ವಿಶ್ವ ಆರೋಗ್ಯ ಸಂಸ್ಥೆಯ ಸರ್ವಲೆನ್ಸ್ ಮೆಡಿಕಲ್ ಆಫೀಸರ್ ಅನಂತೇಶ್ ಮಾತನಾಡಿ, ಇಂದ್ರಧನುಷ್ ಅಭಿಯಾನ ಈ ವರ್ಷದ ಆಗಸ್ಟ್ 7-12, ಸೆಪ್ಟಂಬರ್ 11-16 ಹಾಗೂ ಅಕ್ಟೋಬರ್ 9-14ರ ವರೆಗೆ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ನಡೆಯಲಿದೆ ಎಂದರು.

 

ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಎಂ ಸ್ವಾಗತಿಸಿದರು.

 

ಜಿಲ್ಲಾ ವೆನ್ಲಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿಸ್ತಕ ಮತ್ತು ಅಧೀಕ್ಷಕ ಡಾ. ಸದಾಶಿವ ಶಾನುಭೋಗ್, ಆರ್‍ಸಿಎಚ್ ಅಧಿಕಾರಿ ಡಾ. ರಾಜೇಶ್ ಇದ್ದರು.

Previous Post

ಮಂಗಳೂರು:ಸಂಚಾರಿ ನಿಯಮ ಪಾಲಿಸದ 222 ವಾಹನ ಚಾಲಕರಿಗೆ ತಿರುಗೆಟು ನೀಡಲು ಮುಂದಾದ ಪೊಲೀಸರು – ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡಲು RTOಗೆ ಶಿಫಾರಸ್ಸು..!!

Next Post

ಕಟಪಾಡಿ : ಜು.29,30 ರಂದು “ಹಲಸು ಮೇಳ 2023”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಟಪಾಡಿ : ಜು.29,30 ರಂದು "ಹಲಸು ಮೇಳ 2023"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026

Recent News

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
imunify-bot-check