Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ- ಯಶ್ ಪಾಲ್ ಸುವರ್ಣ..!!

Dhrishya News by Dhrishya News
02/10/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 02:ದ್ರಶ್ಯನ್ಯೂಸ್ :ಹಿರಿಯ ನಾಗರಿಕರು ಸಮಾಜದಲ್ಲಿ ಗೌರವಿತವಾಗಿ ಉತ್ತಮ ಗುಣಮಟ್ಟದ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಯಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ರವರು ತಿಳಿಸಿದರು.

ಅವರು ಉಡುಪಿ ನಗರದ ಬನ್ನಂಜೆಯ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ), ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ವೃದ್ಧಾಶ್ರಮಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರ ಶ್ರೇಯ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳು ಹಾಗೂ ಅವರುಗಳ ರಕ್ಷಣೆಗೆ ಕಾನೂನುಗಳನ್ನು ಜಾರಿಗೆ ತಂದಿದೆ ಇವುಗಳ ಬಗ್ಗೆ ಅವರಿಗೆ ಅರಿವು ಮೂಡಿಸಿ ಸಮರ್ಪಕ ಅನುಷ್ಠಾನಕ್ಕೆ ಮುಂದಾಗಬೇಕು ಎಂದರು.

ಹಿರಿಯ ನಾಗರಿಕರು ತಮ್ಮ ಕೆಲಸ ನಿಯಮಿತ ಸರ್ಕಾರಿ ಕಚೇರಿಗಳಿಗೆ ಬಂದಾಗ ಅವರುಗಳಿಗೆ ಪ್ರಥಮ ಅದ್ಯತೆ ನೀಡಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಅವರ ಸಂದರ್ಶನಕ್ಕೆ ಸಮಯವನ್ನು ಮೀಸಲಿರಿಸಬೇಕು ಎಂದರು

ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಸೇರಿದಂತೆ ಮತ್ತಿತರ ಪಿಂಚಣಿ ಯೋಜನೆಗಳ ಪ್ರಯೋಜನ ಪಡೆಯುವಂತೆ ಅವಕಾಶ ಕಲ್ಪಿಸಬೇಕು ಎಂದ ಅವರು ಜಿಲ್ಲೆಯು ಶಾಂತಿಯುತವಾಗಿದ್ದು ,ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿರುವ ಹಿನ್ನೆಲೆ ಅನೇಕ ಅಧಿಕಾರಿಗಳು ತಮ್ಮ ನಿವೃತ್ತಿ ಜೀವನವನ್ನು ಈ ಜಿಲ್ಲೆಯಲ್ಲಿ ನಡೆಸುತ್ತೇವೆ ಎಂದು ಹೇಳುವುದು ಗಮನಾರ್ಹ ಎಂದರು.

ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಾತನಾಡಿ ಹಿರಿಯ ನಾಗರಿಕರಿಗೆ ಸಮಾಜ ಗೌರವ ಕೊಡಬೇಕು, ಅವರಿಗೆ ಸಿಗಬೇಕಾದ ಅವಕಾಶಗಳು ಒದಗಿಸುವ ನೆಲೆಯಲ್ಲಿ ಸ್ಪಂದಿಸಬೇಕು, ಅವರಿಗೆ ಸಾಂತ್ವನದ ಮಾತುಗಳ ನಾಡಿ ಅವರೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದರು.

