Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು ವಿವಿ ಗಣೇಶೋತ್ಸವ ವಿವಾದ; ಆಡಳಿತ ಮಂಡಳಿ ಹೊರತುಪಡಿಸಿ ಹೊರಗಿನವರ ಹಸ್ತಕ್ಷೇಪ ಸರಿಯಲ್ಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್…!!

Dhrishya News by Dhrishya News
11/09/2023
in ಕರಾವಳಿ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಮಂಗಳೂರು, ಸೆ. 11:ದೃಶ್ಯ ನ್ಯೂಸ್ : ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಬಿ. ಗ್ರೇಡ್‌ಗೆ ಹೋಗಿದೆ. ಅದನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನ ನಾವು ಮೊದಲು ಮಾಡಬೇಕಾಗಿದೆ. ವಿವಿ ಸ್ವಾಯತ್ತ ಸಂಸ್ಥೆ. ಅವರ ಆಡಳಿತ ಮಂಡಳಿ ಹಂತದಲ್ಲೇ ಅದನ್ನು ಬಗೆಹರಿಸಬೇಕೇ ಹೊರತು ಅದಕ್ಕೆ ಹೊರಗಿನವರ ಹಸ್ತಕ್ಷೇಪ ಸರಿಯಲ್ಲ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಮಂಗಳೂರು ವಿಶ್ವವಿದ್ಯಾನಿಲಯದ ವಿಸಿ ಹಾಗೂ ರಾಜ್ಯಪಾಲರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ.

ಕಲ್ಲಡ್ಕ ಪ್ರಭಾಕರ ಭಟ್ ಏನು ಮಾತನಾಡುತ್ತಾರೋ ಅದು ನಮಗೆ ಸಂಬಂಧಿಸಿದ್ದಲ್ಲ. ವಿವಿ ಶೈಕ್ಷಣಿಕವಾಗಿ ಬೆಳೆಯಬೇಕು. ಅಭಿವೃದ್ಧಿಯಾಗಬೇಕು. ಅನಗತ್ಯ ವಿಚಾರಗ ಬಗ್ಗೆ ಹೊರಗಿನವರು ಯಾಕೆ ಈ ಕುರಿತು ಮಾತನಾಡಬೇಕು ಎಂದು ಪ್ರಶ್ನಿಸಿದರು.

ಕಳೆದ 40 ವರ್ಷಗಳಿಂದ ಅಲ್ಲಿ ಗಣೇಶೋತ್ಸವ ಆಚರಿಸುತ್ತಾರೆಂಬ ಮಾಹಿತಿ ಇದೆ. ಈಗ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ವಿವಿ ಹಣ ಸಾರ್ವಜನಿಕರದ್ದು, ಅದು ಶಿಕ್ಷಣಕ್ಕೆ ಬಳಕೆ ಆಗಬೇಕು. ಕೆಲವರಿಗೆ ವೇತನ, ನಿವೃತ್ತಿ ವೇತನ ನೀಡಿಲ್ಲ. ಅವೆಲ್ಲಾ ಮೊದಲು ಸರಿ ಆಗಲಿ. ಹಬ್ಬ ಆಚರಣೆ ವಿವಿ ವಿವೇಚನೆಗೆ ಬಿಟ್ಟಿದ್ದು. ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮುಖ್ಯ ಚುನಾವಣೆ ಹತ್ತಿರ ಬಂದಾಗ ಈ ರೀತಿ ಅಶಾಂತಿ ಸೃಷ್ಟಿಸುವುದನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ಬಿ.ಕೆ. ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಹೇಳಿದ್ದಾರೆನ್ನಲಾದ ಆಕ್ಷೇಪದ ಮಾತುಗಳ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಸಾರ್ವಜನಿಕ ವೇದಿಕೆಯಲ್ಲಿ ಈ ತೆರನಾದ ಹೇಳಿಕ ಸಮಂಜಸವಲ್ಲ. ಬಿಲ್ಲವ ಈಡಿಗರು ಸೇರಿದಂತೆ ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಕಾಂಗ್ರೆಸ್‌ನಲ್ಲಿ ಇಲ್ಲ ಪ್ರಬುದ್ಧ ರಾಜಕಾರಣಿಯೊಬ್ಬರು ಈ ರೀತಿ ಮಾತನಾಡಬಾರದು. ಇದು ಸರಿಯಲ್ಲ ಎಂದರು.

Tags: #mangalore#news
Previous Post

ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂತನ ಕೊಠಡಿ ಉದ್ಘಾಟನೆ…!!

Next Post

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಖ್ಯಾತ ಹೃದ್ರೋಗ ತಜ್ಞ “ಡಾ. ಪದ್ಮನಾಭ್ ಕಾಮತ್” ಸಮಾಲೋಚನೆಗೆ ಲಭ್ಯ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಖ್ಯಾತ ಹೃದ್ರೋಗ ತಜ್ಞ "ಡಾ. ಪದ್ಮನಾಭ್ ಕಾಮತ್" ಸಮಾಲೋಚನೆಗೆ ಲಭ್ಯ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved