Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ನಗರದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Dhrishya News by Dhrishya News
11/09/2023
in ಕರಾವಳಿ, ಸುದ್ದಿಗಳು
0
0
SHARES
46
VIEWS
Share on FacebookShare on Twitter

⭕️ಜಿಲ್ಲೆಯಾದ್ಯಂತ 200 ಆರೋಗ್ಯ ಶಿಬಿರ ಗಳನ್ನು ನಡೆಸುವ ಗುರಿ: ಡಾ.ನಾಗಭೂಷಣ ಉಡುಪ

ಉಡುಪಿ: ದೃಶ್ಯ ನ್ಯೂಸ್ ವರದಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ ಶಾಖೆ, ಜಿಲ್ಲಾಸ್ಪತ್ರೆ ಎನ್ಸಿಡಿ ವಿಭಾಗ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ, ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ, ದಂತ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಮತ್ತು ಉಡುಪಿ ಪ್ರಸಾದ್ ನೇತ್ರಾಲಯದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಉಡುಪಿ ಐಎಂಎ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಅಸಂಕ್ರಾಮಿಕ ರೋಗಗಳ ಬಗ್ಗೆ ನಾವು ಎಚ್ಚರ ವಹಿಸಬೇಕು. ಕೇವಲ ಅಸಂಕ್ರಾಮಿಕ ಮಾತ್ರವಲ್ಲದೆ ಎಲ್ಲ ರೀತಿಯ ಸಾಂಕ್ರಾಮಿಕ ರೋಗ ಗಳನ್ನು ಕೂಡ ತಡೆಗಟ್ಟುವುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಸಂಘಸಂಸ್ಥೆಗಳ ಜೊತೆಗೂಡಿ ಜಿಲ್ಲೆಯಾದ್ಯಂತ 200 ಆರೋಗ್ಯ ಶಿಬಿರ ಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಎ ಉಡುಪಿ ಕರಾವಳಿ ಅಧ್ಯಕ್ಷ ಡಾ.ಪಿ.ವಿ. ಭಂಡಾರಿ ವಹಿಸಿದ್ದರು, ಅವರು ಮಾತನಾಡಿ, ಯಾವುದೇ ರೋಗ ಜೊತೆಗೆ ಮನುಷ್ಯ ಡೀಡ್(ಕರಾರು ಪತ್ರ) ಮಾಡಿಕೊಳ್ಳಬೇಕು. ಡಯಟ್, ಎಕ್ಸಸೈಸ್(ವ್ಯಾಯಾಮ), ಕಾಯಿಲೆ ಕುರಿತು ಸರಿಯಾದ ಎಜುಕೇಶನ್(ಶಿಕ್ಷಣ) ಹಾಗೂ ಸರಿಯಾದ ಡ್ರಗ್ಸ್(ಔಷಧಿ) ಮುಖ್ಯವಾಗಿರುತ್ತದೆ. ಈ ಕುರಿತು ವೈದ್ಯರು ಪ್ರತಿಯೊಬ್ಬರಿಗೂ ಸರಿಯಾದ ಮಾಹಿತಿ ಕೊಡುವ ಕಾರ್ಯ ಮಾಡಬೇಕು ಎಂದರು.

ರಕ್ತದೊತ್ತಡ, ಮಧುಮೇಹ ಎಂಬುದು ಇಂದು ಜನರ ಜೀವನ ಸಂಗಾತಿ ಯಾಗುತ್ತಿದೆ. ಈ ನಿಟ್ಟಿನಲ್ಲಿ ಐಎಂಎ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, 100ಕ್ಕೂ ಅಧಿಕ ಅರಿವು ಕಾರ್ಯಕ್ರಮ ಹಾಗೂ ಶಿಬಿರಗಳನ್ನು ನಡೆಸಿದೆ. ಪ್ರತಿಯೊಬ್ಬರು ತಮ್ಮ ಆರೋಗ್ಯದ ಕಡೆ ಗಮುನ ಕೊಟ್ಟು ತಪಾಸಣೆಗಳನ್ನು ನಡೆಸಿ ಕೊಳ್ಳಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್, ಮಣಿಪಾಲ ಕೆಎಂಸಿ ದಂತ ವೈದ್ಯಕೀಯ ವಿಭಾಗದ ಡಾ.ರಾಮಪ್ರಸಾದ್, ಮಣಿಪಾಲ ಸಮುದಾಯ ವೈದ್ಯಕೀಯ ವಿಭಾಗದ ಡಾ.ಈಶ್ವರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಮಾತನಾಡಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಐಎಂಎ ಕಾರ್ಯದರ್ಶಿ ಡಾ.ಕೇಶವ್ ನಾಯಕ್, ವೈದ್ಯಕೀಯ ತಜ್ಞರಾದ ಡಾ.ಜಯ ಪ್ರಕಾಶ್ ಹೆಗ್ಡೆ, ಡಾ.ಅನಂತ್ ಶೆಣೈ, ಜಿಲ್ಲಾಸ್ಪತ್ರೆ ಎನ್‌ಸಿಡಿಯ ಆಪ್ತ ಸಮಾಲೋಚಕ ಮನು ಎಸ್.ಬಿ. ಉಪಸ್ಥಿತರಿದ್ದರು. ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ವಂದಿಸಿದರು. ದೀಪಾಶ್ರೀ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

ಶಿಬಿರದಲ್ಲಿ ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಇಸಿಜಿ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ಪರೀಕ್ಷೆ, ಚರ್ಮರೋಗ ತಪಾಸಣೆ, ಕಿವಿ ಗಂಟಲು ಮೂಗು ತಪಾಸಣೆ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಆಪ್ತ ಸಮಾಲೋಚನೆ ನಡೆಸಲಾಯಿತು.

Tags: #udupi#news
Previous Post

ಮಂಗಳೂರು : ಅಕ್ರಮ ಗೊ ಮಾಂಸ ಸಾಗಾಟ : ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು…!!

Next Post

ಕಾಪು : ಕಾಪು ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಕಾಪು ಮಂಡಲ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check