Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರಾವಳಿಗೆ ವರದಾನ ವಾಗಬೇಕಿದ್ದ ಸಕ್ಕರೆ ಕಾರ್ಖಾನೆ: ಅವ್ಯವಹಾರದ ಮೂಲಕ ರಾಜ್ಯಾದ್ಯಂತ ಸುದ್ದಿ : ಸುಧೀರ್ ಕುಮಾರ್ ಮುರೊಳ್ಳಿ..!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

⭕️ಉಡುಪಿ ಜಿಲ್ಲೆಯಲ್ಲಿ ಅವ್ಯವಹಾರಗಳ ಸರಮಾಲೆ:

ಬ್ರಹ್ಮಾವರ: ಅ.10: ದೃಶ್ಯ ನ್ಯೂಸ್ : ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಕರಾವಳಿ ಕರ್ನಾಟಕದ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಗುಜರಿ ವಸ್ತುಗಳ ಮಾರಾಟದಲ್ಲಿ ನಡೆದಿದೆ ಎನ್ನಲಾದ 14 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದಲ್ಲಿ ಪ್ರತಿಭಟನಾ ಜಾಥಾ ಹಾಗೂ ಬಹಿರಂಗ ಸಭೆ ಜರಗಿತು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಮುಂಭಾಗದp ರಾಷ್ಟ್ರೀಯ ಹೆದ್ದಾರಿ 66 ರಲ್ಲಿ
ಪ್ರಾರಂಭಗೊಂಡ ಪ್ರತಿಭಟನಾ ಜಾಥಾ, ಹೆದ್ದಾರಿಯಲ್ಲಿ ಸಾಗಿ ಬಂದು ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಸಮಾಪನಗೊಂಡು ಬಳಿಕ ಬೃಹತ್ ಜನಜಾಗೃತಿ ಸಭೆ ನಡೆಸಲಾಯಿತು.

ಪ್ರತಿಭಟನಾ ಜಾಥಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ನಾಯಕ ಪ್ರತಾಪ್‌ಚಂದ್ರ ಶೆಟ್ಟಿ ನೇತೃತ್ವದ ಜಿಲ್ಲಾ ರೈತ ಸಂಘ ಅವಿರತ ಪರಿಶ್ರಮದಿಂದ ಇಡೀ ಹಗರಣವನ್ನು ಬಯಲಿಗೆಳೆದಿದೆ. ಇದೀಗ ಅವರು ಕಾನೂನು ಹೋರಾಟಕ್ಕೂ ಚಾಲನೆ ನೀಡಿದ್ದಾರೆ. ಈ ಹಗರಣವನ್ನು ತಾರ್ಕಿಕ ಅಂತ್ಯ ಮುಟ್ಟಿಸಲು ಕಾಂಗ್ರೆಸ್ ಕಟಿಬದ್ಧವಾಗಿದೆ ಎಂದರು.

ಬಹಿರಂಗ ಪ್ರತಿಭಟನಾ ಸಭೆಯಲ್ಲಿ, ಕೆಪಿಸಿಸಿ ವಕ್ತಾರ ಸುದೀರ್ ಕುಮಾರ್ ಮುರೋಳ್ಳಿ ದಿಕ್ಸೂಚಿ ಭಾಷಣ ಮಾಡಿದರು. ಉಡುಪಿ ಜಿಲ್ಲೆಯಲ್ಲಿ ಅವ್ಯವಹಾರಗಳ ಸರಮಾಲೆ ಕಂಡುಬರುತ್ತಿದೆ, ನಾವು ಈವರೆಗೆ ಕಬ್ಬು, ಸಕ್ಕರೆ, ಬೆಲ್ಲ, ಮಾಂಸ ಮುಂತಾದವನ್ನು ತಿಂದು ಅರಗಿಸಿಕೊಂಡಿದ್ದನ್ನು ನೋಡಿದ್ದೇವೆ. ಆದರೆ ಬ್ರಹ್ಮಾವರದಲ್ಲಿ ಆಡಳಿತ ಮಂಡಳಿ ಕಬ್ಬಿಣವನ್ನೇ ತಿಂದು ಅರಗಿಸಿಕೊಂಡಿದೆ.

