Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೇಂದ್ರ ತಂಡಕ್ಕೆ ರಾಜ್ಯದ ಬರ-ಕೃಷಿ ಪರಿಸ್ಥಿತಿಯ ವಾಸ್ತವಾಂಶ ವಿವರಿಸಿದ ಸಿಎಂ ಸಿದ್ದರಾಮಯ್ಯ..!!

ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಲಹೆ..

Dhrishya News by Dhrishya News
05/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬೆಂಗಳೂರು, ಅಕ್ಟೋಬರ್‌ 5- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು.

ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕೆಂದು ಅವರು ಅಭಿಪ್ರಾಯಪಟ್ಟರು.

 

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ವಿವರಿಸಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದು ವಿವರಿಸಿದರು.

 

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟೈಸ್‌ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ವಿ. ಮಹೇಶ್‌, ಕೇಂದ್ರ ತಂಡದ ಮುಖ್ಯಸ್ಥ ಅಜಿತ್‌ ಕುಮಾರ್‌ ಸಾಹು ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.

Previous Post

ಅಕ್ಟೋಬರ್ 9ರಂದು ನಿಗದಿಯಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಅನಿವಾರ್ಯ ಕಾರಣಗಳಿಂದ ಮುಂದೂಡಿಕೆ..!!

Next Post

ಮಣಿಪಾಲ್ ಅಕಾಡೆಮಿಯಲ್ಲಿ “ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆಯ ಸಾರ್ವತ್ರಿಕೀಕರಣ (UTIKS) ಪೋರ್ಟಲ್” ಆನ್‌ಲೈನ್ ವೇದಿಕೆಯ ಬಿಡುಗಡೆ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಅಕಾಡೆಮಿಯಲ್ಲಿ "ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆಯ ಸಾರ್ವತ್ರಿಕೀಕರಣ (UTIKS) ಪೋರ್ಟಲ್" ಆನ್‌ಲೈನ್ ವೇದಿಕೆಯ ಬಿಡುಗಡೆ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
imunify-bot-check