Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ವಿಧಾನಸೌಧ ಮುತ್ತಿಗೆಗೆ ಯತ್ನ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ..!!

Dhrishya News by Dhrishya News
22/09/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬೆಂಗಳೂರು: ದೃಶ್ಯ ನ್ಯೂಸ್ : ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ. ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಗುರುವಾರ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಗಾಂಧಿನಗರದಿಂದ ವಿಧಾನಸೌಧದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಗಾಂಧಿನಗರದಲ್ಲಿರುವ ಕರವೇ ಕಚೇರಿಯಿಂದ ವಿಧಾನಸೌಧದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಕಾರ್ಯಕರ್ತರನ್ನು ಗಾಂಧಿ ಪ್ರತಿಮೆ ವೃತ್ತದಲ್ಲೇ ಪೊಲೀಸರು ತಡೆದು ನಿಲ್ಲಿಸಿದರು. ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿದೆ. ಪ್ರತಿಭಟನೆಗೂ ಅವಕಾಶವಿಲ್ಲ. ಹೀಗಾಗಿ, ಮೆರವಣಿಗೆ ಕೈ ಬಿಟ್ಟು ವಾಪಸು ಹೋಗಿ ಎಂದು ಪೊಲೀಸರು ಎಚ್ಚರಿಸಿದರು.

ಅದಕ್ಕೆ ಒಪ್ಪದ ಕಾರ್ಯಕರ್ತರು, ಸ್ಥಳದಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ತಡೆದು ಪ್ರತಿಭಟನೆಗೆ ಮುಂದಾದರು. ಬ್ಯಾರಿಕೇಡ್ ಹಾಗೂ ಪೊಲೀಸರನ್ನು ತಳ್ಳಿ ಮುಂದಕ್ಕೆ ಹೋಗಲು ಯತ್ನಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ನೂಕುನುಗ್ಗಲು ಉಂಟಾಯಿತು.

ಇದೇ ಸಂದರ್ಭದಲ್ಲಿ ಪೊಲೀಸರು, ಟಿ. ನಾರಾಯಣಗೌಡ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಎಲ್ಲರನ್ನೂ ಬಿಎಂಟಿಸಿ ಬಸ್‌ಗಳಲ್ಲಿ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮೈದಾನಕ್ಕೆ ಕರೆದೊಯ್ದರು. ಕೆಲ ಗಂಟೆಗಳ ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಿದರು.

ಕರ್ನಾಟಕ ಮತ್ತು ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರ ಬರಗಾಲವಿದೆ. ಇಂಥ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ, ಜನರಿಗೆ ಸಂಕಷ್ಟ ಎದುರಾಗಲಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನೀರು ಹರಿಸಬಾರದು. ಜನರ ಆಗ್ರಹವನ್ನು ಧಿಕ್ಕರಿಸಿ ನೀರು ಹರಿಸಿದರೆ, ಗಂಭೀರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರವೇ ಕಾರ್ಯಕರ್ತರು ಎಚ್ಚರಿಸಿದರು.

Tags: #ಬೆಂಗಳೂರು#ವಿಧಾನಸೌಧ#ಪೊಲೀಸ್ ವಶ
Previous Post

ಉಡುಪಿ : ಮೀನು ಮಾರಾಟ ಫೆಡರೇಷನ್‌ಗೆ ವಂಚಿಸಿದ ಪ್ರಕರಣ: ಮಂಜುನಾಥ ಖಾರ್ವಿ ಬಂಧನ..!!

Next Post

ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check