Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್: ಸಿ ಎಂ ಸಿದ್ದರಾಮಯ್ಯ..!!

Dhrishya News by Dhrishya News
30/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು ಸೆ 30:ದ್ರಶ್ಯ ನ್ಯೂಸ್ :ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಹೆಚ್ ಬಿ ಆರ್ ಲೇಔಟ್ ನಲ್ಲಿ ನೂತನವಾಗಿ ನಿರ್ಮಿಸಿರುವ ಬ್ಯಾರೀಸ್ ಸೌಹಾರ್ದ ಭವನವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ವೈವಿಧ್ಯತೆಯನ್ನು ಮತ್ತು ಏಕತೆಯನ್ನು ಇತರೆ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ. ಭಿನ್ನ ಸಂಸ್ಕೃತಿಗಳ ನಡುವೆ ಸಮನ್ವಯ, ಸೌಹಾರ್ದ ಇಲ್ಲದೇ ಹೋದರೆ ಆ ದೇಶದಲ್ಲಿ, ಆ ಸಮಾಜದಲ್ಲಿ ನೆಮ್ಮದಿ ಇರಲು ಸಾಧ್ಯವಿಲ್ಲ. ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದರು.

ಮೊಯ್ದೀನ್ ಅವರು ಸೌಹಾರ್ದತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಪರಸ್ಪರ ಅಪನಂಬಿಕೆ ಮತ್ತು ದ್ವೇಷವನ್ನು ಬಿತ್ತುವವರು ಈ ದೇಶದ ಅವನತಿಗೆ ಕಾರಣ ಆಗುತ್ತಾರೆ. ನಮ್ಮ ಸಂವಿಧಾನ ಜಾತ್ಯತೀತತೆಯನ್ನು , ಸೌಹಾರ್ದತೆಯನ್ನು ಎತ್ತಿ ಹಿಡಿದಿದೆ. ಭಾರತದಲ್ಲಿ ಜಾತ್ಯತೀತ ಮೌಲ್ಯವನ್ನು ಮತ್ತು ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಎಂದು ವಿವರಿಸಿದರು.

ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ ಎಂದು ಪ್ರಶ್ನಿಸಿದರು.

ನಾನು ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಸೇರಿ ಫಾರೂಕ್ ಗೆ ಜೆಡಿಎಸ್ ಗೆ ಹೋಗಬೇಡ, ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಹೋಗು ಎಂದು ಎಷ್ಟು ಹೇಳಿದರೂ ಕೇಳಲಿಲ್ಲ. ಈಗ ಏನಾಗಿದೆ ನೋಡಿ ಎಂದು ವಿವರಿಸಿದರು.

*ಕಾನೂನು ಕೈಗೆತ್ತಿಕೊಂಡರೆ ಕ್ರಮ*

ನಮ್ಮ ಆಡಳಿತದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಎಷ್ಟೇ ರಾಜಕೀಯ ಶಕ್ತಿ ಹೊಂದಿದ್ದರೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಖಚಿತ. ಎಲ್ಲಾ ಜಾತಿ, ಧರ್ಮದವರಿಗೂ ಅವರ ಸಂವಿಧಾನಬದ್ದ ಹಕ್ಕುಗಳನ್ನು ಆಚರಿಸಲು ಅವಕಾಶವಿದೆ. ಇದಕ್ಕೆ ಯಾರೇ ತೊಂದರೆ ಕೊಡ್ಟರೂ ಕ್ರಮ ಖಚಿತ ಎಂದು ಎಚ್ಚರಿಸಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಬ್ಯಾರೀಸ್ ಸೌಹಾರ್ದ ಭವನ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Tags: #ಬೆಂಗಳೂರು#ಸಿದ್ದರಾಮಯ್ಯ#ನ್ಯೂಸ್
Previous Post

ಮಣಿಪಾಲ : ಮಾಹೆ ವೈದ್ಯಕೀಯ ಶಿಕ್ಷಣ ಸಮ್ಮೇಳನ 2023 ಆಯೋಜಿಸುವ ಮೂಲಕ ಡಾ. ಟಿಎಂಎ ಪೈ ಅವರ 125 ನೇ ಜನ್ಮ ವಾರ್ಷಿಕೋತ್ಸವ ಆಚರಣೆ..!!!

Next Post

ಉಡುಪಿ :ಅ.3ರಂದು ಜಿಲ್ಲಾ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ – ಎಸ್ಪಿ ಡಾ.ಅರುಣ್.ಕೆ. ಹೇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಅ.3ರಂದು ಜಿಲ್ಲಾ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ - ಎಸ್ಪಿ ಡಾ.ಅರುಣ್.ಕೆ. ಹೇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check