Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ : ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ..!!

Dhrishya News by Dhrishya News
22/08/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಬೆಂಗಳೂರು:ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರೈತ ಮುಖಂಡರ ನಿಯೋಗದೊಂದಿಗೆ ಈ ಸಮಸ್ಯೆ ಕುರಿತು ಚರ್ಚೆ ನಡೆಸಿದರು.

 

ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ ದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ನೋಟೀಸು, ಲೀಗಲ್‌ ನೋಟೀಸುಗಳನ್ನು ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ. ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಪ್ರತಿಭಟಿಸಿ, 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಓ.ಟಿ.ಎಸ್. ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಹಲವು ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಈ ಅನುಕೂಲ ಕಲ್ಪಿಸಿವೆ ಎಂದು ತಿಳಿಸಿದರು.

 

ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್‌ ಅಧಿಕಾರಿಗಳು, ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕಿನಲ್ಲಿ 6500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಬ್ಯಾಂಕಿನ ಅಧ್ಯಕ್ಷರು ಗೈರು ಹಾಜರಾದ ಕುರಿತು ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ರೈತರ ಕುರಿತು ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕರುಗಳ ಸಭೆ ನಡೆಸಿದ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ತಜ್ಞ ಡಾ. ಪ್ರಕಾಶ್‌ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಭಾಗವಹಿಸಿದ್ದರು.

 

Previous Post

ಕುಕ್ಕೇ ಸುಬ್ರಹ್ಮಣ್ಯ ದೇವರಿಗೆ ಕುಕ್ಕೇ ಶ್ರೀ ಆಡಳಿತ ಮಂಡಳಿಯಿಂದ “ಚಂದ್ರಯಾನ-3 ಯಶಸ್ಸಿಗಾಗಿ” ವಿಶೇಷ ಸೇವೆ..!!

Next Post

‘ರಾಷ್ಟ್ರೀಯ ಐಕಾನ್’ ಆಗಿ ಚುನಾವಣಾ ಆಯೋಗದಿಂದ ಸಚಿನ್ ತೆಂಡೂಲ್ಕರ್ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

'ರಾಷ್ಟ್ರೀಯ ಐಕಾನ್' ಆಗಿ ಚುನಾವಣಾ ಆಯೋಗದಿಂದ ಸಚಿನ್ ತೆಂಡೂಲ್ಕರ್ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved