Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ:ಕರಾವಳಿಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್: ಮಹಾಮಾತೆ ಮೇರಿಯಮ್ಮನ ಜನ್ಮದಿನವನ್ನು ತೆನೆಹಬ್ಬವಾಗಿ ಆಚರಿಸಿದ ಕ್ರೈಸ್ತ ಬಾಂಧವರು..!!

Dhrishya News by Dhrishya News
09/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ:ದೇವಪುತ್ರ ಏಸುಕ್ರಿಸ್ತರಿಗೆ ಭೂಮಿಯ ಅವತಾರಕ್ಕೆ ಅವಕಾಶ ಕಲ್ಪಿಸಿದ ಮಹಾಮಾತೆ ಮೇರಿಯಮ್ಮನ ಜನ್ಮದಿನವನ್ನು ಕರಾವಳಿ ಕ್ರೈಸ್ತರು ಗುರುವಾರ ತೆನೆ ಹಬ್ಬವಾಗಿ, ಕುಟುಂಬ ಹಬ್ಬವಾಗಿ ಆಚರಿಸಿದರು. ಎಲ್ಲಾ ಚರ್ಚ್ಗಳಲ್ಲಿ ಭತ್ತದ ತೆನೆಗಳ ಪವಿತ್ರೀಕರಣ, ಪುಷ್ಪಾರ್ಚನೆ, ದಿವ್ಯ ಬಲಿಪೂಜೆ ನಡೆದಿದ್ದು, ಮನೆ-ಮನೆಗಳಲ್ಲಿ ಕ್ರೈಸ್ತ ಬಾಂಧವರು ಸಂಭ್ರಮದಿಂದ ಶುಕ್ರವಾರ ಆಚರಿಸಿದರು.

ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು.

 

ಪುಟ್ಟ ಮಕ್ಕಳು ಮಹಾಮಾತೆ ಮೇರಿಯಮ್ಮನ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಭತ್ತದ ತೆನೆಯನ್ನು ಆರ್ಶಿವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು.

 

ಉಡುಪಿ ಕ್ರೆಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಅವರು ಮೂಡುಬೆಳ್ಳೆ ಸಮೀಪದ ಕುಂತಲನಗರ ಸಂತ ಅಂತೋನಿಯವರ ಚರ್ಚಿನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.

 

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ. ಚಾರ್ಲ್ಸ್ ಮಿನೇಜಸ್ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ವಂ|ವಲೇರಿಯನ್ ಮೆಂಡೊನ್ಸಾ, ಶಿರ್ವ ಆರೋಗ್ಯ ಮಾತಾ ಇಗರ್ಜಿಯಲ್ಲಿ ವಂ|ಲೆಸ್ಲಿ ಡಿಸೋಜಾ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಸ್ಟಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ|ಆಲ್ಬನ್ ಡಿಸೋಜಾ, ಸಾಸ್ತಾನ ಸಂತ ಅಂತೋನಿ ದೇವಾಲಯದಲ್ಲಿ ವಂ|ಸುನೀಲ್ ಡಿಸಿಲ್ವಾ ನೇತೃತ್ವದಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆದವು.

 

ಇದಲ್ಲದೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಸಹ ಹಬ್ಬದ ಬಲಿಪೂಜೆಯನ್ನು ಆಯಾ ಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ನಡೆದವು.

ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ವಿತರಿಸಲಾಯಿತು. ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು. ಅಲ್ಲದೆ ಮನೆಗಳಲ್ಲಿ ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸಿ ಕುಟುಂಬದ ಎಲ್ಲಾ ಸದಸ್ಯರು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವಿಸಿದರು.

 

ಮೊಂತಿ ಫೆಸ್ಟ್ : ತೆನೆ ಹಬ್ಬದ ಹಿನ್ನಲೆ

ಮಂಗಳೂರು ಹೊರ ಹೊಲಯದ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ 250 ವರ್ಷಗಳ ಹಿಂದೆ ಮೊಂತಿ ಫೆಸ್ಟ್ ಆಚರಣೆ ಆರಂಭವಾಯಿತು ಎನ್ನುವುದು ಒಂದು ಉಲ್ಲೇಖ.

 

ಸಂತ ಫ್ರಾನ್ಸಿಸ್ ಅವರಿಗೆ ಸಮರ್ಪಿಸಿದ ಮಠವೊಂದು ಇಲ್ಲಿ ಸ್ಥಾಪನೆಯಾಗಿತ್ತು. ನೇತ್ರಾವತಿ ನದಿಯ ಉತ್ತರ ದಿಕ್ಕಿನಲ್ಲಿ ಬೆಟ್ಟದ ಮೇಲಿರುವ ಈ ಪುರಾತನ ಸ್ಥಳಕ್ಕೆ ಮೊಂತೆ ಮರಿಯಾನೊ ಅಥವಾ ಮೌಂಟ್ ಅಫ್ ಮೇರಿ ಎಂದು ಹೆಸರಿಸಲಾಗಿತ್ತು. ಇದರ ಸ್ಪೂರ್ಥಿ ಪಡೆದು ಕರಾವಳಿಯ ಕೆಥೋಲಿಕ್ ಕ್ರೈಸ್ತ ಪೂರ್ವಜರು ಸೆಪ್ಟಂಬರ್ 8 ರಂದು ಮೇರಿ ಮಾತೆಯ ಜನ್ಮ ದಿನದಂದೆ ತೆನೆ ಹಬ್ಬವನ್ನು ಆಚರಿಸಲು ಆರಂಭಿಸಿದರು ಎನ್ನುವುದಾಗಿದೆ.

 

ತೆನೆ ಹಬ್ಬ ಆಚರಣೆ 9 ದಿನ ಮುಂಚಿತವಾಗಿ ಅಂದರೆ ಅಗಸ್ಟ್ 30 ರಿಂದ ಚರ್ಚ್ ಗಳಲ್ಲಿ ವಿಶೇಷವಾಗಿ ನೊವೇನಾ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಮೊಂತಿ ಹಬ್ಬದ ಆಚರಣೆಗೆ ನಾಂದಿಯಾಗುತ್ತದೆ.

 

9 ದಿನಗಳ ಕಾಲ ನಡೆಯುವ ನೊವೇನಾ ಪ್ರಾರ್ಥನೆಯಲ್ಲಿ ವಿಶೇಷವಾಗಿ ಚಿಕ್ಕ ಮಕ್ಕಳು ಪ್ರತಿದಿನ ಹೂವುಗಳನ್ನು ಕೊಂಡೊಯ್ದು ಮೇರಿ ಮಾತೆಗೆ ಸಮರ್ಪಿಸಿ ಗೀತೆಗಳನ್ನು ಹಾಡುವ ಮೂಲಕ ಸ್ತುತಿಸುತ್ತಾರೆ.

 

ಕೊನೆಯ ದಿನ ಅಂದರೆ ಸೆಪ್ಟಂಬರ್ 8 ರಂದು ಹಬ್ಬದ ಸಂಭ್ರಮವನ್ನು ಸಾಮುದಾಯಿಕವಾಗಿ ಮತ್ತು ಕೌಟುಂಬಿಕವಾಗಿ ಆಚರಿಸುತ್ತಾರೆ.

 

ಅಂದು ಹೊಸ ಭತ್ತದ ತೆನೆಗಳನ್ನು ಚರ್ಚ್ಗೆ ಕೊಂಡೊಯ್ದು ಆಶೀರ್ವಚನ ಮಾಡಿ, ಮೇರಿ ಮಾತೆಗೆ ಪುಷ್ಪಾರ್ಚನೆ ನಡೆಯುತ್ತೆದ. ಬಳಿಕ ಸಂಭ್ರಮದ ಬಲಿ ಪೂಜೆ ನೆರವೇರುತ್ತದೆ. ಈ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಆಶೀರ್ವದಿಸಿದ ಭತ್ತದ ತೆನೆಗಳನ್ನು ಪ್ರತಿ ಕುಟುಂಬಕ್ಕೆ ವಿತರಿಸಲಾಗುತ್ತದೆ. ಹೂವು ಕೊಂಡು ಹೋದ ಮಕ್ಕಳಿಗೆ ಸಿಹಿ ತಿಂಡಿಯನ್ನು ಹಾಗೂ ಕಬ್ಬನ್ನು ಹಂಚಲಾಗುತ್ತದೆ.

 

ನವೆಂ ಜೆವಾಣ್ ಅಂದರೆ ಹೊಸ ಭೋಜನ ಎಂದರ್ಥ. ಸಸ್ಯಾಹಾರಿ ಭೋಜನವು ಈ ದಿನದ ವಿಶೇಷವಾಗಿದ್ದು, ಕನಿಷ್ಟ 3 ಅಥವಾ 5 ಅಥವಾ 7 ಬಗೆಯ ಸಸ್ಯಾಹಾರಿ ಖಾದ್ಯಗಳಾದರೂ ಇರಬೇಕಾಗುತ್ತದೆ. ಅದರಲ್ಲೂ ಕೆಸುವಿನ ದಂಟು, ಹರಿವೆ ದಂಟು, ಹೀರೆ, ಬೆಂಡೆಕಾಯಿಗೆ, ಅಲಸಂಡೆ ತರಕಾರಿಗಳಿಗೆ ಹೆಚ್ಚಿನ ಆದ್ಯತೆ. ಪಾಯಸ ಈ ಭೋಜನದ ಅವಿಭಾಜ್ಯ ಅಂಗ. ಬಾಳೆ ಎಲೆಯಲ್ಲಿ ಊಟ ಮಾಡುವುದೂ ಇದರ ಇನ್ನೊಂದು ವೈಶಿಷ್ಟ್ಯ.

Previous Post

ತಲ್ಲೂರು : ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ..!!

Next Post

ಮಂಗಳೂರು : ಮೇಯರ್ ಆಗಿ ಬಿಜೆಪಿ ಬೆಂಬಲಿತ ಸುಧೀರ್ ಶೆಟ್ಟಿ ಕಣ್ಣೂರ್ ಉಪ ಮೇಯರ್ ಆಗಿ ಸುನೀತಾ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಮೇಯರ್ ಆಗಿ ಬಿಜೆಪಿ ಬೆಂಬಲಿತ ಸುಧೀರ್ ಶೆಟ್ಟಿ ಕಣ್ಣೂರ್ ಉಪ ಮೇಯರ್ ಆಗಿ ಸುನೀತಾ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026