Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅತ್ತಿಬೆಲೆ ಅಗ್ನಿ ದುರಂತ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
08/10/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಬೆಂಗಳೂರು, ಅಕ್ಟೋಬರ್ 08 : ಅತ್ತಿಬೆಲೆ ಅಗ್ನಿದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು.ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅತ್ತಿಬೆಲೆಯಲ್ಲಿ ನಡೆದ ಅಗ್ನಿದುರಂತದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಕ್ಟೋಬರ್ 08 ರಂದು ಸುಮಾರು ಮಧ್ಯಾಹ್ನ 3.15 ರಿಂದ 3.30 ಗಂಟೆ ಸಮಯದೊಳಗೆ ಬೆಂಕಿ ಅನಾಹುತ ನಡೆದಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ರಾಮುಸ್ವಾಮಿರೆಡ್ಡಿ ಎಂಬುವರು ಪರವಾನಗಿ ಪಡೆದು ಪಟಾಕಿ ಮಾರಾಟದ ವ್ಯವಹಾರ ಮಾಡುತ್ತಿದ್ದರು. ನಿನ್ನೆ 3.00 ಗಂಟೆ ಸಮಯದಲ್ಲಿ ತಮಿಳುನಾಡಿನಿಂದ ಟ್ರಕ್ ಗಳಲ್ಲಿ ಪಟಾಕಿಗಳು ಬಂದಿದ್ದು, ಬೆಂಕಿ ಹೇಗೆ ಪಟಾಕಿಗಳ ಮೇಲೆ ಬಿತ್ತು ಎನ್ನುವಿ ನಿಖರ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಇಲ್ಲಿ ಪರಿಶೀಲಿಸಿದ ಮೇಲೆ, ಸ್ಪೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ಕಂಡುಬಂದಿದೆ ಎಂದರು.

 ಪರವಾನಾಗಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ದಿ.13.9.2023 ರಂದು ನವೀಕರಿಸಲಾಗಿದೆ. ದಿ:31.10.2028 ರವರೆಗೆ ಜಾರಿಯಲ್ಲಿದೆ. ಮತ್ತೊಂದು ಪರವಾನಗಿ 18.1.2021 ರಂದು 28.1.2026 ರವರೆಗೆ ಜಾರಿಯಲ್ಲಿರಲಿದೆ. ಜಯಮ್ಮ, ಕೋಂ ದಿ. ಸಿದ್ದಾರೆಡ್ಡಿ, ಅನಿಲ್ ರೆಡ್ಡಿ ಬಿನ್ ಸಿದ್ದಾರೆಡ್ಡಿ ಎಂಬುವವರು ಈ ಸ್ಥಳದ ಮಾಲೀಕರು ಎಂದು ವಿವರಿಸಿದರು.

ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ಇದರಲ್ಲಿ 14 ಜನರು ಮೃತಪಟ್ಟಿದ್ದಾರೆ. ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿಯವರು. ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳು. ರಜಾ ಸಮಯದಲ್ಲಿ ಓದಿಗಾಗಿ ಹಣ ಸಂಪಾದನೆಗಾಗಿ ಬಂದವರು. ಒಬ್ಬ ಮ್ಯಾನೇಜರ್ ನ್ನು ಹೊರತುಪಡಿಸಿ ಯಾರೂ ಖಾಯಂ ನೌಕರರಿಲ್ಲ. ಸ್ಫೋಟಕಗಳಿಗೆ ಅಗತ್ಯವಾದ ಯಾವುದೇ ಸುರಕ್ಷಾ ಕ್ರಮಗಳನ್ನು ಕೈಗೊಂಡಿಲ್ಲ. ಗೋದಾಮು ಅಧಿಕೃತವೋ ಅಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಹಿಂಭಾಗದಲ್ಲಿ 200 ಅಡಿಗಳವರೆಗೂ ಗೋದಾಮು ಇದೆ. ಎಲ್ಲೂ ಕೂಡ ಅಗ್ನಿ ಶಾಮಕಗಳನ್ನು ಅಳವಡಿಸಿಲ್ಲ. ಒಟ್ಟಾರೆ ಮೇಲ್ನೋಟಕ್ಕೆ ಪರವಾನಗಿ ಹೊಂದಿದವರ ನಿರ್ಲಕ್ಷ್ಯ ಎದ್ದುಕಾಣುತ್ತಿದೆ ಎಂದರು.

ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. 14 ಜನ ಮೃತಪಟ್ಟಿರುವುದು ದೊಡ್ಡ ದುರಂತ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರೆಲ್ಲರ ಕುಟುಂಬ ದವರಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರಾಮುಸ್ವಾಮಿರೆಡ್ಡಿ , ನವೀನ್, ಅನಿಲ್ ರೆಡ್ಡಿ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿದೆ. .285, 286 ,337, 338, 437, 304 ಪರಿಚ್ಛೇಧದಡಿ ಎಫ್ ಐ.ಆರ್ ಕೂಡ ದಾಖಲಾಗಿದೆ. ಅವರ ಮೇಲೆ ತನಿಖೆ ಮಾಡಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಗಳನ್ನು ವಿಚಾರಿಸಿದಾಗ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ನಿರಾಕ್ಷೇಪಣಾ ಪತ್ರ ನೀಡಿದ್ದರು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಗಳು ಖುದ್ದಾಗಿ ಭೇಟಿ ನೀಡಬೇಕಾಗಿತ್ತು. ನಿರಾಕ್ಷೇಪಣಾ ಪತ್ರ ನೀಡಿದವರು ಸ್ಫೋಟಕಗಳ ಕಾಯ್ದೆಯಲ್ಲಿನ ಅಗತ್ಯಗಳನ್ನು ನೋಡಿ ಕೊಡಬೇಕಿತ್ತು. ಏಕೆಂದರೆ ಪರವಾನಗಿಯನ್ನು ಸ್ಫೋಟಕಗಳ ಕಾಯ್ದೆಯಡಿಯಲ್ಲಿ ನೀಡಲಾಗಿದೆ. ಜಿಲ್ಲಾಧಿಕಾರಿಗಳೂ ಕೂಡ ಸ್ಥಳ ಪರಿಶೀಲನೆ ಮಾಡಿ ನೀಡಬೇಕಿತ್ತು. ಈ ಬಗ್ಗೆ ಸೂಕ್ತ ಪರಿಶೀಲನೆಯಾಗಬೇಕು ಎಂದರು.

1000 ಕೆಜಿ ಯನ್ನು ಮಾರಾಟ ಮಾಡಲು ಪರವಾನಗಿ ಇದ್ದು, ಬಹುಶಃ ಸಂಗ್ರಹ ಮಾಡಲು ಪರವಾನಗಿ ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ದೀಪಾವಳಿ ಹಬ್ಬ ಹತ್ತಿರವಿರುವುದರಿಂದ ಮುಂದೆ ಅಗತ್ಯ ಕ್ರಮಗಳನ್ನು ಚರ್ಚೆ ಮಾಡಿ ಕೈಗೊಳ್ಳಲಾಗುವುದು. ಈಗೆ ಈ ಅನಾಹುತವಾಗಿರುವ ಬಗ್ಗೆ ತನಿಖೆ ಯಾಗುತ್ತದೆ ಎಂದರು. ತಮಿಳುನಾಡಿನ ಆರೋಗ್ಯ ಸಚಿವರೂ ಆಗಮಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರೂ ಕೂಡ ತಲಾ 3 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ ಎಂದರು.

Previous Post

ಕಾರ್ಕಳ : ಪರಶುರಾಮ ಥೀಂ ಪಾರ್ಕ್‌ ಪ್ರವೇಶಕ್ಕೆ ಅ. 9ರಿಂದ ನವೆಂಬರ್‌ ಅಂತ್ಯದವರೆಗೆ ತಾತ್ಕಾಲಿಕ ತಡೆ..!!

Next Post

ಉಚ್ಚಿಲ : ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ ಉಚ್ಚಿಲ ವತಿಯಿಂದ ಪ್ರತಿಭಾ ಪುರಸ್ಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ : ದಕ್ಷಿಣ ಕನ್ನಡ ಮೋಗವೀರ ಹಿತಸಾಧನಾ ವೇದಿಕೆ ಉಚ್ಚಿಲ ವತಿಯಿಂದ ಪ್ರತಿಭಾ ಪುರಸ್ಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News