Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ..!!

*ರಾಜ್ಯಾದ್ಯಂತ ನೈರ್ಮಲ್ಯ ಅಭಿಯಾನಕ್ಕೆ ಸೂಚನೆ*

Dhrishya News by Dhrishya News
22/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಬೆಂಗಳೂರು : ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆಯಲ್ಲಿ ಅವರು ಮಾತನಾಡಿದರು

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಹಾಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.

. ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವರು ಅಭಿಪ್ರಾಯ ಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.

ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಆರೋಗ್ಯ ಸಚಿವ ಗುಂಡೂ ರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಮಣಿಪಾಲ್ ಔಟ್‌ಲುಕ್-ಐಕೇರ್ ಇಂಡಿಯಾ ಡೀಮ್ಡ್ ಟು ಬಿ ವಿಶ್ವವಿದ್ಯಾನಿಲಯಗಳ ಶ್ರೇಯಾಂಕಗಳು 2023 – ಅಗ್ರ ಸ್ಥಾನ ಪಡೆದುಕೊಂಡ “ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್”

Next Post

ಇಂದು ಎಲ್ಲೆಡೆ ಚಂದ್ರಯಾನ -3 ಸೇಫ್ ಲ್ಯಾಂಡಿಂಗ್‌ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಎಲ್ಲೆಡೆ ಚಂದ್ರಯಾನ -3 ಸೇಫ್ ಲ್ಯಾಂಡಿಂಗ್‌ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News