Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಶ್ವಕರ್ಮ ನಿಗಮ ಸ್ಥಾಪನೆ ಮತ್ತು ವಿಶ್ವಕರ್ಮ ಜಯಂತಿ ಆಚರಣೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಣ್ಣ ಸಮುದಾಯಕ್ಕೆ ದೊಡ್ಡ ಕೊಡುಗೆ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶಂಸೆ..!!

Dhrishya News by Dhrishya News
17/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬೆಳಗಾವಿ : ಸೆಪ್ಟೆಂಬರ್ 17: ದೃಶ್ಯ ನ್ಯೂಸ್ : ವಿಶ್ವಕರ್ಮ ನಿಗಮ ಸ್ಥಾಪನೆ ಮತ್ತು ವಿಶ್ವಕರ್ಮ ಜಯಂತಿ ಆಚರಣೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶಂಸಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ರವಿವಾರ (ಸೆ.17) ರಂದು ಏರ್ಪಡಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವ ಕರ್ಮ ಸಮಾಜ ಹಿಂದುಳಿದ ಸಮಾಜ ಎನ್ನುವ ಭಾವನೆ ಯಾರಿಗೂ ಬೇಡ. ಪ್ರಪಂಚವನ್ನು ಭೂ ಪುಟದಲ್ಲಿ ದಾಖಲಿಸಿದವರೇ ವಿಶ್ವಕರ್ಮರು. ಏನನ್ನೇ ಕೊಟ್ಟರೂ ಕಸದಿಂದ ರಸ ತಯಾರಿಸುವವರು ವಿಶ್ವಕರ್ಮರು. ವಿಶ್ವಕರ್ಮ ಸಮಾಜವನ್ನು ಮುನ್ನೆಲೆಗೆ ತರುವಲ್ಲಿ ಸಿದ್ದರಾಮಯ್ಯ ಈ ಹಿಂದೆ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಇಂತಹ ಸರಕಾರವನ್ನು ಹಾಗೂ ಮುಖ್ಯಮಂತ್ರಿಗಳನ್ನು ಸ್ಮರಿಸಬೇಕು. ಉಪಕಾರ ಮಾಡಿದವರ ಸ್ಮರಣೆ ಮಾಡುವುದು ಎಲ್ಲರ ಕರ್ತವ್ಯ ಎಂದರು.

ಇಡೀ ವಿಶ್ವವನ್ನು ವಿಶ್ವದ ಪುಟದಲ್ಲಿ ಚಿತ್ರೀಕರಣ ಮಾಡಿದ ಬ್ರಹ್ಮ ವಿಶ್ವಕರ್ಮ ಹೀಗೇ ವಿಶ್ವ ಕರ್ಮ ಸಮುದಾಯ ಜಗತ್ತು ಸುಂದರವಾಗಿ ಕಾಣಲು ಸುಂದರ ವಸ್ತುಗಳನ್ನು ಕೊಡುವುದರ ಜೊತೆಗೆ ತಮ್ಮ ಜೀವನವನ್ನು ಸಹ ಸುಂದರವಾಗಿಸಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ವಿಶ್ವಕರ್ಮ ಸಮಾಜ ಕಸದಿಂದ ರಸಗಳನ್ನು ಮಾಡಿ, ಹೆಣ್ಣು ಮಕ್ಕಳ ಸೌಂದರ್ಯಕ್ಕೆ ಒಡವೆ ಆಭರಣ, ರೈತರ ಸಲಕರಣೆ ಕೊಡುವುದರ ಜೊತೆಗೆ ತಮ್ಮ ಜೀವನವನ್ನು ವಿವಿಧ ಕ್ಷೇತ್ರಗಳಲ್ಲಿಯೂ ಸಹ ಅಭಿವೃದ್ಧಿಗೊಳಿಸಿಕೊಳ್ಳಬೇಕು. ಪ್ರತಿ ದಿನ ಸಮಾಜ ನಿಮ್ಮನ್ನು ನೆನೆಸುವಂತಹ ರೀತಿಯಲ್ಲಿ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಕಾರ್ಯಕ್ಕೆ ನಾವೆಲ್ಲ ಋಣಿಯಾಗಿದ್ದೇವೆ ಎಂದರು.

ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ರಾಜ್ಯದ ಜನರಿಗೆ, ಮಹಿಳೆಯರಿಗೆ ಸಾಕಷ್ಟು ಕೊಡುಗೆಗಗಳನ್ನು ನೀಡಿದೆ. ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಮೂಲಕ ಪ್ರತಿ ಮನೆ ಮನೆಗೆ ನೆರವಾಗುವ ಕೆಲಸವನ್ನು ಮಾಡಿದ್ದೇವೆ ಎಂದು ಈ ಸಂದರ್ಭದಲ್ಲಿ ವಿವರಿಸಿದರು.

Previous Post

ಬ್ರಹ್ಮಾವರ : ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ..!!

Next Post

ಉಡುಪಿ : ಜಿಲ್ಲೆಯಲ್ಲಿ 470 ಸ್ಥಳಗಳಲ್ಲಿ ಗಣೇಶೋತ್ಸವಕ್ಕೆ ಅನುಮತಿ- ಎಸ್ಪಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲೆಯಲ್ಲಿ 470 ಸ್ಥಳಗಳಲ್ಲಿ ಗಣೇಶೋತ್ಸವಕ್ಕೆ ಅನುಮತಿ- ಎಸ್ಪಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News