Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾಪು : ಬೈಕ್‌ ಕಳವು ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ..!!

Dhrishya News by Dhrishya News
21/09/2023
in मौसम
0
0
SHARES
43
VIEWS
Share on FacebookShare on Twitter

ಕಾಪು : ಸೆಪ್ಟೆಂಬರ್ 21: ದೃಶ್ಯ ನ್ಯೂಸ್ : ಕಾಪು ರೆಸಿಡೆನ್ಸಿ ಬಳಿ ಪಾರ್ಕ್‌ ಮಾಡಿ ಹೋಗಿದ್ದ ಪಲ್ಸರ್‌ ಬೈಕ್‌ ಕಳವು ಪ್ರಕರಣವನ್ನು ಭೇದಿಸಿರುವ ಕಾಪು ಪೊಲೀಸರು ಆರೋಪಿ ಮೂಳೂರು ನಿವಾಸಿ ಸೂರಜ್‌ ಕೋಟ್ಯಾನ್‌ (31) ಎಂಬಾತನನ್ನು ಹತ್ತೇ ದಿನದಲ್ಲಿ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉತ್ತರ ಪ್ರದೇಶ ಮೂಲದ ಶಾರುಖ್‌ ಹಸನ್‌ ಕಾಪು ಸ್ಮಾಲ್‌ ವರ್ಲ್ಡ್ ಬಿಲ್ಡಿಂಗ್‌ನಲ್ಲಿ ಸೆಲೂನ್‌ ನಡೆಸುತ್ತಿದ್ದು, ಈತ ಸೆ. 7 ರಂದು ರಾತ್ರಿ ಕಾಪು ರೆಸಿಡೆನ್ಸಿ ಬಳಿ ನಿಲ್ಲಿಸಿ ಹೋಗಿದ್ದ ಬೈಕ್‌ ಸೆ.8 ರಂದು ಬೆಳಗ್ಗೆ ಬಂದು ನೋಡುವಾಗ ನಾಪತ್ತೆಯಾಗಿತ್ತು.

ಅನೂಪ್‌ ಕುಮಾರ್‌ ಅವರಿಗೆ ಸೇರಿರುವ 15,000 ರೂ. ಮೌಲ್ಯದ ಪಲ್ಸರ್‌ ಬೈಕ್‌ ಕಳವಾಗಿರುವ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಳವಾದ ಎರಡು ದಿನಗಳ ಬಳಿಕ ಕೊಪ್ಪಲಂಗಡಿ ಸ್ಮಶಾನದ ಬಳಿ ಪೊದೆಯಲ್ಲಿ ಅಡಗಿಸಿಟ್ಟಿದ್ದ ಬೈಕ್‌ನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಕೊಪ್ಪಲಂಗಡಿಯಲ್ಲಿ ಬೈಕ್‌ ಸಿಕ್ಕಿದ್ದರಿಂದ ಘಟನೆಯಲ್ಲಿ ಸ್ಥಳೀಯರೇ ಇರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ತನಿಖೆ ಚುರುಕುಗೊಳಿಸಿದ ಕಾಪು ಎಸ್‌ಐ ಅಬ್ದುಲ್‌ ಖಾದರ್‌ ಮಾರ್ಗದರ್ಶನದಲ್ಲಿ ಕ್ರೈಂ ಎಸ್‌ಐ ಪುರುಷೋತ್ತಮ್‌, ಅಪರಾಧ ಪತ್ತೆ ವಿಭಾಗದ ನಾರಾಯಣ ಮತ್ತು ರಾಮು ಅವರ ನೇತೃತ್ವದ ತಂಡವು ಮೂಳೂರಿನ ಹಳೆ ಬೈಕ್‌ ಕಳ್ಳತನ ಆರೋಪಿ ಸೂರಜ್‌ ಬಗ್ಗೆ ಸಂಶಯ ವ್ಯಕ್ತಪಡಿಸಿ, ಆತನನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ತಾನೇ ಬೈಕ್‌ ಕಳವು ನಡೆಸಿ ಪೆಟ್ರೋಲ್‌ ಖಾಲಿಯಾಗಿದ್ದ ಬೈಕ್‌ನ್ನು ಕೊಪ್ಪಲಂಗಡಿ ಸ್ಮಶಾನದ ಬಳಿ ಅಡಗಿಸಿಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿ ಸೂರಜ್‌ ಕೋಟ್ಯಾನ್‌ ಹಳೆ ಆರೋಪಿಯಾಗಿದ್ದು ಈತನ ವಿರುದ್ಧ ಹಿಂದೆ ಕಾಪು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೋಣಾಜೆ, ಕಂಕನಾಡಿ, ಪಣಂಬೂರು ಪೊಲೀಸ್‌ ಠಾಣೆಗಳಲ್ಲಿ ಬೈಕ್‌ ಕಳವು ಮತ್ತು ದರೋಡೆ ಪ್ರಕರಣ ದಾಖಲಾಗಿದ್ದವು. ಬೈಕ್‌ ಕಳವಾದ ಹತ್ತು ದಿನದೊಳಗೆ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರ ಕ್ರಮಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

Tags: #ಕಾಪು#ಬೈಕ್ ಕಳವ್#ನ್ಯೂಸ್
Previous Post

ಬೈಂದೂರು: ಗಂಗೊಳ್ಳಿ ವಿದ್ಯಾ ಗಣಪತಿ ಉತ್ಸವ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ವಿತರಣೆ…!!

Next Post

ಶಿರ್ವ : ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು : ನಾಲ್ವರ ಬಂಧನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರ್ವ : ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು : ನಾಲ್ವರ ಬಂಧನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check