Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಗೆ ಉಡುಪಿ ಪ್ರವೇಶಕ್ಕೆ ನಿರ್ಬಂಧ : ಎಸ್ಪಿ ಅರುಣ್ ಕುಮಾರ್..!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ, ಅ.10 : ದೃಶ್ಯ ನ್ಯೂಸ್ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಇಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯದ ಮೂಲಕ ಜಾಮೀನು ಪಡೆದುಕೊಂಡಿರುವ ಶರಣ್‌ ಪಂಪ್‌ವೆಲ್‌ ಗೆ ಯಾವುದೇ ಪೂರ್ವಾನುಮತಿ ಇಲ್ಲದೆ ದ.ಕ. ಜಿಲ್ಲೆ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿತ್ತು. ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ರಥಯಾತ್ರೆಯು ಮಂಗಳೂರಿನಿಂದ ಉಡುಪಿ ಜಿಲ್ಲೆಗೆ ಪ್ರವೇಶಿಸಿದ್ದು, ಸಂಜೆ ಉಡುಪಿ ಎಂಜಿಎಂ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಡಾ.ಅರುಣ್ ಕುಮಾರ್, ನ್ಯಾಯಾಲಯ ನೀಡಿರುವ ಜಾಮೀನಿನಲ್ಲಿನ ಷರತ್ತಿನ ಅನ್ವಯ ಶರಣ್ ಪಂಪ್‌ವೆಲ್ ಅನುಮತಿ ಇಲ್ಲದೆ ದ.ಕ. ಜಿಲ್ಲೆ ಬಿಟ್ಟು ಹೋಗುವಂತಿಲ್ಲ. ಒಂದು ವೇಳೆ ಅದನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಗೆ ಆಗಮಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags: #ಉಡುಪಿ#ನಿರ್ಬಂಧ#ದೃಶ್ಯ ನ್ಯೂಸ್
Previous Post

ಹೆಬ್ರಿ : ಸೀತಾನದಿಯಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..!!

Next Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ, ಪ್ರಾಕ್ಟಿಕಲ್ ಪೀಡಿಯಾಟ್ರಿಕ್ ಆಂಕೊಲಾಜಿ – ರಾಷ್ಟ್ರೀಯ ತರಬೇತಿ ಕಾರ್ಯಾಗಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ, ಪ್ರಾಕ್ಟಿಕಲ್ ಪೀಡಿಯಾಟ್ರಿಕ್ ಆಂಕೊಲಾಜಿ - ರಾಷ್ಟ್ರೀಯ ತರಬೇತಿ ಕಾರ್ಯಾಗಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News