Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ..!!

Dhrishya News by Dhrishya News
23/09/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು: ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ  ಅವರು ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ  ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು.

32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ ವಿವರಣೆಗಳನ್ನು ಕೇಳಿದರು.

ನಮ್ಮ ಮೊದಲ ಅವಧಿಯ ಸರ್ಕಾರದಲ್ಲಿ ಎಲ್ಲಾ ಸಮಸ್ಯೆಗಳ ನಡುವೆಯೇ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. ನಾವು ಅಧಿಕಾರಕ್ಕೆ ಬಂದ 2013 -14ರಲ್ಲಿ 14,048 ಮೆಗಾವ್ಯಾಟ್‌ ಉತ್ಪಾದನೆ ಆಗುತ್ತಿತ್ತು. 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಉತ್ಪಾದನೆ ಏರಿಕೆಯಾಗಿತ್ತು. ಬಹುತೇಕ ದುಪ್ಪಟ್ಟಾಗಿತ್ತು ಎಂದು ಸ್ಮರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಅಗತ್ಯ ಗುಣಮಟ್ಟದಲ್ಲಿ ಇಲ್ಲದಿರುವುದರಿಂದ ವಿದ್ಯುತ್‌ ಉತ್ಪಾದನೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದ್ದು, ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಇದಲ್ಲದೆ ಕಲ್ಲಿದ್ದಲು ಆಮದು ಮಾಡಲೂ ಸಹ ಟೆಂಡರ್‌ ಕರೆಯಲಾಗಿದೆ ಎಂದು ವಿವರಿಸಿದರು.

ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಉಷ್ಣವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡದಂತೆ ಸೂಚನೆ ನೀಡಿದರು.

ನೀರಾವರಿಗೆ ಸೌರ ವಿದ್ಯುತ್‌ ಪಂಪ್‌ಸೆಟ್‌ಗಳ ಬಳಕೆಯನ್ನು ಉತ್ತೇಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದರಿಂದ ಅಕ್ರಮ ನೀರಾವರಿ ಪಂಪ್‌ಸೆಟ್‌ ಹಾವಳಿ ಹಾಗೂ ವಿದ್ಯುತ್‌ ಪ್ರಸರಣ ಸೋರಿಕೆಯನ್ನು ತಡೆಗಟ್ಟಲು ಸಾಧ್ಯ ಎಂಬ ಅಂಶಗಳ ಕುರಿತು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನ ಸೆಳೆದರು.

ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್‌ ತಿಂಗಳಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್‌ ತಿಂಗಳಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್‌ ಬಿಲ್‌ ನೀಡಲಾಗಿದೆ. ಇದಕ್ಕಾಗಿ 1400 ಕೋಟಿ ರೂ. ಒದಗಿಸಲಾಗಿದೆ ಎನ್ನುವ ವಿವರ ನೀಡಿದರು.

ಎಸ್ಕಾಂ ಗಳ ಆರ್ಥಿಕ ಸ್ಥಿತಿಗತಿ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯುತ್‌ ಸೋರಿಕೆ ಕುರಿತಂತೆ ರಾಜ್ಯದ ಎಲ್ಲ ಎಸ್ಕಾಂ ಗಳೂ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದರು. ಅಂತೆಯೇ ಅಗತ್ಯವಿರುವಲ್ಲಿ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ಹಾಗೂ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸುವಂತೆ ಸೂಚಿಸಿದರು.

ಪ್ರಸಕ್ತ ವರ್ಷದಲ್ಲಿ ವಿದ್ಯುತ್‌ ಉಪಕೇಂದ್ರಗಳ ಸ್ಥಾಪನೆಗಾಗಿ 2500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ಪ್ರಸಕ್ತ ವಿದ್ಯುತ್‌ ಪರಿಸ್ಥಿತಿ ಕುರಿತು ಹಾಗೂ ಆರ್ಥಿಕ ಸ್ಥಿತಿಗತಿ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಆರ್ಥಿಕ ಇಲಾಖೆ ಕಾರ್ಯದರ್ಶಿ (ವೆಚ್ಚ) ಡಾ. ಎಂ.ಟಿ. ರೇಜು ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆಯಾಗಿದ್ದು ತೆರಿಗೆ ವಿಧಿಸಲು ಗ್ರಾಮ ಪಂಚಾಯತಿಗೆ ಅಧಿಕಾರವಿಲ್ಲ – ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್..!!

Next Post

ಕುಂದಾಪುರ :ಕಷ್ಟಗಳನ್ನೆ ಗೆಲುವಿನ ಮೆಟ್ಟಿಲಾಗಿಸಿಕೊಂಡವರು ಡಾ. ಶ್ರೀನಿವಾಸ ಶೆಟ್ಟಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ :ಕಷ್ಟಗಳನ್ನೆ ಗೆಲುವಿನ ಮೆಟ್ಟಿಲಾಗಿಸಿಕೊಂಡವರು ಡಾ. ಶ್ರೀನಿವಾಸ ಶೆಟ್ಟಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check