Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಚೈತ್ರಾ ಕುಂದಾಪುರ ಪ್ರಕರಣ : ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ..!!

Dhrishya News by Dhrishya News
15/09/2023
in ಕರಾವಳಿ, ಸುದ್ದಿಗಳು
0
0
SHARES
105
VIEWS
Share on FacebookShare on Twitter

ಉಡುಪಿ : ಸೆ.15: ದೃಶ್ಯ ನ್ಯೂಸ್ : ಚೈತ್ರಾ ಕುಂದಾಪುರ ಅವರ ಕೋಟಿ, ಕೋಟಿ ವಂಚನೆ ಪ್ರಕರಣ ಹಲವು ಆಯಾಮಗಳನ್ನು ಪಡೆದುಕೊಂಡಿದ್ದು ಪ್ರಮುಖವಾಗಿ ರಾಜಕೀಯ ವಲಯದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಲಾಬಿ ನಡೆಸಿದ ವಿಚಾರ ಕೂಡ ಚರ್ಚೆಯಾಗುತ್ತಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ. ಚೈತ್ರಾ ಕುಂದಾಪುರ ಇದೇ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತೆಯಾಗಿ ಸಂಚಲನ ಮೂಡಿಸಿದ್ದರು. ಮಾತ್ರವಲ್ಲದೇ ಬಿಜೆಪಿ ಟಿಕೆಟ್ ನನಗೆ ಸಿಗುತ್ತದೆ ಎನ್ನುತ್ತಿದ್ದರಂತೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಶೋಭಾ ಕರಂದ್ಲಾಜೆ ಅವರು, ಯಾರಿಗೆ ಟಿಕೆಟ್ ಕೊಡಬೇಕು ಎಲ್ಲಿ ಟಿಕೆಟ್ ಕೊಡಬೇಕು ಅನ್ನೋದನ್ನು ವರಿಷ್ಠರೇ ತೀರ್ಮಾನ ಮಾಡುತ್ತಾರೆ. ಭಾರತೀಯ ಜನತಾ ಪಾರ್ಟಿಗೆ ಗಟ್ಟಿಮುಟ್ಟಾದ ನಾಯಕತ್ವ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಯಾರಿಗೆ ಟಿಕೆಟ್ ನೀಡಬೇಕು ಅಂತ ತೀರ್ಮಾನ ಮಾಡುತ್ತಾರೆ. ನಾನು ಸ್ಪರ್ಧೆ ಮಾಡುತ್ತೇನೆ. ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡ್ರು ಅದಕ್ಕೆ ಬೆಲೆ ಇರುವುದಿಲ್ಲ. ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡರೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಚೈತ್ರ ಕುಂದಾಪುರ ಅವರ ವೈಯಕ್ತಿಕ ಸಂಪರ್ಕ ನನಗಿರಲಿಲ್ಲ ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಮಾತ್ರ ಬಿಟ್ಟರೆ ಯಾವುದೇ ಫೋನ್ ಮೂಲಕ ಸಂಪರ್ಕವಿಲ್ಲ. ಆಕೆಯು ನನಗೆ ಫೋನ್ ಮಾಡಿಲ್ಲ ನಾನು ಕೂಡ ಆಕೆಗೆ ಫೋನ್ ಮಾಡಿಲ್ಲ, ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರು ಅವಳನ್ನು ರಕ್ಷಣೆ ಮಾಡುತ್ತಿಲ್ಲ, ಯಾರು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು ಎಂದರು.

ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಬಗ್ಗೆ ಮಾಹಿತಿಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ವಂಚನೆ ಪ್ರಕರಣ ನಿಷ್ಪಕ್ಷವಾಗಿ ತನಿಖೆಯಾಗಲಿ ಎಂದರು

ಬಿಜೆಪಿ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ ಅವರು ಈ ಲಿಂಕ್‌ ಬಗ್ಗೆಯೂ ತನಿಖೆ ಆಗಬೇಕು. ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ. ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ ಮುಂದೆಯೂ ಬರಲ್ಲ. ಭಾರತೀಯ ಜನತಾ ಪಾರ್ಟಿ ಅಂತಹ ಪಾರ್ಟಿಯಲ್ಲ ಎಂದರು.

Tags: #ಚೈತ್ರಾಕುಂದಾಪುರ#ಶೋಭಾಕರಂದ್ಲಾಜೆ#ನ್ಯೂಸ್ #ಉಡುಪಿ
Previous Post

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸಾಂಕೇತಿಕ ಪ್ರತಿಭಟನೆ: ಕಾವೇರಿ ಕಿಚ್ಚು..!!

Next Post

ಮಣಿಪಾಲ : ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ “ಇಂಜಿನಿಯರ್ಸ್ ಡೇ” ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ "ಇಂಜಿನಿಯರ್ಸ್ ಡೇ" ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved