Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮುಖ್ಯಮಂತ್ರಿಯವರನ್ನು ಭೇಟಿಯಾದ ಅಮೆರಿಕದ ಕಾನ್ಸಲ್‌ ಜನರಲ್‌..!!

ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ

Dhrishya News by Dhrishya News
19/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಂಗಳೂರು-ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಇದ್ದು, ತುಮಕೂರು, ದಾವಣಗೆರೆ ಮತ್ತಿತರ ಹಂತ 2ರ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು   ಚೆನ್ನೈನಲ್ಲಿನ ಅಮೇರಿಕ ದೂತಾವಾಸದ ಕಾನ್ಸಲ್‌ ಜನರಲ್‌ ಕ್ರಿಸ್ಟೊಫರ್‌ ಡಬ್ಲ್ಯು ಹಾಡ್ಜಸ್‌ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿ ಮಾಡುವ ರಾಜ್ಯವಾಗಿದ್ದು, ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಹೊಂದಿದೆ. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಅತ್ಯುತ್ತಮವಾಗಿದ್ದು, ಕೌಶಲ್ಯಯುಕ್ತ ಮಾನವ ಸಂಪನ್ಮೂಲ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ಹೂಡಿಕೆ ಮಾಡುವಂತೆ ಮುಖ್ಯಮಂತ್ರಿಯವರು ತಿಳಿಸಿದರು.

ಬೆಂಗಳೂರಿನಲ್ಲಿ ಅಮೆರಿಕಾ ದೂತಾವಾಸ ಕಚೇರಿ:

ಬೆಂಗಳೂರಿನಲ್ಲಿ ಅಮೆರಿಕಾ ದೂತಾವಾಸ ಕಚೇರಿ ಪ್ರಾರಂಭಿಸುವ ತೀರ್ಮಾನವನ್ನು ಸ್ವಾಗತಿಸಿದ ಮುಖ್ಯಮಂತ್ರಿಯವರು, ಇದಕ್ಕೆ ಎಲ್ಲ ಅಗತ್ಯ ಬೆಂಬಲ, ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಸ್ಟೊಫರ್‌ ಹಾಡ್ಜಸ್‌ ಅವರು, “ಬೆಂಗಳೂರು ಪ್ರವಾಸ ಹಾಗೂ ಭಾರತ – ಅಮೆರಿಕಾ ಭಾಗೀದಾರಿಕೆಯ ಬಗ್ಗೆ ಇಲ್ಲಿರುವ ಉತ್ಸಾಹ, ಆಶಾವಾದ ಹೊಸ ಚೈತನ್ಯ ಮೂಡಿಸಿದೆ. ಇಲ್ಲಿರುವ ಸುಮಾರು 650 ಅಮೇರಿಕನ್‌ ಕಂಪನಿಗಳು ಮತ್ತು 30 ವರ್ಷಗಳಿಂದ ಅಮೇರಿಕದ ಕಚೇರಿ ಇಲ್ಲಿ ಕೆಲಸ ಮಾಡುತ್ತಿರುವುದು ನಮ್ಮ ಬದ್ಧತೆಗೆ ಸಾಕ್ಷಿ. ನಮ್ಮ ಸಹಭಾಗಿತ್ವವನ್ನು ಇನ್ನಷ್ಟು ಮುಂದೆ ಹೇಗೆ ಕೊಂಡೊಯ್ಯಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದು ಖುಷಿ ತಂದಿದೆ” ಎಂದರು.

ಪೊಲಿಟಿಕಲ್‌/ಎಕನಾಮಿಕ್‌ ವಿಭಾಗದ ಮುಖ್ಯಸ್ಥೆ ವಿರ್ಸಾ ಪರ್ಕಿನ್ಸ್‌, ಪೊಲಿಟಿಕಲ್‌/ಎಕನಾಮಿಕ್‌ ಆಫೀಸರ್‌ ಜೇಸನ್‌ ಇವಾನ್ಸ್‌ , ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

Previous Post

ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ-ದ.ಕ.ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅವಕಾಶ ..!!

Next Post

ಗೃಹಲಕ್ಷ್ಮಿ ಯೋಜನೆಗೆ ‘ಆ.30 ರಂದು ರಾಹುಲ್ ಗಾಂಧಿ ಅವರಿಂದ ಮೈಸೂರಿನಲ್ಲಿ ಚಾಲನೆ’ – ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹಲಕ್ಷ್ಮಿ ಯೋಜನೆಗೆ 'ಆ.30 ರಂದು ರಾಹುಲ್ ಗಾಂಧಿ ಅವರಿಂದ ಮೈಸೂರಿನಲ್ಲಿ ಚಾಲನೆ' - ಲಕ್ಷ್ಮಿ ಹೆಬ್ಬಾಳ್ಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check