ಹೆಬ್ರಿ: ಅಕ್ಟೋಬರ್: 10: ದೃಶ್ಯ ನ್ಯೂಸ್ : ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಸೀತಾನದಿಯಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಣ್ಣೀರು ನಿವಾಸಿ ವಿಜೇಂದ್ರ ಆಚಾರ್ಯ 24 ವರ್ಷ ಪ್ರಾಯ ಆತ್ಮಹತ್ಯೆಗೆ ಶರಣಾದ ದುರ್ದೈವಿ.
ಈತ ಇಂದು ತನ್ನ ಮನೆಯ ಬಳಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








