Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಾಹೆ ಮಣಿಪಾಲ ಮತ್ತು ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಡುವೆ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಸಹಾಯವಾಗಲು ದತ್ತಿ ನಿಧಿ ಸ್ಥಾಪನಾ ಒಪ್ಪಂದ..!!

Dhrishya News by Dhrishya News
17/08/2023
in ಮುಖಪುಟ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಮಣಿಪಾಲ:ವೈದ್ಯಕೀಯ ಚಿಕಿತ್ಸೆಯ ಅಗತ್ಯವಿರುವ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ದತ್ತಿ ನಿಧಿಯನ್ನು ರಚಿಸಲು ಮಾಹೆ ಮಣಿಪಾಲ ಮತ್ತು ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ನಡುವೆ ಒಪ್ಪಂದಕ್ಕೆ ಸಹಿ . ನಾಲ್ಕು ವರ್ಷಗಳ ಕಾಲ ಟ್ರಸ್ಟ್ ಪ್ರತಿ ವರ್ಷ 25 ಲಕ್ಷ ರೂಪಾಯಿ ಠೇವಣಿ ಇಡಲಿದೆ ಮತ್ತು ಮಾಹೆ ಮಣಿಪಾಲವು ಅಷ್ಟೇ ಮೊತ್ತವನ್ನು ಹೊಂದಿಸಿ ಶಾಂತನು ಶೆಟ್ಟಿ ಅವರ ಹೆಸರಿನಲ್ಲಿ ಶಾಶ್ವತ ನಿಧಿಯನ್ನು ರಚಿಸಲಾಗುವುದು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಬಡ ರೋಗಿಗಳಿಗೆ ಸಹಾಯ ಮಾಡಲು ಈ ನಿಧಿಯನ್ನು ಮೀಸಲಿಡಲಾಗುವುದು.

ಇಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ , ಶಾಂತನು ಶೆಟ್ಟಿ ಚಾರಿಟಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಸೋಮನಾಥ ಶೆಟ್ಟಿ ಅವರು ನಿಧಿಯ ಮೊದಲ ಕಂತನ್ನು ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಅಧ್ಯಕ್ಷ ಡಾ. ರಂಜನ್ ಆರ್ ಪೈ ಮತ್ತು ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಸಮ್ಮುಖದಲ್ಲಿ ಮಾಹೆ ಮಣಿಪಾಲದ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮತ್ತು ರಿಜಿಸ್ಟ್ರಾರ್ ಡಾ. ಗಿರಿಧರ್ ಕಿಣಿ ಅವರಿಗೆ ಹಸ್ತಾಂತರಿಸಿದರು. ಮಾಹೆ ಮಣಿಪಾಲದ ಸಹ ಕುಲಪತಿ ಡಾ.ಶರತ್ ಕುಮಾರ್ ರಾವ್, ಕೆಎಂಸಿ ಮಣಿಪಾಲದ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ವಿಭಾಗದ ಉಪನಿರ್ದೇಶಕ ಶ್ರೀ ಸಚಿನ್ ಕಾರಂತ್ ಮಾಹೆ ಮಣಿಪಾಲದ ಪರವಾಗಿ ಉಪಸ್ಥಿತರಿದ್ದರು. ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಶ್ರೀ ಜಿತೇಂದ್ರ ಹೆಗ್ಡೆ, ಶ್ರೀ ರಾಜಾರಾಂ ಹೆಗ್ಡೆ, ಶ್ರೀ ನಟರಾಜ್ ಹೆಗ್ಡೆ, ಶ್ರೀ ಗೋಪಿನಾಥ ಶೆಟ್ಟಿ, ಮತ್ತು ಶ್ರೀ ಅಶ್ವಿನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಮಾಹೆ ಮಣಿಪಾಲದ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ ಮತ್ತು ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಶ್ರೀ ಸೋಮನಾಥ ಶೆಟ್ಟಿ ಅವರು ಇಂದು ಅಧಿಕೃತವಾಗಿ ಒಪ್ಪಂದಕ್ಕೆ ಸಹಿ ಹಾಕಿದರು.

ಕಾರ್ಯಕ್ರಮದಲ್ಲಿ ಡಾ.ಎಚ್.ಎಸ್.ಬಲ್ಲಾಳ್ ಅವರು ಈ ಉದಾತ್ತ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಟ್ರಸ್ಟ್‌ನ ಕೊಡುಗೆಯನ್ನು ಅಭಿನಂದಿಸಿದರು ಮತ್ತು ಅದರ ಮಹತ್ವದ ಕುರಿತು ಮಾತನಾಡಿದರು. ಡಾ.ಪದ್ಮರಾಜ್ ಹೆಗ್ಡೆ ಸ್ವಾಗತಿಸಿ, ಡಾ.ಅವಿನಾಶ್ ಶೆಟ್ಟಿ ಒಪ್ಪಂದ ಮತ್ತು ಅದರ ಉದ್ದೇಶದ ಕುರಿತು ಮಾಹಿತಿ ನೀಡಿದರು. ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಶ್ರೀ ನಟರಾಜ್ ಹೆಗ್ಡೆ ನಿಧಿ ಮತ್ತು ಅದರ ಬಳಕೆಯ ನೀತಿಯ ಕುರಿತು ಅವಲೋಕನ ನೀಡಿದರು.

ಈ ಸಹಯೋಗವು ಮಾಹೆ ಮಣಿಪಾಲ ಮತ್ತು ಶಾಂತನು ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಎರಡರ ಆರ್ಥಿಕವಾಗಿ ಹಿಂದುಳಿದ ವರ್ಗದವರ ಮೇಲಿನ ಬದ್ಧತೆಯನ್ನು ತೋರಿಸುತ್ತದೆ. ಇದರಿಂದ ಮೇಲೆ ಉಲ್ಲೇಖಿಸಲಾದ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳ ಆರೋಗ್ಯ ಅಗತ್ಯಗಳನ್ನು ಪೂರೈಸಲಿದೆ. ಅಗತ್ಯವಿರುವವರಿಗೆ ಎಲ್ಲರಿಗೂ ಗುಣಮಟ್ಟದ ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡಲು ಇಂತಹ ಪ್ರಯತ್ನಗಳನ್ನು ನೋಡುವುದು ಹರ್ಷದಾಯಕವಾಗಿದೆ.

Previous Post

ಬಜಗೋಳಿ: ಶಾಲೆ ಎದುರು ಬಾರ್‌ಗೆ ಅನುಮತಿ – ಅಧಿಕಾರಿಗಳ ನಡೆ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು..

Next Post

ಉಡುಪಿ:ಕೃಷ್ಣಮಠದ ರಾಜಾಂಗಣದ ಆವರಣದಲ್ಲಿ “ನಯಾ ಭಾರತ್ ಸಶಕ್ತ ಭಾರತ ಥೀಮ್” ಸೆಲ್ಫಿ ಬೂತ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಕೃಷ್ಣಮಠದ ರಾಜಾಂಗಣದ ಆವರಣದಲ್ಲಿ "ನಯಾ ಭಾರತ್ ಸಶಕ್ತ ಭಾರತ ಥೀಮ್" ಸೆಲ್ಫಿ ಬೂತ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026