Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
25/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಬೆಂಗಳೂರು ಸೆ 25: ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ನಾಡಿನ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಪ್ರವಾಸೋದ್ಯಮ ಮತ್ತು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ “ನಮ್ಮ ಸ್ಮಾರಕ: ನಮ್ಮ ಪರಂಪರೆ, ನಮ್ಮ ಗುರುತು, ನಮ್ಮ ಹೆಮ್ಮೆ” ಅಭಿಯಾನದ ಸಂವಾದ ಮತ್ತು ಡಿಜಿಟಲ್ ವೇದಿಕೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎನ್ನುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತನ್ನು ಯಾರೂ ಮರೆಯಬಾರದು. ನಮ್ಮ ಇತಿಹಾಸ, ಪರಂಪರೆಯನ್ನು ಈಗಿನ ಪೀಳಿಗೆಗೆ ಅರ್ಥ ಮಾಡಿಸಲು, ಮುಂದಿನ ತಲೆ ಮಾರುಗಳಿಗೆ ನಮ್ಮತನದ ಮಹತ್ವವನ್ನು ಸಾರಲು ಸ್ಮಾರಕಗಳ ರಕ್ಷಣೆ ಅತ್ಯಗತ್ಯ ಎಂದರು.

ಸ್ಮಾರಕಗಳ ರಕ್ಷಣೆಗೆ ಸರ್ಕಾರದ ಜತೆಗೆ ಸಾರ್ವಜನಿಕರು ಕೈ ಜೋಡಿಸಿದರೆ, ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸಬಹುದು.

ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆಸಲು ಸಾಕಷ್ಟು ಅವಕಾಶಗಳಿವೆ. ಅಧ್ಯಾತ್ಮಿಕ ಮತ್ತು ಪರಿಸರ ಪ್ರವಾಸಿ ಕೇಂದ್ರಗಳಿಗೆ, ದೇವಾಲಯಗಳಿಗೆ ಬಡವರೂ ಹೋಗಲು ಅವಕಾಶ ಕಲ್ಪಿಸಬೇಕು ಎನ್ನುವ ಕಾಳಜಿ “ಶಕ್ತಿ” ಯೋಜನೆಯ ಹಿಂದಿದೆ. 60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆದು ದೇವಸ್ಥಾನಗಳ ಆದಾಯ ಹೆಚ್ಚಾಗಿದೆ. ಆರ್ಥಿಕತೆಗೆ ಚೈತನ್ಯ ಬಂದು ವ್ಯಾಪಾರ, ವಹಿವಾಟು ಹೆಚ್ಚಾಗಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಶಕ್ತಿ ಯೋಜನೆ ಹಿಂದೆ ಇಷ್ಟೆಲ್ಲಾ ಕಾಳಜಿಗಳು ಕೆಲಸ ಮಾಡಿವೆ. ಕೇವಲ ಚುನಾವಣೆ ಕಾರಣಕ್ಕೆ ಮಾಡಿದ್ದಲ್ಲ ಎಂದು ವಿವರಿಸಿದರು.

ಸ್ಮಾರಕಗಳನ್ನು ದತ್ತು ಪಡೆಯಲು ಮತ್ತು ಸಂರಕ್ಷಿಸಲು ಸ್ವಯಂ ಸ್ಫೂರ್ತಿಯಿಂದ ಮುಂದೆ ಬಂದಿರುವ ಕೈಗಾರಿಕೋದ್ಯಮಿಗಳು ಮತ್ತು ಸಂಘ-ಸಂಸ್ಥೆಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ.ಪಾಟೀಲ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಸ್ಟಾರ್ಟ್ ಅಪ್ ವಿಜನ್ ಗ್ರೂಪ್ ಮತ್ತು ಕಲ್ಕಿ ಫೌಂಡೇಶನ್ ಅಧ್ಯಕ್ಷರಾದ ಪ್ರಶಾಂತ್ ಪ್ರಕಾಶ್ ಅವರು ಆಗಮಿಸಿದ್ದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಲಾಖೆ ನಿರ್ದೇಶಕರಾದ ವಿ.ರಾಮ್ ಪ್ರಸಾತ್ ಮನೋಹರ್, ಇಲಾಖೆಯ ಆಯುಕ್ತರಾದ ಎ.ದೇವರಾಜು ಸೇರಿ ಹಲವರು ಉಪಸ್ಥಿತರಿದ್ದರು.

*ಕಾರ್ಯಕ್ರಮದ ಹೈಲೈಟ್ಸ್*

ವಿಶ್ವ ಪರಂಪರೆ ತಾಣವೆಂದು ಘೋಷಿಸಲಾದ ಹೊಯ್ಸಳರ ವಾಸ್ತುಶಿಲ್ಪಿಯ ಸಮಗ್ರ ಭಾಗಗಳನ್ನು ಇನ್ ಟ್ಯಾಕ್ ಸಂಸ್ಥೆ ವತಿಯಿಂದ ಪ್ರಸ್ತುತ ಪಡಿಸಲಾಯಿತು

ಬ್ರಿಗೇಡ್ ಸಂಸ್ಥೆಯೊಂದಿಗೆ ವೆಂಕಟಪ್ಪ ಚಿತ್ರಶಾಲೆಯ ನವೀಕರಣ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು

ಸಂರಕ್ಷಣಾ ಸ್ಮಾರಕಗಳ ಯೋಜನೆಗೆ ಒಳಪಡಲು ಆಸಕ್ತಿ ವ್ಯಕ್ತಪಡಿಸಿದ ಸಂಸ್ಥೆಗಳಿಗೆ ಆಶಯಪತ್ರ ವಿತರಿಸಲಾಯಿತು

Previous Post

ಉಡುಪಿ : ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ…!!!

Next Post

ಚಂದ್ರಯಾನ 3 ಮಹಾ ರಸಪ್ರಶ್ನೆಯಲ್ಲಿ ಭಾಗವಹಿಸಲು ಜನರನ್ನು ಆಹ್ವಾನಿಸಿದ (ISRO) ಮುಖ್ಯಸ್ಥ ಎಸ್ ಸೋಮನಾಥ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಂದ್ರಯಾನ 3 ಮಹಾ ರಸಪ್ರಶ್ನೆಯಲ್ಲಿ ಭಾಗವಹಿಸಲು ಜನರನ್ನು ಆಹ್ವಾನಿಸಿದ (ISRO) ಮುಖ್ಯಸ್ಥ ಎಸ್ ಸೋಮನಾಥ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check