ಮಕ್ಕಳು ಹಿರಿಯರನ್ನು ನೋಡಿಕೊಳ್ಳದೆ ಇದ್ದ ಸಂದರ್ಭದಲ್ಲಿ ಹಾಗೂ ತೊಂದರೆ ಕೊಟ್ಟಾಗ ಅವರ ರಕ್ಷಣೆಗೆ ಹಿರಿಯ ನಾಗರಿಕರ ಪೋಷಣೆ ,ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆಯನ್ನು ಜಾರಿಗೆ ತಂದಿದೆ ಇದು ಮುಖ್ಯವಲ್ಲ ನಮ್ಮ ಮನಸ್ಥಿತಿ ಮುಖ್ಯ ,ಮಕ್ಕಳು ಆಸ್ತಿಗಾಗಿ ಪೋಷಕರನ್ನು ನೋಡದೆ ತಮ್ಮ ಕರ್ತವ್ಯವೆ ಎಂದು ತಿಳಿದು ಮಾನವೀಯ ನೆಲೆಯಲ್ಲಿ ಜವಾಬ್ದಾರಿ ಅರಿತು ನೋಡಿಕೊಳ್ಳಬೇಕು ಎಂದರು.
ಆಧುನಿಕತೆಯ ಜೀವನದಲ್ಲಿ ಮಕ್ಕಳು ಪ್ರತಿದಿನ ಒತ್ತಡದಿಂದ ಕೆಲಸ ಮಾಡುತ್ತಿರುತ್ತಾರೆ ಕುಟುಂಬದಲ್ಲಿ ಹಿರಿಯರು ಹೊಂದಾಣಿಕೆಯಿಂದ ಜೀವನ ನಡೆಸಬೇಕು ಎರಡು ಕಡೆಯಿಂದ ಅರ್ಥ ಮಾಡಿಕೊಂಡು ಸಾಗಿದಲ್ಲಿ ಕುಟುಂಬ ಸರಿಯಾದ ದಿಕ್ಕಿನಲ್ಲಿ ಸಾಗಲು ಸಾಧ್ಯ ಎಂದರು.
ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ ಹಿರಿಯ ನಾಗರಿಕರು ಪ್ರತಿ ದಿನ ಬೇರೆ ಬೇರೆ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಕ್ರಿಯಾಶೀಲರಾಗಿರಬೇಕು ಎಂದ ಅವರು ಇತ್ತೀಚಿನ ದಿನಗಳಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿರುವುದು ಆತಂಕದ ವಿಷಯ ಎಂದರು.

ಕಾರ್ಯಕ್ರಮದಲ್ಲಿ. ಮನೋ ತಜ್ಞ ಹಾಗೂ ಡಾ. ಎ.ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ ಡಾ ಪಿ .ವಿ.ಭಂಡಾರಿ ಅವರು ‘ಹಿರಿಯ ನಾಗರಿಕರ ಮಾನಸಿಕ ಆರೋಗ್ಯ ‘ಕುರಿತು ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಭಟ್ಟರವರು’ ಹಿರಿಯ ನಾಗರಿಕರಿಗೆ ಕಾನೂನು ಅರಿವು’ ಕುರಿತು ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಡೆದ ಕ್ರೀಡೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಣೆ ಮಾಡಲಾಯಿತು ಹಾಗೂ ಹಿರಿಯ ನಾಗರಿಕರಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆದವು.
ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಏರ್ಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕಿನ ಮಹಾಪ್ರಬಂಧಕ ಪಂಡಿತ್ .ಜಿ,ಲೀಡ್ ಬ್ಯಾಂಕ್ ಮ್ಯಾನೇಜರ್ ಪಿಂಜಾರ್, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ,ಸಿ.ಎಸ್.ರಾವ್, ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರದೀಪ್ ಕುಮಾರ್, ವಾಸುದೇವ ರಾವ್, ಸದಾನಂದ ಹೆಗಡೆ ,ಸರಳ ಕಾಂಚನ್ , ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Tags: #ಉಡುಪಿ#ಯಶಪಲ್ ಸುವರ್ಣ#ಗೌರವಿತ ಜೀವನ#ನ್ಯೂಸ್
Previous Post

ಉಡುಪಿ ಹೆಲ್ಪ್ ಲೈನ್( ರಿ ) 6ನೇಯ ವರ್ಷದ ಪಾದಾರ್ಪಣೆಯ ಸಂಭ್ರಮ – ಸಮಾಜ ಸೇವಾ ಕಾರ್ಯಕ್ರಮ…!!

Next Post

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಹ ಮೀನುಗಾರರಿಂದ ವಿವಿದ ಯೋಜನೆಗಳಿಗೆ ಅರ್ಜಿ ಆಹ್ವಾನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಹ ಮೀನುಗಾರರಿಂದ ವಿವಿದ ಯೋಜನೆಗಳಿಗೆ ಅರ್ಜಿ ಆಹ್ವಾನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check