Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ರಕ್ತಕ್ಕೆ ಪರ್ಯಾಯ ಮಾರ್ಗವಿಲ್ಲ: ಹೆಚ್ಚು ರಕ್ತದಾನ ಶಿಬಿರಗಳನ್ನು ಏರ್ಪಡಿಸಲು ಆದ್ಯತೆ ನೀಡಿ : ಬಸ್ರೂರು ರಾಜೀವ ಶೆಟ್ಟಿ..!!

Dhrishya News by Dhrishya News
06/10/2023
in ಕರಾವಳಿ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ, ಅ.6: ದೃಶ್ಯ ನ್ಯೂಸ್ : ಕಾಲೇಜು ಯುವ ರೆಡ್‌ ಕ್ರಾಸ್ ಘಟಕಗಳ ಕಾರ್ಯಕ್ರಮ ಅಧಿಕಾರಿಗಳು ತರಬೇತಿಯನ್ನು ಪಡೆದು ಅದನ್ನು ತಮ್ಮ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಹಾಗೂ ಸಂಘ-ಸಂಸ್ಥೆಗಳಿಗೆ ತಲುಪಿಸಿ, ಯುವ ರೆಡ್‌ ಕ್ರಾಸ್‌ನ ಕಾರ್ಯಕ್ರಮವನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಂಟ್ ಹಾಲ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರೆಡ್‌ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲಾ ಘಟಕ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಕಾಲೇಜುಗಳ ವೈ.ಆರ್.ಸಿ ಘಟಕಗಳ ಅಧಿಕಾರಿಗಳಿಗೆ ನಡೆದ ಒಂದು ದಿನದ ಯುವ ರೆಡ್‌ಕ್ರಾಸ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ಶಾಲಾ-ಕಾಲೇಜು ಹಂತದಲ್ಲಿಯೇ ಮೂಡಿಸಬೇಕು. ಯುವ ರೆಡ್‌ ಕ್ರಾಸ್ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವಂತೆ ತಿಳಿಸಿದ ಅವರು, ತರಬೇತಿ ಪಡೆದ ತರಬೇತುದಾರರು ಸಮಾಜಮುಖಿ ವಾತಾವರಣವನ್ನು ಸೃಷ್ಠಿಸುವುದರ ಮೂಲಕ ರೆಡ್‌ಕ್ರಾಸ್ ಸಂಸ್ಥೆಯನ್ನು ಜಿಲ್ಲೆಯಾದ್ಯಂತ ಅದ್ವಿತೀಯ ಸಂಸ್ಥೆಯನ್ನಾಗಿ ರೂಪಿಸಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸ್ರುರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ಯಾವುದೇ ಫಲಾಪೇಕ್ಷೆಯಿಲ್ಲದೇ ಮಾನವೀಯ ನೆಲೆಯಲ್ಲಿ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುತ್ತಾ ಬಂದಿದೆ. ಕಾಲೇಜುಗಳಲ್ಲಿ ಯೂತ್‌ ರೆಡ್‌ ಕ್ರಾಸ್ ಘಟಕವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಸಮಾಜಕ್ಕೆ ಸೇವೆ ನೀಡುವಂತಹ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಿ ಎಂದ ಅವರು, ರಕ್ತಕ್ಕೆ ಪರ್ಯಾಯ ಮಾರ್ಗವಿಲ್ಲ. ಇದನ್ನು ಉತ್ಪಾದನೆ ಮಾಡಲು ಸಾಧ್ಯವಿಲ್ಲ. ಬ್ಲಡ್‌ ಬ್ಯಾಂಕ್‌ಗೆ ರಕ್ತವನ್ನು ಸಂಗ್ರಹಿಸಿ, ನೀಡುವುದರಿಂದ ಹಲವಾರು ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಸೇರಿದಂತೆ ಅಪಘಾತ ಹೊಂದಿದ ವ್ಯಕ್ತಿಗಳ ಜೀವ ಉಳಿಸಲು ಸಾಧ್ಯ. ಆದ್ದರಿಂದ ಹೆಚ್ಚು ರಕ್ತದಾನ ಶಿಬಿರಗಳನ್ನು ಏರ್ಪಡಿಸಲು ಆದ್ಯತೆ ನೀಡುವಂತೆ ತಿಳಿಸಿದರು.

ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಹಾಗೂ ರೆಡ್‌ಕ್ರಾಸ್ ಮ್ಯಾನೆಜಿಂಗ್ ಕಮಿಟಿ ಸದಸ್ಯ ವಿ.ಜಿ. ಶೆಟ್ಟಿ ಮಾತನಾಡಿದರು. ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ರೆಡ್‌ಕ್ರಾಸ್‌ನ ಆಡಳಿತ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

ವೈ.ಆರ್.ಸಿ ಟ್ರೈನರ್ ಸಚೇತ್ ಸುವರ್ಣ ಹಾಗೂ ಅನುರಾಧ ಅವರು ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವೈ.ಆರ್.ಸಿ ಘಟಕಗಳ ಕಾರ್ಯಕ್ರಮ ಅಧಿಕಾರಿಗಳಿಗೆ ತರಬೇತಿ ನೀಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಯೂತ್ ರೆಡ್‌ ಕ್ರಾಸ್ ನೋಡೆಲ್ ಆಫೀಸರ್ ಡಾ. ಗಾಯತ್ರಿ ಎನ್ ಸ್ವಾಗತಿಸಿ, ಖಜಾಂಜಿ ರಮಾದೇವಿ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.

Tags: #ಉಡುಪಿ#ರಕ್ತದಾನ ಶಿಬಿರ#ನ್ಯೂಸ್
Previous Post

Best Ramp Walk Title” ಸಹಿತ “Miss Teen Karnataka 2023” ಪ್ರಶಸ್ತಿ ಮುಡಿಗೇರಿಸಿಕೊಂಡ ಕುಮಾರಿ ಸಿಂಚನ ಪ್ರಕಾಶ್..!!

Next Post

ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಅವಕಾಶ : ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಿಗಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೊಸ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲಿಯೇ ಅವಕಾಶ : ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಿಗಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News