ಕಾರ್ಕಳದಲ್ಲಿ ಪರಶುರಾಮನ ವಿಗ್ರಹದ ಕಂಚನ್ನು ತಿಂದು ಅರಗಿಸಿಕೊಂಡಿದ್ದಾರೆ ಎಂದರು. ಕರಾವಳಿ ಜಿಲ್ಲೆಗೆ ವರದಾನ ವಾಗಬೇಕಿದ್ದ ಸಕ್ಕರೆ ಕಾರ್ಖಾನೆ, ಸದ್ಯ ಅಕ್ರಮ ಗುಜರಿ ವ್ಯಾಪಾರದ ಮೂಲಕ ರಾಜ್ಯಾದ್ಯಂತ ಸುದ್ದಿ ಆಗುತ್ತಿರುವುದು ಖೇದಕರ ಎಂದರು.

ಆಸ್ಕರ್ ಫೆರ್ನಾಂಡೀಸ್ ಅವರ ಕನಸಿನ ಕೂಸಾದ ಈ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಕೋಟ್ಯಾಂತರ ರೂ. ಭ್ರಷ್ಟಾ ಚಾರ ರಾಜ್ಯ ಮಟ್ಟದ ಸುದ್ದಿಯಾಗಬೇಕು. ಕಬ್ಬಿಣಕ್ಕೆ ತುಕ್ಕು ಹಿಡಿಯುವುದು ನಮಗೆ ಗೊತ್ತು, ಆದರೆ ಶಿಲೆಕಲ್ಲಿಗೂ ತುಕ್ಕು ಹಿಡಿಯುವು ಇಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಮಾತ್ರ ಕೇಳಿರುವುದು ಎಂದು ವ್ಯಂಗ್ಯವಾಡಿದರು.

14 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆಸಿರುವ ಕಾರ್ಖಾನೆಯ ಆಡಳಿತ ಮಂಡಳಿ ತಕ್ಷಣ ರಾಜಿನಾಮೆ ಕೊಟ್ಟು ನಿರ್ಗಮಿಸಬೇಕು. ಪೊಲೀಸ್ ಠಾಣೆಗೆ ಬರಬೇಕು. ಈ ಕಾರಣಕ್ಕಾಗಿ ಕಾಂಗ್ರೆಸ್ ಜನಪರ ಚಳವಳಿ ನಡೆಸುತ್ತಿದೆ. ಎಂದರು.

ಉಡುಪಿ ಶಾಸಕರಿಗೆ ನಗರಸಭೆಯಲ್ಲಿ ಕುಳಿತು ಅಯುಕ್ತರಿಗೆ ಧಮ್ಕಿ ಹಾಕುವ ತಾಕತ್ತಿದೆ. ಇಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡುವ ತಾಕತ್ತು ಇಲ್ಲವೇ ಎಂದು ಪ್ರಶ್ನಿಸಿದರು. ಈ ಬಗ್ಗೆ ಶಾಸಕರು ಮಾತನಾಡದಿದ್ದರೆ ಕಾರ್ಖಾನೆಯ ಭ್ರಷ್ಟ ಹಣ ಕಳೆದ ವಿಧಾನ ಸಭಾ ಚುನಾವಣೆ ಯಲ್ಲೂ ಬಳಕೆ ಆಗಿದೆ ಎಂದು ನಾವು ಅನಿವಾರ್ಯವಾಗಿ ಹೇಳಬೇಕಾಗುತ್ತದೆ ಎಂದರು.

ಪ್ರತಿಭಟನಾ ಸಭೆಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ ಬೈಂದೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಎಂ.ಎ. ಗಫೂರ್, ಮುನಿಯಾಲು ಉದಯ್‌ ಕುಮಾರ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ವೆರೋನಿಕಾ ಕರ್ನೆಲಿಯೋ, ರೋಶನಿ ಒಲಿವೆರಾ, ಬಿ.ಭುಜಂಗ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ದಿನಕರ ಹೇರೂರು, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Tags: #ಬ್ರಹ್ಮಾವರ#ಸಕ್ಕರೆ ಕಾರ್ಖಾನೆ#ದೃಶ್ಯ ನ್ಯೂಸ್
Previous Post

ಮಾಧ್ಯಮಗಳು ಸತ್ಯ ಸುದ್ದಿ ಬಿತ್ತರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಿದೆ: ಸ್ವರ್ಣ ಭಟ್..!!

Next Post

ಪುತ್ತೂರು:ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತೂರು:ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved